ಮುಖ್ಯಮಂತ್ರಿ ಭೇಟಿಯಾಗಿ ಮನೆ ಮಂಜೂರಾತಿಗೆ ಮನವಿ ನೀಡಲು ಆಗಮಿಸಿದ್ದ ವೃದ್ಧೆಯ ಪರದಾಟ

ಸಾಹಸ ಮಾಡಿ ಬ್ಯಾರಿಕೇಡ್ ಒಳಗೆ ನುಗ್ಗಿ ಭೇಟಿಗೆ ಹೋದರೂ ವೃದ್ಧೆಗೆ ಸಿಗದ ಸಿಎಂ ಭೇಟಿಯ ಅವಕಾಶ ಸಿಗಲಿಲ್ಲ. ಭಾಷಣ ಮುಗಿಸಿದ ಮುಖ್ಯಮಂತ್ರಿಗಳು ವೇದಿಕೆಯಿಂದ ಇಳಿದು ಹೊರಟರೂ ವೃದ್ಧೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಅವಕಾಶ ದೊರೆಯಲಿಲ್ಲ. 

ಮುಖ್ಯಮಂತ್ರಿ ಭೇಟಿಯಾಗಿ ಮನೆ ಮಂಜೂರಾತಿಗೆ ಮನವಿ ನೀಡಲು ಆಗಮಿಸಿದ್ದ ವೃದ್ಧೆಯ ಪರದಾಟ
ಮುಖ್ಯಮಂತ್ರಿಗಳ ಭೇಟಿಗೆ ವೃದ್ಧೆಯ ಪರದಾಟ
Follow us
TV9 Web
| Updated By: guruganesh bhat

Updated on:Sep 01, 2021 | 4:18 PM

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ರಾಜೀವ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿ ಭಾಷಣ ಮಾಡುತ್ತಿದ್ದ ವೇಳೆ ವೃದ್ಧೆಯೊಬ್ಬಳು ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಪರದಾಡಿದ ಘಟನೆ ನಡೆದಿದೆ. ಮನೆ ಇಲ್ಲದ್ದಕ್ಕೆ ಮನೆ ಕೊಡಿಸುವಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ವೃಧ್ಧೆ ಬಂದಿದ್ದಳು. ಮಂಚಿನಕೊಪ್ಪ ಗ್ರಾಮದ 70 ವರ್ಷದ ವೃದ್ಧೆ ಕಮಲಮ್ಮ ಎಂಬ ವೃದ್ಧೆಯೇ ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಿದ್ದ ವೃದ್ಧೆ. ಸಾಹಸ ಮಾಡಿ ಬ್ಯಾರಿಕೇಡ್ ಒಳಗೆ ನುಗ್ಗಿ ಭೇಟಿಗೆ ಹೋದರೂ ವೃದ್ಧೆಗೆ ಸಿಗದ ಸಿಎಂ ಭೇಟಿಯ ಅವಕಾಶ ಸಿಗಲಿಲ್ಲ. ಭಾಷಣ ಮುಗಿಸಿದ ಮುಖ್ಯಮಂತ್ರಿಗಳು ವೇದಿಕೆಯಿಂದ ಇಳಿದು ಹೊರಟರೂ ವೃದ್ಧೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಅವಕಾಶ ದೊರೆಯಲಿಲ್ಲ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಎರಡು ದಿನ ಹಾವೇರಿ ಮತ್ತು ಹುಬ್ಬಳ್ಳಿಗೆ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ನೂತನ ಕಟ್ಟಡಗಳ ಉದ್ಘಾಟನೆ ಕಾರ್ಯ ನೆರವೇರಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ. ಆದರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ. ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧನಾಗಿದ್ದೇನೆ. ಕ್ಷೇತ್ರದ ಬಗೆಗಿನ ನನ್ನ ಕನಸು ನನಸಾಗುವ ಕಾಲ ಬಂದಿದೆ. ಶಿಗ್ಗಾಂವಿ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪದವಿ ಕಾಲೇಜು ಮಾಡುತ್ತೇನೆ. ಗ್ರಾಮ ಪಂಚಾಯತಿಗೆ ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುವೆ. ಜಾತಿಭೇದವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಕ್ಯಾಬಿನೆಟ್​ನಲ್ಲಿ ಪ್ರತಿಭಾವಂತರಿದ್ದಾರೆ. ಅವರೆಲ್ಲರ ಕಾರ್ಯಕ್ಷಮತೆ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ. ಹೊರಗಡೆ ನಾನು ಮುಖ್ಯಮಂತ್ರಿ ಆಗಿರಬಹುದು. ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಅಂತ ತಡಸ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು. ಸಿಎಂ ಬೊಮ್ಮಾಯಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಸಾಥ್ ನೀಡಿದರು.

ರೈತರ ಆದಾಯ ಎರಡು ಪಟ್ಟು ಹೆಚ್ಚಿಸುವ ಕೆಲಸ ಮಾಡುತ್ತಿದ್ದೇನೆ. ಭೂಮಿಯ ಪ್ರಮಾಣ ಕಡಿಮೆ ಆಗುತ್ತಿದೆ. ರೈತರ‌‌ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು. ನಾನು ಸಿಎಂ ಆಗುತ್ತಿದ್ದಂತೆ ರೈತರ ಮಕ್ಕಳಿಗೆ ಶಿಷ್ಯವೇತನ ಕೊಡಬೇಕು ಅಂತಾ ನಿರ್ಧಾರ ಮಾಡಿದೆ. ಈಡಿ ದೇಶದಲ್ಲಿ ಇಂಥಾ ಯೋಜನೆ ಇರುವುದು ಕರ್ನಾಟಕದಲ್ಲಿ ಮಾತ್ರ. ರೈತರಿಗೆ ಇದು ಮಾತ್ರವಲ್ಲದೆ ಬೇರೆ ಬೇರೆ ರೀತಿಯ ತರಬೇತಿ ಕೊಟ್ಟು ಅವರ ಅಭಿವೃದ್ಧಿ ಆಗುವಂತೆ ಮಾಡುತ್ತೇನೆ. ಗ್ರಾಮೀಣ ಪ್ರದೇಶಗಳಲ್ಲಿ ಆರ್​ಸಿಸಿ ಮನೆಗಳು ನೌಕರಿ ಮಾಡುವವರದ್ದು ಮಾತ್ರ ಆಗಿದೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ. ಅಧಿಕಾರಿಗಳು ಬಹಳ ದುಡ್ಡು ಆಗುತ್ತೆ ಅಂದರು. ಅದು ಬಡವರ ದುಡ್ಡು ಅವರಿಗೆ ಕೊಡಲು ನಿಮಗೇನು ಕಷ್ಟ ಅಂದೆ. ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಬರುವ‌ ದಿನಗಳಲ್ಲಿ ಮಾಡಿಕೊಡುತ್ತೇನೆ ಅಂತ ಬೊಮ್ಮಾಯಿ ಹೇಳಿದರು.

ಕೆರೆಗಳಿಗೆ ನೀರು ತುಂಬಿಸುವ ನನ್ನ ಕನಸು ನನಸಾಗಿದೆ ಅಂತ ಬಾಡ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು 37 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಪ್ರಯತ್ನ ಮಾಡುತ್ತಿದ್ದೇನೆ. ಈ ಭಾಗದ ಸಾಮಾನ್ಯರಿಗೂ ಸುಲಭವಾಗಿ ಮರಳು ಸಿಗಬೇಕು ಅಂತ ಅಭಿಪ್ರಾಯಪಟ್ಟರು.

 ಇದನ್ನೂ ಓದಿ: 

30 ತಾಸು ಕೊರೆಯುವ ಚಳಿಯಲ್ಲಿ ನಿಂತು ಅಫ್ಘಾನಿಸ್ತಾನದಲ್ಲಿ ಬೈಡೆನ್ ಜೀವ ಕಾಪಾಡಿದ್ದವಗೆ ವಿಸಾ ಕೊಡಲು ಅಮೆರಿಕ ಮೀನಮೇಷ

ಅಗತ್ಯವಿದ್ದಾಗ ಅಫ್ಘಾನಿಸ್ತಾನದಲ್ಲಿ ನಾವು ಡ್ರೋನ್ ದಾಳಿ ಮುಂದುವರೆಸುತ್ತೇವೆ; ಅಮೆರಿಕ ಎಚ್ಚರಿಕೆ

(Haveri CM Basavaraj Bommai programme old lady came to meet cm to give request grant home)

Published On - 3:59 pm, Wed, 1 September 21