ಹಾವೇರಿ: ಪ್ರಿನ್ಸಿಪಾಲ್​ ನಿಂದನೆ ಆರೋಪ; ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 29, 2023 | 5:28 PM

ಹಾವೇರಿ ಜಿಲ್ಲೆಯ ಹಾನಗಲ್(Hangal) ತಾಲೂಕಿನ ಎನ್​ಸಿಜೆಸಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಡೊಳ್ಳೆಶ್ವರ ಗ್ರಾಮದ ಅಜ್ಜಿ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ನ.28) ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ.

ಹಾವೇರಿ: ಪ್ರಿನ್ಸಿಪಾಲ್​ ನಿಂದನೆ ಆರೋಪ; ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ
ಮೃತ ವಿದ್ಯಾರ್ಥಿ
Follow us on

ಹಾವೇರಿ, ನ.29: ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ಹಾವೇರಿ ಜಿಲ್ಲೆಯ ಹಾನಗಲ್(Hangal) ತಾಲೂಕಿನ ಎನ್​ಸಿಜೆಸಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆದಿತ್ಯಾ(16) ಮೃತ ವಿದ್ಯಾರ್ಥಿ. ಇವರು ಡೊಳ್ಳೆಶ್ವರ ಗ್ರಾಮದ ಅಜ್ಜಿ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ನ.28) ರಾತ್ರಿ ಅಡಿಕೆ ತೋಟದಲ್ಲಿ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪರೀಕ್ಷೆ ವೇಳೆ ನಕಲು‌ ಪತ್ತೆ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಾಯಚೂರು: ಪರೀಕ್ಷೆ ವೇಳೆ ನಕಲು ಪತ್ತೆಯಾದ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಹಿನ್ನಲೆ ಇದೀಗ ರಾಯಚೂರು ವಿಶ್ವ ವಿದ್ಯಾಲಯ ಕುಲಪತಿ ಹರೀಶ್ ರಾಮಸ್ವಾಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ವಿದ್ಯಾರ್ಥಿನಿ ಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ:ಹಾಸನ: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಬಳಿಕ ರಾಯಚೂರು ವಿವಿ ಕುಲಪತಿ ಮಾತನಾಡಿ ‘ವಿದ್ಯಾರ್ಥಿನಿ ಸ್ಟೇಬಲ್ ಆಗಿದ್ದಾಳೆ. ಶಾಕ್​ನಿಂದ ಚೇತರಿಸಿಕೊಳ್ಳುತ್ತಿದ್ದಾಳೆ. ಸ್ಪೈನಲ್‌ ಕಾರ್ಡ್ ಹಾಗೂ ಕಾಲಿಗೆ ಗಾಯಗಳಾಗಿವೆ. ಸದ್ಯ ವಿದ್ಯಾರ್ಥಿನಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಿದ್ಯಾರ್ಥಿನಿ ಕಾಪಿ ಮಾಡುತ್ತಿದ್ದಾಗ ಸಿಕ್ಕಿ ಹಾಕಿಕೊಂಡಿದ್ದಳು. ಇದಾದ ಕೆಲಹೊತ್ತಲ್ಲೇ ಆಕೆ ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Wed, 29 November 23