ಹಾನಗಲ್‌ ಗ್ಯಾಂಗ್ ರೇಪ್ ಕೇಸ್​ ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹಾನಗಲ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ವಿಚಾರದಲ್ಲೂ ರಾಜಕೀಯ ಮಾಡಬಾರದು. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಅಂದ್ರೆ ಸರ್ಕಾರ ಏಕೆ ಇರಬೇಕು ಎಂದು ಪ್ರಶ್ನಿಸಿದ್ದಾರೆ.

ಹಾನಗಲ್‌ ಗ್ಯಾಂಗ್ ರೇಪ್ ಕೇಸ್​ ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2024 | 4:05 PM

ಹಾವೇರಿ, ಜನವರಿ 14: ಜಿಲ್ಲೆಯ ಹಾನಗಲ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಆರೋಪ ಮಾಡಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಪೊಲೀಸರು ಕೆಲಸ ಮಾಡಿದ್ದಾರೆ. ನೀಚ ಘಟನೆ ನಡೆದಿದೆ, ಈ ವಿಚಾರದಲ್ಲೂ ರಾಜಕೀಯ ಮಾಡಬಾರದು. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಅಂದ್ರೆ ಸರ್ಕಾರ ಏಕೆ ಇರಬೇಕು ಎಂದು ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಬಂದಾಗಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಸಮಾಜದ ಒಳತಿಗಾಗಿ ನೊಳಂಬ ವೀರಶೈವ ಸಮಾಜ ಒಗ್ಗಟ್ಟಾಗಿರಬೇಕೆಂದು ಕರೆ ಕೊಟ್ಟ ವಿಜಯೇಂದ್ರ

ರಾಜಕೀಯಕ್ಕಾಗಿ ಕೆಲವರು ಸಮಾಜದಲ್ಲಿ ವಿಷಬೀಜವನ್ನು ಬಿತ್ತುತ್ತಿದ್ದಾರೆ. ನೊಳಂಬ ಸಮಾಜ ಒಗ್ಗಟ್ಟಾಗಿದೆ ಅನ್ನೋದನ್ನು ಕಾರ್ಯಕ್ರಮ ತೋರಿಸ್ತಿದೆ. ಸಮಾಜದ ಒಳಿತಿಗಾಗಿ ನೊಳಂಬ ವೀರಶೈವ ಸಮಾಜ ಒಗ್ಗಟ್ಟಾಗಿರಬೇಕು ಎಂದಿದ್ದಾರೆ.

ಇದನ್ನೂ ಓದಿ: ಹಾನಗಲ್‌ ಗ್ಯಾಂಗ್ ರೇಪ್ ಪ್ರಕರಣ: ಸಂತ್ರಸ್ತ ಮಹಿಳೆಯ ನೆರವಿಗೆ ಧಾವಿಸದ ಕಾಂಗ್ರೆಸ್ ಸರ್ಕಾರ

ಭಾರತ ಅಗ್ರಗಣ್ಯ ದೇಶಗಳ ಸಾಲಿನಲ್ಲಿ ನಿಲ್ಲಬೇಕೆಂಬುದು ಮೋದಿ ಸಂಕಲ್ಪ. ನಮ್ಮನ್ನು ಗುರುತಿಸಬೇಕಾದ್ರೆ ನಾವು ಆರ್ಥಿಕವಾಗಿ ಶಕ್ತಿಯುತವಾಗಿ ಇರಬೇಕು. ಹೀಗಾಗಿ ದೇಶದ ಅಭಿವೃದ್ಧಿ ದೃಷ್ಟಿಯಿಂದ ಯುವಕರು ಒಗ್ಗಟ್ಟಾಗಬೇಕಿದೆ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ನಾನು ಕೂಡ ಖಂಡಿಸುತ್ತೇನೆ: ಸಚಿವ ಶಿವಾನಂದ ಪಾಟೀಲ್

ಪ್ರಕರಣ ವಿಚಾರವಾಗಿ ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಪ್ರಕರಣವನ್ನು ನಾನು ಕೂಡ ಖಂಡಿಸುತ್ತೇನೆ. ಹಾನಗಲ್ ಪೊಲೀಸ್​ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಇದನ್ನೂ ಓದಿ: ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಬೆನ್ನಲ್ಲೇ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಕಿಡ್ನಾಪ್!

ಏಳು ಜನ ಆರೋಪಿಗಳು ಹಾನಗಲ್ ತಾಲೂಕಿನ ಅಕ್ಕಿ ಆಲೂರಿನವರು. ನ್ಯಾಯಾಧೀಶರ ಮುಂದೆ ಸಂತ್ರಸ್ಥ ಮಹಿಳೆ ಹೇಳಿಕೆ ಸಹ ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಹಾವೇರಿ ಸ್​ಪಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೆಲವರು ಟೀಕೆ ಟಿಪ್ಪಣಿ ಮಾಡ್ತಿದ್ದಾರೆ. ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್