ಹಾವೇರಿ: ಮದುವೆಯಾಗಲು ಯುವತಿ ಸಿಗದ ಹಿನ್ನೆಲೆ ಮನನೊಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ. ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಮಂಜುನಾಥ ನಾಗನೂರು (36) ಆತ್ಮಹತ್ಯೆ ಮಾಡಿಕೊಂಡ ರೈತ. ಕಳೆದ 7-8 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದ ರೈತ ಮಂಜುನಾಥ ಎಂಬವರಿಗೆ ಯಾರೊಬ್ಬರೂ ಕನ್ಯೆ ನೀಡಲು ಒಪ್ಪುತ್ತಿರಲಿಲ್ಲ. ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ ಎಂದು ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿಂಗಳ ಹಿಂದೆ, ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ ಎಂದು ಬಾಳೆಹಣ್ಣಿನ ಮೇಲೆ ಬರೆದು ರೈತರೊಬ್ಬರು ದೇವರಿಗೆ ಹರಕೆ ಅರ್ಪಿಸಿದ್ದರು. ವಿಜಯನಗರದ ಹಗರಿಬೊಮ್ಮನಹಳ್ಳಿ ತಾಲೂಕು ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವದ ವೇಳೆ ಹರಕೆ ಸಲ್ಲಿಸಿದ್ದರು. ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ
ರಾಜ್ಯದಲ್ಲಿ ರೈತರನ್ನು ಮದುವೆಯಾಗಲು ವಧುವೇ ಸಿಗುತ್ತಿಲ್ಲ. ಈ ಚರ್ಚೆ ಚುನಾವಣೆ ಸಮಯದಲ್ಲೂ ಜೋರಾಗಿಯೇ ನಡೆಯುತ್ತಿತ್ತು. ಪ್ರಚಾರದ ವೇಳೆ ಇದನ್ನು ಪ್ರಸ್ತಾಪಿಸಿದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರ ಮನೆಗೆ ಹುಡುಕಿಕೊಂಡು ಬಂದು ಹೆಣ್ಣು ಕೊಡುವಂತೆ ಮಾಡುವ ಆಶ್ವಾಸನೆ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ