AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಾಮುಕನ ಕಾಟ: ಮಹಿಳೆಯ ಬೆಡ್​ಗೆ ನುಗ್ಗಿ ಅಸಭ್ಯ ವರ್ತನೆ, 10ಕ್ಕೂ ಹೆಚ್ಚು ಮೊಬೈಲ್ ಕಳವು

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಮಲಗಿದ್ದ ಮಹಿಳೆಯ ಪಕ್ಕಕ್ಕೆ ನುಗ್ಗಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆ ಎಚ್ಚೆತ್ತು ಪ್ರತಿರೋಧ ತೋರಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಇದರ ಜೊತೆಗೆ ಒಂದು ವಾರದಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಹಾಗೂ ನಗದು ಕಳುವಾಗಿರುವ ಆರೋಪವೂ ಕೇಳಿಬಂದಿದೆ.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಾಮುಕನ ಕಾಟ: ಮಹಿಳೆಯ ಬೆಡ್​ಗೆ ನುಗ್ಗಿ ಅಸಭ್ಯ ವರ್ತನೆ, 10ಕ್ಕೂ ಹೆಚ್ಚು ಮೊಬೈಲ್ ಕಳವು
ಕಳ್ಳ ಹೊರಗೋಡಿ ಹೋಗುತ್ತಿರುವ ಸಿಸಿಟಿವಿ ಕ್ಯಾಮರಾ ದೃಶ್ಯದ ಸ್ಕ್ರೀನ್​ಗ್ರ್ಯಾಬ್
ಗಣಪತಿ ಶರ್ಮಾ
|

Updated on: Nov 21, 2026 | 10:08 AM

Share

ಮುಖ್ಯಾಂಶಗಳು

  • ಮಧ್ಯರಾತ್ರಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅಪರಿಚಿತ ವ್ಯಕ್ತಿ
  • ಮಹಿಳೆಯ ಪ್ರತಿರೋಧಕ್ಕೆ ಸ್ಥಳದಿಂದ ಪರಾರಿಯಾದ ಆರೋಪಿ
  • ಒಂದು ವಾರದಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಕಳವು

ಹಾವೇರಿ, ನವೆಂಬರ್ 21: ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಹಾವೇರಿ ಜಿಲ್ಲಾಸ್ಪತ್ರೆಯಲ್ಲೇ ರೋಗಿಗಳು ಮತ್ತು ಅವರ ಸಂಬಂಧಿಕರ ಸುರಕ್ಷತೆಗೆ ಧಕ್ಕೆಯಾಗುವಂಥ ಘಟನೆಗಳು ನಡೆಯುತ್ತಿವೆ. ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮಧ್ಯರಾತ್ರಿ ಮಹಿಳೆಯೊಬ್ಬರೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಕೃತ್ಯ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಆಸ್ಪತ್ರೆಯ ಕೊಠಡಿ ಸಂಖ್ಯೆ 109ರಲ್ಲಿ ಈ ಘಟನೆ ನಡೆದಿದೆ. ಮೂರ್ನಾಲ್ಕು ದಿನಗಳ ಹಿಂದೆ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಒಳಗೆ ಪ್ರವೇಶಿಸಿದ್ದಾನೆ. ರೋಗಿಯ ಪಕ್ಕದಲ್ಲೇ ಮಲಗಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡ ಆತ, ಆಕೆಯ ಹಾಸಿಗೆಯೊಳಗೆ ನುಸುಳಿ ಅಸಭ್ಯವಾಗಿ ವರ್ತಿಸಿದ್ದಾನೆ. ನಿದ್ರೆಯಲ್ಲಿದ್ದ ಮಹಿಳೆಯ ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಷ್ಟರಲ್ಲಿ ಎಚ್ಚರಗೊಂಡ ಆಕೆ ಜೋರಾಗಿ ಕಿರುಚಾಡಿದ್ದಾರೆ. ಆತನಿಗೆ ಕೆನ್ನೆಗೆ ಹೊಡೆದು ಪ್ರತಿರೋಧ ತೋರಿದ್ದಾರೆ. ಕೂಡಲೇ ಧೈರ್ಯದಿಂದ ಎದ್ದು ಆರೋಪಿಯನ್ನು ಹಿಡಿಯಲು ಮುಂದಾಗಿದ್ದಾರೆ. ಮಹಿಳೆಯ ಕಿರುಚಾಟ ಮತ್ತು ಗದ್ದಲದಿಂದ ಎಚ್ಚೆತ್ತ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಇಡೀ ಘಟನೆ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಒಂದು ವಾರದಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಕಳವು

ಇದು ಕೇವಲ ಅಸಭ್ಯ ವರ್ತನೆಯ ಪ್ರಕರಣಕ್ಕೆ ಸೀಮಿತವಾಗಿಲ್ಲ. ಕಳೆದ ಒಂದು ವಾರದಿಂದ ಜಿಲ್ಲಾಸ್ಪತ್ರೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಬಂಧಿಕರು ಮಲಗಿದ್ದಾಗ ಅವರ ಮೊಬೈಲ್‌ಗಳನ್ನು ಕಳ್ಳತನ ಮಾಡಲಾಗುತ್ತಿದೆ. ಈವರೆಗೆ 10ಕ್ಕೂ ಹೆಚ್ಚು ಮೊಬೈಲ್‌ಗಳು ಹಾಗೂ ನಗದು ಹಣ ಕಳುವಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆಗೆ ಬರುವ ಸಂಬಂಧಿಕರು ರಾತ್ರಿ ವೇಳೆ ವಾರ್ಡ್‌ಗಳಲ್ಲೇ ಮಲಗುತ್ತಾರೆ. ಇಂತಹ ಸಂದರ್ಭದಲ್ಲಿ ಕಳ್ಳತನದ ಜೊತೆಗೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯೂ ನಡೆದಿರುವುದು ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಇದನ್ನೂ ಓದಿ: ಆಶ್ರಯ ಕೊಟ್ಟಿದ್ದೇ ಮುಳುವಾಯ್ತು: ವೈದ್ಯರ ಮನೆಯಲ್ಲಿ 800 ಗ್ರಾಂ ಚಿನ್ನ ಲೂಟಿ, ಡಬಲ್ ಮರ್ಡರ್‌ಗೆ ಸ್ಕೆಚ್ ಹಾಕಿದ್ದಾಕೆ ಅರೆಸ್ಟ್

ಕಳ್ಳತನದಿಂದ ಮೊಬೈಲ್ ಕಳೆದುಕೊಂಡಿರುವ ಸಂತೋಷ ಎಂಬ ವ್ಯಕ್ತಿಯೂ ಸೇರಿದಂತೆ ಇತರ ಸಂತ್ರಸ್ತರು ಆಸ್ಪತ್ರೆಯಲ್ಲಿನ ಭದ್ರತಾ ಲೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಬೇಕು ಮತ್ತು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಶೀಘ್ರ ಪತ್ತೆಹಚ್ಚಬೇಕು ಎಂದು ಆಗ್ರಹಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ