Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ

ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ಹಾವೇರಿಯ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆ
ಮೃತದೇಹ ಪತ್ತೆಯಾದ ಸ್ಥಳ
Follow us
TV9 Web
| Updated By: guruganesh bhat

Updated on:Aug 23, 2021 | 9:37 PM

ಹಾವೇರಿ: ಬೆಳಗ್ಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ದುರ್ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದ ಗಂಗಿಬಾವಿ ರಸ್ತೆ ಬಳಿ ಬೆಳಕಿಗೆ ಬಂದಿದೆ. ಮೃತದೇಹ ಶೀಲವಂತ ಸೋಮಾಪುರದ ಕವಿತಾ ಹುಬ್ಬಳ್ಳಿ(20) ಎಂಬ ಪದವಿ ವಿದ್ಯಾರ್ಥಿನಿಯದ್ದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಗ್ಗಾಂವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಿತಾ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದಳು. ಸಂಜೆಯ ವೇಳೆಗೆ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಟ್ರಾಕ್ಟರ್ ನಿಯಂತ್ರಣ ತಪ್ಪಿ ಅಪಘಾತ; ಚಾಲಕ ಸಾವು ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ಒಂದಕ್ಕೆ  ಹಳ್ಳಕ್ಕೆ ಬಿದ್ದ ಚಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಿಡಸನೂರು, ಘಟ್ಟಿಗನೂರು ಗ್ರಾಮಗಳ ನಡುವೆ ನಡೆದಿದೆ. ಘಟ್ಟಿಗನೂರಿನ ಚಾಲಕ ವಿನಾಯಕ ಗುರಿಕಾರ(28) ಸಾವನ್ನಪ್ಪಿದ ಚಾಲಕ. ಇಳಕಲ್ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಡಸನೂರ ಗ್ರಾಮದಲ್ಲಿ ಹೊಲದ ಕೆಲಸಕ್ಕೆ ಟ್ರ್ಯಾಕ್ಟರ್ ಮೂಲಕ ತೆರಳಿದ್ದ ಚಾಲಕ‌ ವಿನಾಯಕ ಮೃತಪಟ್ಟಿದ್ದಾರೆ. ನಿಡಸನೂರಿನಿಂದ ಮರಳಿ ಸ್ವಗ್ರಾಮ ಘಟ್ಟಿಗನೂರಕ್ಕೆ ಬರುವಾಗ ಘಟನೆ ನಡೆದಿದೆ. ಯುವಕ ಇಳಕಲ್ ತಾಲೂಕಿನ ಘಟ್ಟಿಗನೂರು ಗ್ರಾಮದವರು. ಟ್ರ್ಯಾಕ್ಟರ್ ಮಾಲೀಕ ತುರುಮರಿ ಗ್ರಾಮದವರು. ಸ್ಥಳಕ್ಕೆ ಇಳಕಲ್ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೃಹಿಣಿಯ ಮೃತದೇಹ ಪತ್ತೆ ಬೆಂಗಳೂರಿನ ರಾಮಮೂರ್ತಿನಗರದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳ ಮೃತದೇಹ ಪತ್ತೆಯಾಗಿದೆ. 5 ವರ್ಷದ ಹಿಂದೆ ಮಿಥುನ್ ಎಂಬಾತನನ್ನು ಶ್ರುತಿ ಮದುವೆಯಾಗಿದ್ದಳು. ಶ್ರುತಿ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿತ್ತು. ಇದೀಗ ಮಿಥುನ್ ಮನೆಯವರೇ ಕೊಲೆ ಮಾಡಿರುವ ಆರೋಪವನ್ನು ಶ್ರುತಿ ಮನೆಯವರು ಮಾಡಿದ್ದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ? (Haveri Shiggavi degree Student found dead in roadside pit)

Published On - 8:47 pm, Mon, 23 August 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ