AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ರಟ್ಟಿಹಳ್ಳಿಯಲ್ಲಿ ಮಸೀದಿ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ

ಮಸೀದಿಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಕಲ್ಲುತೂರಾಟ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

Haveri News: ರಟ್ಟಿಹಳ್ಳಿಯಲ್ಲಿ ಮಸೀದಿ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ
ರಟ್ಟಿಹಳ್ಳಿಯಲ್ಲಿ ಹಿಂದೂ ಕಾರ್ಯಕರ್ತರ ಮೆರವಣಿಗೆ
Ganapathi Sharma
|

Updated on:Mar 14, 2023 | 5:07 PM

Share

ಹಾವೇರಿ: ಮಸೀದಿಯೊಂದರ ಮೇಲೆ ಹಿಂದೂ ಕಾರ್ಯಕರ್ತರು (Hindu Activists) ಕಲ್ಲುತೂರಾಟ (Stone Pelting) ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ (Rattihalli) ಮಂಗಳವಾರ ನಡೆದಿದೆ. 2 ದಿನಗಳ ಹಿಂದೆ ನಡೆದಿದ್ದ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಅಡ್ಡಿ ಮಾಡಲಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಜತೆಗೆ ಇಂದು ನಡೆದ ಹಿಂದೂ ಕಾರ್ಯಕರ್ತರ ಱಲಿ ವೇಳೆ ಕಲ್ಲುತೂರಾಟ ನಡೆದಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಮರ ಮನೆ, ವಾಹನಗಳ ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಹಿಂದೂ ಕಾರ್ಯಕರ್ತರು ಐ20 ಕಾರು, ಓಮ್ನಿ ಕಾರಿನ ಗ್ಲಾಸ್​​​ ಒಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಕೆಲವು ಉರ್ದು ಶಾಲೆಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಘಟನೆಯಿಂದ ಆಘಾತಕ್ಕೊಳಗಾಗಿರುವ ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಕಣ್ಣೀರಿಡುತ್ತಿದ್ದಾರೆ. ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಹಿಂದೂ ಕಾರ್ಯಕರ್ತರು ಥಳಿಸಿದ್ದಾರೆ. ಆಟೋದ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಡೆದಿದ್ದೇನು?

ಹಿಂದೂ ಕಾರ್ಯಕರ್ತರ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವು ಮುಸ್ಲಿಮರು ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಘರ್ಷಣೆ ಸಂಭವಿಸಿದೆ. ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಮಸೀದಿ, ಉರ್ದು ಶಾಲೆಗಳು ಹಾಗೂ ಮುಸ್ಲಿಮರ ಮನೆಗಳ ಮೇಲೆ ಕಲ್ಲುತೂರಾಟ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲೊಂದು ವಿಚಿತ್ರ ಘಟನೆ: ಗರ್ಭಿಣಿ ನಾಯಿಗೆ ರಕ್ತದಾನ ಮಾಡಿದ ಮತ್ತೊಂದು ನಾಯಿ

15 ಜನ ಪೊಲೀಸ್ ವಶಕ್ಕೆ; ಎಸ್​​ಪಿ ಮಾಹಿತಿ

ರಟ್ಟಿಹಳ್ಳಿ ಪಟ್ಟಣದಲ್ಲಿ ಕಲ್ಲು ತೂರಾಟ ಪ್ರಕರಣದ ಬಗ್ಗೆ ಹಾವೇರಿ ಎಸ್​​ಪಿ ಶಿವಕುಮಾರ್ ಗುಣಾರ್ ಪ್ರತಿಕ್ರಿಯೆ ನೀಡಿದ್ದು, 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಯುತ್ತಿದ್ದಾಗ ಅವರು ಮಾರ್ಗಬಿಟ್ಟು ಕಾರಂಜಿ ಸರ್ಕಲ್​ ಬಳಿ ತೆರಳಿದ್ದಾರೆ. ಈ ವೇಳೆ ಕಲ್ಲುತೂರಾಟ ನಡೆದಿದೆ. 8-10 ಮನೆಗಳಿಗೆ ಹಾನಿಯಾಗಿದ್ದು, ಕಾರುಗಳು ಕೂಡಾ ಜಖಂ ಆಗಿದಾವೆ. ಪೋಲಿಸರು ಪರಿಸ್ಥಿತಿಯನ್ನು ಹತೋಟೆಗೆ ತಂದಿದ್ದಾರೆ. ಪ್ರಕರಣ ಸಂಬಂಧ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ; ಬಿಸಿ ಪಾಟೀಲ್ ಪ್ರಶ್ನೆ

ಮಸೀದಿ ಮೇಲೆ ಕಲ್ಲುತೂರಾಟ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರವಾಗಿ ಪೊಲೀಸರಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದ ಅವರು, ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಕಲ್ಲುತೂರಾಟ ಮಾಡಿದ್ದು ತಪ್ಪು. ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ರಾಯಣ್ಣ ಒಬ್ಬ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರ. ಅವರ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಯಾರು ತಪ್ಪು ಮಾಡಿದರೂ ಅದು ತಪ್ಪೇ. ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಸೌಹಾರ್ದಯುತವಾಗಿ ಬಗೆಹರಿಸಬೇಕು; ಸಿದ್ದರಾಮಯ್ಯ

ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಜಗಳವಾಗದ ರೀತಿ ಸೌಹಾರ್ದಯುತವಾಗಿ ಸಂಘರ್ಷವನ್ನು ಬಗೆಹರಿಸಬೇಕು ಎಂದು ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಪೊಲೀಸರು ಶಾಂತಿ ಕಾಪಾಡುವ ಕೆಲಸವನ್ನು ಮಾಡಬೇಕು. ಯಾರೇ ಆಗಲಿ ಕಾನೂನು ಉಲ್ಲಂಘಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Tue, 14 March 23

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ