Haveri Accident: ಹಾವೇರಿ ಭೀಕರ ರಸ್ತೆ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು? ಅಲೋಕ್ ಕುಮಾರ್ ಹೇಳಿದ್ದಿಷ್ಟು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ಸಂಭವಿನೀಯ ಕಾರಣಗಳನ್ನು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ಹೇಳಿದ್ದಾರೆ.

Haveri Accident: ಹಾವೇರಿ ಭೀಕರ ರಸ್ತೆ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು? ಅಲೋಕ್ ಕುಮಾರ್ ಹೇಳಿದ್ದಿಷ್ಟು
ಎಡಿಜಿಪಿ ಅಲೋಕ್​ ಕುಮಾರ್​
Follow us
ವಿವೇಕ ಬಿರಾದಾರ
|

Updated on: Jun 28, 2024 | 2:53 PM

ಹಾವೇರಿ, ಜೂನ್​ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು (ಜೂ.28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಅಪಘಾತದ ಕುರಿತು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್​ (Alok Kumar) ಟ್ವೀಟ್​​ ಮಾಡಿ, ಅಪಘಾತದಲ್ಲಿ 13 ಜನರು ಮೃತಪಟ್ಟ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಅಲೋಕ್​ ಕುಮಾರ್​ ಅವರು ಅಪಘಾತಕ್ಕೆ ಸಂಭವನೀಯ ಕಾರಣಗಳನ್ನು ಕೂಡ ತಿಳಿಸಿದ್ದಾರೆ. ತಪ್ಪಾದ ಸ್ಥಳದಲ್ಲಿ ಲಾರಿ ಪಾರ್ಕ್​ ಮಾಡಿರುವುದು, ತಪ್ಪಾಗಿ ಓವರ್‌ಟೇಕಿಂಗ್ ಮಾಡಿರಬಹುದು. ಅತಿಯಾದ ವೇಗ ಅಥವಾ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಿದ್ದಾರೆ. ಅಲ್ಲದೆ ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

ಹಾವೇರಿ ಅಪಘಾತ

ಶಿವಮೊಗ್ಗ ಜಿಲ್ಲೆಯ ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳಾಗಿದ್ದ ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ನಾಗೇಶ್​, ವಿಶಾಲಾಕ್ಷಿ ​ಮತ್ತು ಪುತ್ರ ಆದರ್ಶ್​ ಸೇರಿಂದತೆ 15 ಜನರು ಸೋಮವಾರ (ಜೂ. 24) ರಂದು ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಟಿದ್ದಾರೆ. ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿದ್ದಾರೆ.ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ 4 ಗಂಟೆ ಸುಮಾರಿಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ನಾಗೇಶ್​, ವಿಶಾಲಾಕ್ಷಿ ಮತ್ತು ಆದರ್ಶ ಸೇರಿದಂತೆ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಲ್ಹಾದ್​​ ಜೋಶಿ, ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ