ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹನುಮನಮಟ್ಟಿಯಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಒಂದು ವರ್ಷದಿಂದ ಆವರಣದಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸಂಜೆಯಾದರೆ ವಸತಿ ನಿಲಯದಿಂದ ವಿದ್ಯಾರ್ಥಿಗಳು ಹೊರ ಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ
ಚಿರತೆ ಹಿಡಿಯಲು ಬೋನ್​ ಅಳವಡಿಕೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 04, 2024 | 10:00 PM

ಹಾವೇರಿ, ಜನವರಿ 04: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹನುಮನಮಟ್ಟಿಯಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿದೆ. ಕಳೆದ ಒಂದು ವರ್ಷದಿಂದ ಆವರಣದಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸಂಜೆಯಾದರೆ ವಸತಿ ನಿಲಯದಿಂದ ವಿದ್ಯಾರ್ಥಿಗಳು ಹೊರ ಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. 258 ಎಕರೆ ವಿಸ್ತೀರ್ಣದಲ್ಲಿರುವ ಕೃಷಿ ವಿಶ್ವವಿದ್ಯಾಲಯಲ್ಲಿ ಒಟ್ಟು 208 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇಟ್ಟರು ಚಿರತೆ ಬೋನಿಗೆ ಬಿಳುತ್ತಿಲ್ಲ. ಆವರಣದಲ್ಲಿ ಇರುವ ನಾಯಿ ಚಿಂಕೆ, ಕೃಷ್ಣ ಮೃಗಗಳನ್ನು ಚಿರತೆ ಬೇಟೆ ಆಡುತ್ತಿದೆ. ಆವರಣದಲ್ಲಿ ಇದ್ದ ನಾಲ್ಕು ನಾಯಿ ನಾಪತ್ತೆಯಾಗಿದ್ದು, ಚಿರತೆ ಬೇಟೆಯಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ನಂಜನಗೂಡು ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ವಿಶ್ವವಿದ್ಯಾಲಯ ಆವರಣದಲ್ಲಿ ಕೃಷ್ಣ ಮೃಗವನ್ನು ತಿಂದು ಅರ್ಧ ದೇಹವನ್ನು ಬಿಟ್ಟು ಹೋಗಿದ್ದು, ಇತ್ತೀಚೆಗೆ ಪತ್ತೆ ಆಗಿತ್ತು. ಹಾಗಾಗಿ ವಿದ್ಯಾರ್ಥಿಗಳು ಭಯದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಲಾ ಮಕ್ಕಳು, ರೈತರಲ್ಲಿ ಶುರುವಾಯ್ತು ಚಿರತೆ ಭೀತಿ

ಹಾಸನ: ಜಿಲ್ಲೆಯ ಮಲೆನಾಡಿನಲ್ಲಿ ಕಾಡಾನೆ ಮಾನವ ಸಂಘರ್ಷ ಮಿತಿ ಮೀರಿದೆ. ಎಲ್ಲೆಂದರಲ್ಲಿ ಪ್ರತ್ಯಕ್ಷವಾಗುತ್ತಿದ್ದ ಹಿಂಡಾನೆಗಳು ಬೆಳೆ ಹಾನಿ ಜೊತೆಗೆ ಜೀವ ಭಯ ಸೃಷ್ಟಿಮಾಡಿರುವ ನಡುವೆ ಇದೀಗ ದಿಢೀರ್ ಪ್ರತ್ಯಕ್ಷವಾಗಿರುವ ಚಿರತೆಯೊಂದು ಭೀತಿ ಸೃಷ್ಟಿಸಿತ್ತು. ಸಕಲೇಶಪುರ ತಾಲ್ಲೂಖಿನ ಮಾವಿನಹಳ್ಳಿ, ಹೆನ್ನಲಿ ಸೇರಿ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ಹದಿನೈದು ದಿನಹಳಿಂದ ಓಡಾಡುತ್ತಿರುವ ಚಿರತೆ ಜೀವ ಭಯ ಸೃಷ್ಟಿ ಮಾಡಿತ್ತು.

ಇದನ್ನೂ ಓದಿ: ಮೈಸೂರು: ಪತ್ತೆಯಾದ ಮೂರು ಚಿರತೆ ಮರಿಗಳನ್ನು ತಾಯಿ ಜೊತೆ ಸೇರಿಸಿದ ಅರಣ್ಯ ಸಿಬ್ಬಂದಿ

ಹದಿನೈದು ದಿನಗಳಲ್ಲಿ ಹತ್ತಕ್ಕೂ ಹೆಚ್ಚು ಜಾನುವಾರು ಬಲಿಯಾಗಿದ್ದರೆ, ಹತ್ತಾರು ನಾಯಿಗಳನ್ನ ಬೇಟೆಯಾಡಿ ಕೊಂದು ಹಾಕಿದೆ. ಎರಡು ಕಿಲೋಮೀಟರ್ ನಡೆದೇ ಶಾಲೆ, ಕಾಲೇಜಿಗೆ ಹೋಗಬೇಕಾದ ಮಕ್ಕಳು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದ್ದರೆ, ರೈತರು ತಮ್ಮ ಜಮೀನಿಗೆ ತೆರಳಲು ಆಗದೆ ಭೀತಿಗೊಳಗಾಗಿದ್ದರು.

ಎಲ್ಲಿಯೋ ಸೆರೆಹಿಡಿದು ತಂದ ಚಿರತೆಯನ್ನ ಈ ಜನವಸತಿ ಪ್ರದೇಶಕ್ಕೆ ಬಿಟ್ಟಿದ್ದೇ ಸಮಸ್ಯೆ ತಂದೊಡ್ಡಿದೆ ಎಂದು ಜನರು ಆಕ್ರೋಶ ಹೊರ ಹಾಕಿದ್ದರು. ಅರಣ್ಯ ಇಲಾಖೆಯೇನೋ ಚಿರತೆ ಸೆರೆಗೆ ಪ್ರಯತ್ನ ನಡೆಸಿದೆ ಆದರೆ ಬೋನ್ ಬಳಿ ಬಂದ್ರೂ ಬೋನ್ ಒಳಗೆ ಹೋಗದ ಚಾಲಾಕಿ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದ್ದು ಅನಾಹುತ ನಡೆಯೋ ಮೊದಲು ಚಿರತೆ ಸೆರೆಹಿಡಿಯಿರಿ ಎಂದು ಜನರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ