AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಬೀದಿಯಲ್ಲಿ ಮಸೀದಿ ಇದೆ ಎಂದು ಮೆರವಣಿಗೆಗೆ ಅವಕಾಶ ನೀಡದ ಪೊಲೀಸರು: ಹಾವೇರಿಯಲ್ಲಿ ಗಣೇಶ ಮೂರ್ತಿ ಮರುಪ್ರತಿಷ್ಠಾಪಿಸಿ ಪ್ರತಿಭಟನೆ

ಮೈಸೂರಿನ ಟಿ ನರಸೀಪುರದಲ್ಲಿ ಮಸೀದಿ ಎದುರು ಗಣೇಶ ಮೂರ್ತಿ ಮೆರವಣಿಗೆ ಮಾಡಬಾರದು ಎಂದು ಇನ್​ಸ್ಪೆಕ್ಟರ್ ಧನಂಜಯ್ ಹೇಳಿದ್ದು ಭಾರೀ ವಿವಾದಕ್ಕೆ ಗ್ರಾಸವಾಗಿತ್ತು. ಇದೀಗ ಹಾವೇರಿಯಲ್ಲಿ ರಾಜಬೀದಿಯಲ್ಲಿ ಮಸೀದಿ ಇದೆ ಎಂಬ ಕಾರಣಕ್ಕೆ ಗಣೇಶ ಮೂರ್ತಿ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದೇ ಇರುವುದು ವಿವಾದಕ್ಕೆ ಗುರಿಯಾಗಿದೆ. ಮುಸ್ಲಿಮರು ವಿರೋಧ ಮಾಡದಿದ್ದರೂ ಪೊಲೀಸರೇ ಅಡ್ಡಿಪಡಿಸುತ್ತಿದ್ದಾರೆ ಎಂದು ಹಿಂದೂಗಳು ಆರೋಪಿಸಿದ್ದಾರೆ.

ರಾಜಬೀದಿಯಲ್ಲಿ ಮಸೀದಿ ಇದೆ ಎಂದು ಮೆರವಣಿಗೆಗೆ ಅವಕಾಶ ನೀಡದ ಪೊಲೀಸರು: ಹಾವೇರಿಯಲ್ಲಿ ಗಣೇಶ ಮೂರ್ತಿ ಮರುಪ್ರತಿಷ್ಠಾಪಿಸಿ ಪ್ರತಿಭಟನೆ
ಹಾವೇರಿಯ ಸವಣೂರಿನಲ್ಲಿ ಗಣೇಶ ಮೂರ್ತಿಗಳನ್ನು ಮರು ಪ್ರತಿಷ್ಠಾಪನೆ ಮಾಡಿರುವುದುImage Credit source: tv9
ಗಣಪತಿ ಶರ್ಮಾ
|

Updated on:Sep 21, 2026 | 8:09 AM

Share

ಮುಖ್ಯಾಂಶಗಳು

  • ಸವಣೂರಲ್ಲಿ ಗಣೇಶ ಮೆರವಣಿಗೆ ಅರ್ಧಕ್ಕೆ ಸ್ಥಗಿತ
  • ರಾಜಬೀದಿಯಲ್ಲಿ ಮೆರವಣಿಗೆಗೆ ಪೊಲೀಸರ ನಿರಾಕರಣೆ
  • ಸಭೆ ನಡೆಸಿ ಮುಂದಿನ ತೀರ್ಮಾನ: ಗಣೇಶ ಉತ್ಸವ ಸಮಿತಿ

ಹಾವೇರಿ, ಸೆಪ್ಟೆಂಬರ್ 21: ರಾಜಬೀದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆ, ಗಣೇಶ ವಿಸರ್ಜನಾ ಮೆರವಣಿಗೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಸಿಂಪಿಗೆ ಗಲ್ಲಿಯಲ್ಲಿ ನಡೆದಿದೆ. ಮುಸ್ಲಿಂ ಸಮುದಾಯದವರು ಯಾವುದೇ ರೀತಿ ವಿರೋಧ ಮಾಡದಿದ್ದರೂ ಪೊಲೀಸರೇ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದು ಹಿಂದೂಗಳು ಆರೋಪಿಸಿದ್ದಾರೆ. ಮೈಸೂರಿನ ಟಿ ನರಸೀಪುರದಲ್ಲಿ ಗಣೇಶ ಮೆರವಣಿಗೆ ಸಂಬಂಧ ಇನ್​​ಸ್ಪೆಕ್ಟರ್ ಧನಂಜಯ ಆಡಿದ್ದ ಮಾತುಗಳು, ನಂತರ ಉದ್ಭವಿಸಿದ್ದ ವಿವಾದದ ಬೆನ್ನಲ್ಲೇ ಹಾವೇರಿಯಲ್ಲಿಯೂ ಪೊಲೀಸರು ಗಣೇಶ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಆರೋಪ ಕೇಳಿಬಂದಿದೆ.

ಹಾವೇರಿಯಲ್ಲಿ ಗಣೇಶ ಮೆರವಣಿಗೆ ವೇಳೆ ಆಗಿದ್ದೇನು?

ರಾತ್ರಿ ಗಣೇಶ ದೇವಸ್ಥಾನದಿಂದ ಕಲಾತಂಡಗಳೊಂದಿಗೆ ಸಂಪ್ರದಾಯಿಕವಾಗಿ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಸುಮಾರು 500 ಮೀಟರ್‌ ದೂರ ಸಾಗಿದ ಬಳಿಕ ರಾಜಬೀದಿಯಲ್ಲಿ ಮೆರವಣಿಗೆಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ. ಈ ವೇಳೆ ಗಣಪತಿ ಉತ್ಸವ ಸಮಿತಿ ಸದಸ್ಯರು ಪೊಲೀಸರ ಮನವೊಲಿಕೆಗೆ ಬಗ್ಗಿಲ್ಲ. ಬಳಿಕ ಮೆರವಣಿಗೆ ಸ್ಥಗಿತಗೊಳಿಸಿ, ಗಣೇಶ ಮೂರ್ತಿಯನ್ನು ವಾಪಸ್‌ ದೇವಸ್ಥಾನಕ್ಕೆ ತೆಗೆದುಕೊಂಡು ಬಂದು ಮರುಪ್ರತಿಷ್ಠಾಪನೆ ಮಾಡಲಾಗಿದೆ.

ಮಸೀದಿ ಇರುವ ಕಾರಣ ಅವಕಾಶ ನಿರಾಕರಣೆ ಎಂದ ಪೊಲೀಸರು

ರಾಜಬೀದಿಯಲ್ಲಿ ಮಸೀದಿ ಇರುವ ಕಾರಣ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ಸಮಿತಿ ಸದಸ್ಯರು ಆರೋಪಿಸಿದ್ದಾರೆ. ಈ ಕುರಿತು ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಅವರು ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದರೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಬೀದಿಯಲ್ಲಿ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಗಣಪತಿ ಉತ್ಸವ ಸಮಿತಿ ಸದಸ್ಯರು ಪಟ್ಟುಹಿಡಿದಿದ್ದಾರೆ. ಕಳೆದ 30 ವರ್ಷಗಳಿಂದ ಜಾತಿ ಭೇದವಿಲ್ಲದೆ ಗಣೇಶ ಹಬ್ಬ ಆಚರಿಸುತ್ತಿದ್ದೇವೆ. ಈಗ ರಾಜಬೀದಿಯಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಸಮುದಾಯದ ವಿರೋಧವಿಲ್ಲ! ಗಲಾಟೆ ಇತಿಹಾಸವೂ ಇಲ್ಲ

ಮುಸ್ಲಿಂ ಸಮುದಾಯದವರು ಗಣೇಶ ಮೂರ್ತಿ ಮೆರವಣಿಗೆಗೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಸವಣೂರಿನಲ್ಲಿ ಈ ಹಿಂದೆ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯಾವುದೇ ಗಲಾಟೆ ನಡೆದಿಲ್ಲ. ಆದರೂ ಪೊಲೀಸರು ರಾಜಬೀದಿಯಲ್ಲಿ ಮೆರವಣಿಗೆ ಬೇಡ ಎಂದು ಹೇಳುತ್ತಿದ್ದಾರೆ ಎಂದು ಸವಣೂರು ಪಟ್ಟಣ ಗಣೇಶ ಉತ್ಸವ ಸಮಿತಿ ಅಧ್ಯಕ್ಷ ಮಹೇಶ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರ ಗಣೇಶ ಗಲಾಟೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪ್ರತಾಪ್ ಸಿಂಹ ವಿರುದ್ಧ ಎಫ್​​ಐಆರ್

ಮೆರವಣಿಗೆ ತಡೆದು ಹಿಂದೂ ಕಾರ್ಯಕರ್ತರನ್ನು ಪ್ರಚೋದಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಭೆ ಕರೆದು ಎಲ್ಲರೊಂದಿಗೆ ಚರ್ಚೆ ನಡೆಸಲಾಗುವುದು. ಬಳಿಕ ಎಲ್ಲಾ ಗಣೇಶ ಮೂರ್ತಿಗಳ ಮೆರವಣಿಗೆಯನ್ನು ರಾಜಬೀದಿಯಲ್ಲಿ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹೇಶ್‌ ತಿಳಿಸಿದ್ದಾರೆ.

ವರದಿ: ಅಣ್ಣಪ್ಪ ಬರ್ಕಿ, ಟಿವಿ9, ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Mon, 21 September 26

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ