ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

| Updated By: ಆಯೇಷಾ ಬಾನು

Updated on: Feb 23, 2023 | 12:25 PM

ಸಾಲ ಮಾಡಿ ಮಗಳ ಮದುವೆಯನ್ನ ಮಾಡಿದ್ದ ಪೋಷಕರು, ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನ ನೊಂದ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
Image Credit source: tribuneindia.com
Follow us on

ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಪತಿ ಹನುಮಂತಗೌಡ ಪಾಟೀಲ(54), ಪತ್ನಿ ಲಲಿತಾ ಪಾಟೀಲ(50), ಮಗಳು ನೇತ್ರಾ ಪಾಟೀಲ(22) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಮಾಡಿ ಮಗಳ ಮದುವೆಯನ್ನ ಮಾಡಿದ್ದ ಪೋಷಕರು, ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನ ನೊಂದ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತಗೌಡ ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿದ್ದಾರೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Florida Shootout: ಫ್ಲೋರಿಡಾದಲ್ಲಿ ಶೂಟೌಟ್​, ಓರ್ವ ಪತ್ರಕರ್ತ ಹಾಗೂ 9 ವರ್ಷದ ಬಾಲಕಿ ಬಲಿ

ಪ್ರತಿಭಟನೆಗೆ ಫ್ರೀಡಂ ಪಾರ್ಕ್​ಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ಪ್ರತಿಭಟನೆಗೆ ಬಂದಿದ್ದ ಶಂಕರಪ್ಪ ಬೋರಡ್ಡಿ(47) ಎಂಬ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿನ್ನೆ(ಫೆ.22) ರಾತ್ರಿ ನಡೆದಿದೆ. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕ ಶಂಕರಪ್ಪ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು. ಬಳಿಕ ರೂಂನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿಕ್ಷಕ ಶಂಕರಪ್ಪ ಬೋರಡ್ಡಿ ಮೃತದೇಹ ಊರಿಗೆ ರವಾನಿಸಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Thu, 23 February 23