AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿಗೆ ಅವರನ್ನೇ ಹೋಲುವ ಗಂಧದ ಮೂರ್ತಿ ಉಡುಗೊರೆ; ಅಂದಾಜು 2 ಲಕ್ಷ ಮೌಲ್ಯದ ಕೊಡುಗೆ ನೀಡಿದ ರಾಣೆಬೆನ್ನೂರು ಪಾಲಿಕೆ

121 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಶಿವಕುಮಾರ ಉದಾಸಿ, ಸಚಿವರಾದ ಬಿ.ಸಿ.ಪಾಟೀಲ್, ಗೋವಿಂದ ಕಾರಜೋಳ ಹಾಗೂ ಭೈರತಿ ಬಸವರಾಜ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾಥ್ ನೀಡಿದರು.

ಸಿಎಂ ಬೊಮ್ಮಾಯಿಗೆ ಅವರನ್ನೇ ಹೋಲುವ ಗಂಧದ ಮೂರ್ತಿ ಉಡುಗೊರೆ; ಅಂದಾಜು 2 ಲಕ್ಷ ಮೌಲ್ಯದ ಕೊಡುಗೆ ನೀಡಿದ ರಾಣೆಬೆನ್ನೂರು ಪಾಲಿಕೆ
ಬಸವರಾಜ ಬೊಮ್ಮಾಯಿ ಮತ್ತು ಉಡುಗೊರೆ ನೀಡಲಾದ ಮೂರ್ತಿ
TV9 Web
| Edited By: |

Updated on:Aug 28, 2021 | 5:07 PM

Share

ಹಾವೇರಿ: ತವರು ಜಿಲ್ಲೆ ಹಾವೇರಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರನ್ನೇ ಹೋಲುವ ಗಂಧದಲ್ಲಿ ರಚಿಸಿದ ಮೂರ್ತಿಯನ್ನು ಉಡುಗೊರೆಯನ್ನಾಗಿ ನೀಡಲಾಗಿದೆ. 18 ಕೆಜಿ ತೂಕದ ಮೂರ್ತಿ ಸಾಕ್ಷಾತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಹೋಲುತ್ತದೆ. ರಾಣೆಬೆನ್ನೂರು ನಗರ ಸಭೆಯ ವತಿಯಿಂದ ಈ ಉಡುಗೊರೆ ನೀಡಲಾಗಿದ್ದು, ಮೂರ್ತಿ ತಯಾರಿಗೆ ಸುಮಾರು 2 ಲಕ್ಷ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಧಧ ಮೂರ್ತಿಯ ಹಿಂಭಾಗದಲ್ಲಿ ಕರ್ನಾಟಕ ಭೂಪಟವನ್ನು ಚಿತ್ರಿಸಲಾಗಿದೆ. 

ರಾಣೆಬೆನ್ನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದ ವೇಳೆ ಅರ್ಪಿಸಿದ ಶಾಸಕ ಅರುಣಕುಮಾರ ಪೂಜಾರ ಹಾಗೂ ನಗರಸಭೆ ಅಧಿಕಾರಿಗಳು ಗಂಧದ ಮೂರ್ತಿಯನ್ನು ಬಸವರಾಜ ಬೊಮ್ಮಾಯಿ ಅವರಿಗೆ ಅರ್ಪಿಸಿದ್ದಾರೆ.  121 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಶಿವಕುಮಾರ ಉದಾಸಿ, ಸಚಿವರಾದ ಬಿ.ಸಿ.ಪಾಟೀಲ್, ಗೋವಿಂದ ಕಾರಜೋಳ ಹಾಗೂ ಭೈರತಿ ಬಸವರಾಜ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾಥ್ ನೀಡಿದರು.

ಕೊವಿಡ್ ಲಸಿಕೆ ವಿತರಣೆ ವೇಗ ಹೆಚ್ಚಳ ನವೆಂಬರ್ ತಿಂಗಳ ಒಳಗಡೆ ಕರ್ನಾಟಕದ ಎಲ್ಲರಿಗೂ ಕೊವಿಡ್ ಮೊದಲ ಡೋಸ್ (Covid Vaccine) ನೀಡಿ ಮುಗಿಸಲಾಗುವುದು. ಸುಮಾರು ಶೇಕಡಾ 60ರಷ್ಟು ಜನರಿಗೆ 2ನೇ ಡೋಸ್ ಲಸಿಕೆಯನ್ನೂ ವಿತರಿಸಲಾಗುವುದು. ಅಲ್ಲದೇ ರಾಜ್ಯದ ಎಲ್ಲ ಸಾರ್ವಜನಿಕ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹಾವೇರಿ ತಾಲೂಕಿನ ಜಂಗಮನಕೊಪ್ಪ ಗ್ರಾಮದಲ್ಲಿ ಮೆಗಾ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ತಿಳಿಸಿದರು.

ರೈತರ ಮಕ್ಕಳ ಶಿಕ್ಷಣದ ಸಮಸ್ಯೆಗಳ ಬಗ್ಗೆ ನಾನು ತಿಳಿದಿದ್ದೇನೆ. ರೈತರ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ್ದನ್ನು ಗಮನಿಸಿಯೇ ರೈತರ ಮಕ್ಕಳಿಗೆ ಶಿಷ್ಯವೇತನ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆ ಜಾರಿ ಮಾಡಿರುವ ಮೊದಲ ರಾಜ್ಯ ನಮ್ಮದಾಗಿದ್ದು, ನನ್ನ ಆಡಳಿತದ ಅವಧಿಯಲ್ಲಿ ಮೊದಲ ಆದ್ಯತೆಯನ್ನು ರಾಜ್ಯದ ರೈತರಿಗೆ ಮತ್ತು ಬಡವರಿಗೆ ನೀಡುತ್ತೇವೆ ಎಂದು ಅವರು ತಿಳಿಸಿದರು. ಮೇಕೆದಾಟು ಯೋಜನೆ ಜಾರಿಯ ಕುರಿತೂ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯಕ್ಕೆ ಹಿನ್ನೆಡೆಯಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾವೇರಿಗೆ ಹೊಂದಿಕೊಂಡಂತೆ 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್​ಶಿಪ್ ನಿರ್ಮಿಸಲು ಕ್ರಮ‌ ಕೈಗೊಳ್ಳುತ್ತೇವೆ. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ಈಗಾಗಲೇ ಕೇಂದ್ರ ಹಣಕಾಸು ಸಚಿವರ ಜತೆ ಚರ್ಚಿಸಿದ್ದೇನೆ. ಹಾವೇರಿ ಜಿಲ್ಲೆ ಸೇರಿದಂತೆ ಮುಂಬರುವ ದಿನಗಳಲ್ಲಿ 5-6 ಜಿಲ್ಲೆಗಳಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಗಡಿ ಭಾಗದ ಕನ್ನಡಿಗರಿಗೆ ಎಲ್ಲ ಅನುಕೂಲ ಮಾಡುತ್ತೇವೆ. ಗಡಿಯಲ್ಲಿನ ಕನ್ನಡಿಗರನ್ನು ಸಂಪೂರ್ಣ ರಕ್ಷಣೆ ಮಾಡುತ್ತೇವೆ ಎಂದು ಸಹ ಅವರು ಅಭಯ ನೀಡಿದರು.

ಇದನ್ನೂ ಓದಿ: 

ಅಮರುಲ್ಲಾ ಸಲೇಹ್: ಅಫ್ಘಾನಿಸ್ತಾನ ಪ್ರತಿರೋಧ ಹೋರಾಟದ ಕೊನೆಯ ಆಸರೆ, ತಾಲಿಬಾನ್-ಪಾಕಿಸ್ತಾನವನ್ನು ಎಂದಿಗೂ ಒಪ್ಪದ ನಾಯಕನೀತ

ಹಸಿವಿನಿಂದ ತತ್ತರಿಸುತ್ತಿದೆ ಅಫ್ಘಾನಿಸ್ತಾನ; ಎಲ್ಲ 34 ಪ್ರಾಂತ್ಯಗಳಲ್ಲಿ ಭೀಕರ ಬರ

(Haveri Ranebennur municipality gifts CM Bommai sandalwood idol looks like to CM Basavaraj Bommai Estimated 2 lakhs)

Published On - 4:21 pm, Sat, 28 August 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು