ಹಾವೇರಿ: ನಿರಂತರ ಮಳೆಗೆ ಒಣಗದ ಬಟ್ಟೆ, ಅಂಬೇಡ್ಕರ್ ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಫಂಗಸ್

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಡೆಂಗ್ಯೂ ಪ್ರಕರಣ ಹೆಚ್ಚಳ ನಡುವೆ ಮತ್ತೊಂದು ತಲೆನೋವು ಶುರುವಾಗಿದೆ. ಹಾವೇರಿ ಜಿಲ್ಲೆಯ ವಸತಿ ನಿಲಯದ ಮಕ್ಕಳು ಫಂಗಸ್​ನಿಂದ ಬಳಲುತ್ತಿದ್ದಾರೆ.

ಹಾವೇರಿ: ನಿರಂತರ ಮಳೆಗೆ ಒಣಗದ ಬಟ್ಟೆ, ಅಂಬೇಡ್ಕರ್ ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಫಂಗಸ್
ಸರ್ಕಾರಿ ವಸತಿ ನಿಲಯ
Follow us
| Updated By: ವಿವೇಕ ಬಿರಾದಾರ

Updated on:Aug 04, 2024 | 1:52 PM

ಹಾವೇರಿ, ಆಗಸ್ಟ್​​ 04: ಹಾವೇರಿ (Haveri) ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ (BR Ambedkar Government Hostel) ವಿದ್ಯಾರ್ಥಿಗಳು (Students) ಫಂಗಸ್​ನಿಂದ (Fungus) ಬಳಲುತ್ತಿದ್ದಾರೆ. ಕಳೆದ 20 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಬಟ್ಟೆ ಒಣಗದೆ ವಸತಿ ನಿಲಯದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹಸಿಯಾದ ಬಟ್ಟೆ ತೊಟ್ಟು ಶಾಲೆಗೆ ತೆರಳುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಮೈಮೇಲೆ ಗುಳ್ಳೆಗಳು ಏಳುತ್ತಿದ್ದು, ಫಂಗಸ್ ಕಾಣಿಸಿಕೊಂಡಿದೆ.

32 ಜನ ವಿದ್ಯಾರ್ಥಿಗಳಲ್ಲಿ ಫಂಗಸ್​​ ಲಕ್ಷಣಗಳು ಕಂಡು ಬಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳಲ್ಲಿ ಗಂಭೀರವಾದ ಫಂಗಸ್ ಲಕ್ಷಣಗಳು ಕಂಡುಬಂದಿವೆ. ಓರ್ವ ವಿದ್ಯಾರ್ಥಿಯನ್ನು ಊರಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳ ಸ್ಥಿತಿ ಕಂಡು ಪೋಷಕರು ಗಾಬರಿಗೊಂಡಿದ್ದಾರೆ.

ಇದನ್ನೂ ಓದಿ: ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರ ಸಾವು

ಸರ್ಕಾರಿ ಶಾಲೆಯ 8 ಮಕ್ಕಳಲ್ಲಿ ಡೆಂಗ್ಯೂ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಗೊಟ್ಟಿಗೆರೆ ಸರ್ಕಾರಿ ಶಾಲೆಯ 8 ಜನ ವಿದ್ಯಾರ್ಥಿಗಳಲ್ಲಿ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆದರೆ ಪೋಷಕರು ಇನ್ನೂ ಸಹಿತ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಶಾಲೆ ಸುತ್ತಮುತ್ತ ಸ್ವಚ್ಚತೆ ಇಲ್ಲ. ಈ ಬಗ್ಗೆ ಬಿಬಿಎಂಪಿಗೂ ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು ಮುಖ್ಯ ಶಿಕ್ಷಕಿ ಬೇಸರ ವ್ಯಕ್ತಪಡಿಸಿದ್ದಾರೆ.

ಗೊಟ್ಟಿಗೆರೆ ಸರ್ಕಾರಿ ಶಾಲಾ ಮಕ್ಕಳಲ್ಲಿ ಡೆಂಗ್ಯೂ ರೋಗ ಕಂಡು ಬಂದ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಬಿಬಿಎಂಪಿಗೆ ಪತ್ರ ಬರೆದಿದ್ದರು. ಇದರಿಂದ ಎಚ್ಚತ್ತ ಬಿಬಿಎಂಪಿ ಅಧಿಕಾರಿಗಳು ಶಾಲಾ ಸುತ್ತಮುತ್ತಲಿನ ಹೋಟೆಲ್, ಗೋದಾಮು ಸೇರಿದಂತೆ ಅಂಗಡಿ ಮಳಿಗೆಗಳಿಗೆ ನೋಟೀಸ್ ಜಾರಿ ಮಾಡಿದ್ದು, ಸ್ವಚ್ಚತೆ ಕಾಪಾಡಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ಪಾಗಿಂಗ್ ಸೇರಿದಂತೆ ನಿತ್ಯ ತ್ಯಾಜ್ಯವನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಈಗಾಗಲೇ ಸ್ವಚ್ಚತೆ ಮಾಡಲಾಗುತ್ತಿದ್ದು, ಪಾಗಿಂಗ್ ಸಹ ಮಾಡಿಸಲಾಗುತ್ತದೆ ಎಂದು ಗೋದಾಮಿನ ವ್ಯವಸ್ಥಾಪಕರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:46 pm, Sun, 4 August 24

ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ