Haveri: 1.30 ಕೋಟಿ ರೂ. ಮೊಟ್ಟೆ ಖರೀದಿ ಹಣ ಬಾಕಿ ಉಳಿಸಿಕೊಂಡ ಸರ್ಕಾರ

ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ವೇತನವೇ ಪಾವತಿಯಾಗಿಲ್ಲ. ಇತ್ತ ಮೊಟ್ಟೆ ಖರೀದಿ ಮಾಡಿದ ಬಾಕಿಯನ್ನೂ ಸರ್ಕಾರ ಕೊಡದೆ ಸತಾಯಿಸುತ್ತಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಹೈರಾಣಾಗಿ‌ ಹೋಗಿದ್ದಾರೆ.

Haveri: 1.30 ಕೋಟಿ ರೂ. ಮೊಟ್ಟೆ ಖರೀದಿ ಹಣ ಬಾಕಿ ಉಳಿಸಿಕೊಂಡ ಸರ್ಕಾರ
ಅಂಗನವಾಡಿ ಕೇಂದ್ರಗಳ ಮೊಟ್ಟೆ ಖರೀದಿ ಹಣ ಬಾಕಿ
Follow us
ವಿವೇಕ ಬಿರಾದಾರ
|

Updated on: Oct 15, 2024 | 2:57 PM

ಹಾವೇರಿ, ಅಕ್ಟೋಬರ್​ 15: ಅಂಗನವಾಡಿ (Anganawadi) ಕಾರ್ಯಕರ್ತೆಯರಿಗೆ ನೀಡಬೇಕಾದ 1.30 ಕೋಟಿ ರೂಪಾಯಿ ಮೊಟ್ಟೆ ಖರೀದಿ ಹಣವನ್ನು ರಾಜ್ಯ ಸರ್ಕಾರ (Karnataka Government) ಬಾಕಿ ಉಳಿಸಿಕೊಂಡಿದೆ. ಈ ವಿಚಾರವಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಫೆಡರೇಶನ್ ಈಗಾಗಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರಿಗೆ ಪತ್ರ ಬರೆದಿದೆ.

“ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಿಲ್ಲ. ಕಳೆದ ಎರಡು ತಿಂಗಳಿಂದ ಮೊಟ್ಟೆ ಹಣ ‌ನೀಡುತ್ತಿಲ್ಲ. ಆದಷ್ಟು ಬೇಗ ಹಣ ಬಿಡುಗಡೆ ಮಾಡಿ. ಇಲ್ಲದಿದ್ದರೇ ಅಂಗನವಾಡಿ ಕೇಂದ್ರ ಮುಚ್ಚುವುದಾಗಿ” ಪತ್ರದಲ್ಲಿ ಹೇಳಿದೆ.

ಹಾವೇರಿ ಜಿಲ್ಲೆಯಲ್ಲಿ 3 ರಿಂದ 6 ವರ್ಷದ ಮಕ್ಕಳು, ಗರ್ಭಿಣಿ ಮಹಿಳೆಯರು, ಬಾಣಂತಿಯರು ಸೇರಿ 1 ಲಕ್ಷ 55 ಸಾವಿರ ಫಲಾನುಭವಿಗಳಿದ್ದಾರೆ. ತಿಂಗಳಿಗೆ ಮೊಟ್ಟೆ ಖರೀದಿಸಲು ಸುಮಾರು 66 ಲಕ್ಷ ರೂಪಾಯಿ ಅನುದಾನ ಬೇಕು. ಈಗ 2 ತಿಂಗಳಿಂದ ಮೊಟ್ಟೆ ಖರೀದಿ ಹಣ ಬಂದಿಲ್ಲ. ಹಾವೇರಿ ಜಿಲ್ಲೆಯೊಂದರಲ್ಲೆ ಸುಮಾರು 1.30 ಕೋಟಿ ರೂಪಾಯಿ ಮೊಟ್ಟೆ ಖರೀದಿ ಹಣ ಬಾಕಿ ನೀಡಬೇಕಿದೆ. ಸರ್ಕಾರ ಕೂಡಲೇ ಬಿಡಗಡೆ ಮಾಡಬೇಕು ಎಂದು ಹಾವೇರಿ ಜಿಲ್ಲಾ ಎಐಟಿಯುಸಿ ಸಂಘಟನೆ ಮುಖಂಡ ಹೊನ್ನಪ್ಪ ಮರೆಮ್ಮನವರ ಆಗ್ರಹಿಸಿದರು.

ಇದನ್ನೂ ಓದಿ: 3 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗದ ರೇಷನ್​​: ಅರೆಹೊಟ್ಟೆಯಲ್ಲಿರುವ ಮಕ್ಕಳು

ಹಾವೇರಿ ಜಿಲ್ಲೆಯಲ್ಲಿ 1921 ಅಂಗನವಾಡಿ ಕಾರ್ಯಕರ್ತೆಯರಿದ್ದಾರೆ. 1835 ಅಂಗನವಾಡಿ ಸಹಾಯಕರಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 11,500 ರೂಪಾಯಿ ಗೌರವ ಧನ ನೀಡಲಾಗುತ್ತಿದೆ. ಅಂಗನವಾಡಿ ಸಹಾಯಕಿಯರಿಗೆ ತಿಂಗಳಿಗೆ 5000 ರೂಪಾಯಿ ಗೌರವ ಧನ ನೀಡಲಾಗುತ್ತಿದೆ. ಮೂರು ತಿಂಗಳ ಗೌರವ ಧನ ಬಾಕಿ ಇದೆ. ಸರ್ಕಾರದ ಗಮನಕ್ಕೆ ತರಲಾಗಿದೆ. ಕೂಡಲೆ ಒಂದು ವಾರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಆಲದರ್ತಿ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆರ ಗೋಳು ಸರ್ಕಾರದ ಕಿವಿಗೆ ಬಿದ್ದಂತಿಲ್ಲ. ಹೀಗೆ ಆದರೆ ಅಂಗನವಾಡಿ ನಡೆಸುವುದು ಕಷ್ಟ ಆಗುತ್ತದೆ. ಹೀಗಾಗಿ ಸರ್ಕಾರ ಸರ್ಕಾರ ಕೂಡಲೇ ಎಚ್ಚತ್ತುಗೊಂಡು ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಿ ಎಂದು ಎಂದು ಅಂಗನವಾಡಿ ಕಾರ್ಯಕರ್ತರು ಆಗ್ರಹಿಸಿದರು.

ವರದಿ: ಅಣ್ಣಪ್ಪ ಬಾರ್ಕಿ ಟಿವಿ 9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು