ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್

ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ ನಂತರ ಇದೀಗ ಮದ್ರಾಸ್ ಐ ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್
ಹಾವೇರಿಯಲ್ಲಿ ಹೆಚ್ಚುತ್ತಿರುವ ಮದ್ರಾಸ್ ಐ ಪ್ರಕರಣಗಳು
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi

Updated on: Aug 11, 2023 | 3:37 PM

ಹಾವೇರಿ, ಆಗಸ್ಟ್ 11: ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ (Haveri) ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ (Lumpy skin disease) ನಂತರ ಇದೀಗ ಮದ್ರಾಸ್ ಐ (Madras Eye) ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ. ಹೌದು, ಜಿಲ್ಲೆಯಲ್ಲಿ ಮದ್ರಾಸ್ ಐ ಹಾವಳಿ ಹೆಚ್ಚಾಗುತ್ತಿದ್ದು, ಜನರು ಕಂಗೆಟ್ಟಿದ್ದಾರೆ.

ಕೊರೋನಾ ಸಾವು ಪ್ರಕರಣದಲ್ಲಿ ನಂಬರ್ 1 ಆಗಿದ್ದ ಹಾವೇರಿ ಜಿಲ್ಲೆ, ಲಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನಲ್ಲೂ ಅಗ್ರಸ್ಥಾನ ಪಡೆದಿದೆ. ರೈತರ ಆತ್ಮಹತ್ಯೆಯಲ್ಲೂ ಮೊದಲ ಸ್ಥಾನದಲ್ಲಿರುವ ಹಾವೇರಿ ಇದೀಗ ಕಣ್ಣುಬೇನೆ ರೋಗದಲ್ಲೂ ಮುಂದಿದೆ.

ಇದನ್ನೂ ಓದಿ: ಕಳೆದ ಒಂದು ವಾರದಲ್ಲಿ ಕರ್ನಾಟಕದಲ್ಲಿ 40 ಸಾವಿರ ಮದ್ರಾಸ್ ಐ ಪ್ರಕರಣಗಳು ಪತ್ತೆ

ಹೌದು, ಮದ್ರಾಸ್ ಐ ರೋಗದ ಪ್ರಕರಣಗಳು ಇಡೀ ರಾಜ್ಯದಲ್ಲಿ 64,506 ಕೇಸ್​ಗಳು ಇವೆ. ಈ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲೇ ಪತ್ತೆಯಾಗಿದೆ. ಇದು ಹಾವೇರಿ ಜಿಲ್ಲೆಯ ಜನತೆಯ ನಿದ್ದೆಗೆಡಿಸಿದೆ. ಇನ್ನು, ಮದ್ರಾಸ್ ಐ ರೋಗ ಪತ್ತೆ ಪ್ರಕರಣದಲ್ಲಿ ಬೀದರ್​ಗೆ 2ನೇ ಸ್ಥಾನ, ಶಿವಮೊಗ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಮದ್ರಾಸ್ ಐ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿ ವಿಫಲಗೊಂಡಿದೆ. ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುವಂತಾಗಿದೆ. ಸದ್ಯ ಹಾವೇರಿಯಲ್ಲಿ ಮದ್ರಾಸ್ ಐ ರೋಗ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿನ ಒಪಿಡಿ ವಿಭಾಗಕ್ಕೆ ನೂರಾರು ಸಂಖ್ಯೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ