ಹಾವೇರಿ ಪಟಾಕಿ ಅವಘಡ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಈ ಗೋಡೌನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮಾಹಿತಿ ಕಲೆ ಹಾಕಿದ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ಹಾವೇರಿ ಪಟಾಕಿ ಅವಘಡ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಹಾವೇರಿ ಪಟಾಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi

Updated on:Aug 29, 2023 | 11:02 PM

ಹಾವೇರಿ, ಆಗಸ್ಟ್ 29: ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಈ ಗೋಡೌನ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಪಟಾಕಿ ಅವಘಡದ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ಕೂಡಲೆ ಸ್ಥಳಕ್ಕೆ ಹೊಗುವಂತೆ ಜಿಲ್ಲಾ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೆರೆಗೆ ನಿಗದಿಯಾಗಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಶಿವಾನಂದ ಪಾಟೀಲ್, ಬೆಂಗಳೂರಿನಿಂದ ಹಾವೇರಿಗೆ ತೆರಳಿದ್ದಾರೆ. ನಾಳೆ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಪಟಾಕಿ ಅವಘಡ ಸ್ಥಳಕ್ಕೆ ಉಪಸಭಾಧ್ಯಕ್ಷ ರುದ್ರಪ್ಪಾ ಲಮ್ಮಾಣಿ ಭೇಟಿ

ಪಟಾಕಿ ಅವಘಡ ಸ್ಥಳಕ್ಕೆ ಉಪಸಭಾಧ್ಯಕ್ಷ ರುದ್ರಪ್ಪಾ ಲಮ್ಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ನನಗೆ ನಾಲ್ಕು ಗಂಟೆಗೆ ಈ ವಿಷಯ ಗೊತ್ತಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಬಂದಿದ್ದೇನೆ. ನಮ್ಮ ಜಿಲ್ಲೆಯ ಜಿಲ್ಲಾಧಿಕಾರಿ, ಎಸ್​ಪಿ ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.

ಇದನ್ನೂ ಓದಿ: ಹಾವೇರಿ: ಪಟಾಕಿ ಗೋಡೌನ್​ನಲ್ಲಿ ಭಾರೀ ಅಗ್ನಿ ಅವಘಡ, ಕಾಣೆಯಾದ ಮೂವರ ಮೃತ ದೇಹ ಪತ್ತೆ

ಘಟನೆ ಬಗ್ಗೆ ಮುಖ್ಯಮಂತ್ರಿ ಕೂಡ ನನಗೆ ಕರೆ ಮಾಹಿತಿ ಪಡೆದಿದ್ದಾರೆ. ನಾಳೆ ಜಿಲ್ಲಾ ಉಸ್ತುವರಿ ಸಚಿವರು ಭೇಟಿ ನೀಡಲಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಕೂರಿತು ಜಿಲ್ಲಾ ಉಸ್ತುವರಿ ಸಚಿವರು ನಿರ್ಣಯಿಸುತ್ತಾರೆ. ಸದ್ಯ ಮಾಹಿತಿ ಪ್ರಕಾರ ಮೂವರು ಮೃತರಾಗಿದ್ದಾರೆ. ಆಗ್ನಿ ಶಾಮಕ ದಳವದರು ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದರು.

ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಪಟಾಕಿ ಗೋದಾಮಿನಲ್ಲಿ ಪತ್ತೆಯಾಗಿರುವ ಮತ್ತೊಂದು ಮೃತದೇಹ ಪತ್ತೆಯಾಗುವ ಮೂಲಕ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ದ್ಯಾಮಪ್ಪ​​, ರಮೇಶ್ ಬಾರ್ಕಿ, ಶಿವಲಿಂಗ ಅಕ್ಕಿ, ಜಯಣ್ಣ ಮೃತ ದುರ್ದೈವಿಗಳು. ಉಳಿದವರ ಪತ್ತೆಗಾಗಿ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮುಂದುವರಿದಿದೆ. ಪಟಾಕಿ ಗೋದಾಮಿನ ಮೊದಲ ಮಹಡಿಯಲ್ಲಿ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿದೆ.  ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿರುವ ವಸೀಂ, ಶೇರು ಎಂಬವರನ್ನು ಹಾವೇರಿ ಜಿಲ್ಲಾಸ್ಪತ್ರೆಯಿಂದ ದಾವಣಗೆರೆ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ಗೋದಾಮಿನಲ್ಲಿ ವೆಲ್ಡಿಂಗ್‌ ಮಾಡಲು ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Tue, 29 August 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ