AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಡ್ರಾಮಾ ನಂತರ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಜಯ: ಟನ್‌ಗೆ ₹3,225 ದರ ನಿಗದಿ

ಹಾವೇರಿಯಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ 3,600 ರೂಪಾಯಿ ನೀಡುವಂತೆ ಆಗ್ರಹಿಸಿ ರೈತರು ನಡೆಸಿದ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ. ಬರೋಬ್ಬರಿ 14 ಗಂಟೆಗಳ ಮಾತುಕತೆ ಬಳಿಕ ಸಕ್ಕರೆ ಕಾರ್ಖಾನೆ ಮಾಲೀಕರು 3,225 ರೂಪಾಯಿ ದರ ನೀಡಲು ಒಪ್ಪಿದ್ದಾರೆ. ಆದರೂ, ರಿಕವರಿ ಲ್ಯಾಬ್ ಸ್ಥಾಪನೆಗೆ 500 ಕೋಟಿ ಮೀಸಲಿಡಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.

ಹೈಡ್ರಾಮಾ ನಂತರ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಜಯ: ಟನ್‌ಗೆ ₹3,225 ದರ ನಿಗದಿ
ಹಾವೇರಿ ಡಿಸಿ ಕಚೇರಿ ಆವರಣದಲ್ಲಿ ಸೋಮವಾರ ತಡರಾತ್ರಿ ನಡೆದ ಹೈಡ್ರಾಮಾ
ಗಣಪತಿ ಶರ್ಮಾ
|

Updated on: Nov 24, 2026 | 7:14 AM

Share

ಮುಖ್ಯಾಂಶಗಳು

  • 14 ಗಂಟೆಗಳ ಮಾತುಕತೆ ಬಳಿಕ ದರ ನಿಗದಿ
  • ಪ್ರತಿ ಟನ್ ಕಬ್ಬಿಗೆ 3,225 ರೂಪಾಯಿ ಒಪ್ಪಿಗೆ
  • ರಿಕವರಿ ಲ್ಯಾಬ್ ನಿರ್ಮಾಣಕ್ಕೆ ರೈತರ ಆಗ್ರಹ

ಹಾವೇರಿ, ನವೆಂಬರ್ 24: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿಯಲ್ಲಿ ನಡೆಸುತ್ತಿದ್ದ ರೈತರ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದೆ. ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ದರ ನೀಡಬೇಕು ಎಂದು ಪಟ್ಟು ಹಿಡಿದಿದ್ದ ರೈತರು, ಸತತ 14 ಗಂಟೆಗಳ ಸಭೆ ಮತ್ತು ಮಾತುಕತೆ ಬಳಿಕ 3,225 ರೂಪಾಯಿ ದರಕ್ಕೆ ತಾತ್ಕಾಲಿಕ ಒಪ್ಪಿಗೆ ಸೂಚಿಸಿದ್ದಾರೆ. ನಸುಕಿನ ಜಾವ 2 ಗಂಟೆಯವರೆಗೂ ನಡೆದ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಈ ದರ ನೀಡಲು ಒಪ್ಪಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಒಳನುಗ್ಗಿ ಪ್ರತಿಭಟನೆ ನಡೆಸಿದ ರೈತರು

ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿದಂತೆ ಸುಮಾರು 30 ರೈತ ಮುಖಂಡರು ಹಾಗೂ ಮೂರು ಸಕ್ಕರೆ ಕಾರ್ಖಾನೆಗಳ ಮಾಲೀಕರ ನಡುವೆ ಮಾತುಕತೆ ನಡೆಯಿತು. ಆರಂಭದಲ್ಲಿ ಪ್ರತಿ ಟನ್ ಕಬ್ಬಿಗೆ 3,100 ರೂಪಾಯಿಗಿಂತ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದರು. ಇದರಿಂದ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ಮೂಲಕ ಒಳನುಗ್ಗಿ ಪ್ರತಿಭಟನೆ ನಡೆಸಿದರು. ಕೆಲ ರೈತರು ಜಿಲ್ಲಾಧಿಕಾರಿ ಕಚೇರಿ ಎದುರೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಆರನೇ ಸುತ್ತಿನ ಸಭೆಯಲ್ಲಿ ದರ ಅಂತಿಮ

ಐದನೇ ಸುತ್ತಿನ ಸಭೆಯಲ್ಲೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮತ್ತೆ ಆರನೇ ಸುತ್ತಿನ ಮಾತುಕತೆ ನಡೆಸಲಾಯಿತು. ಹಾವೇರಿ ಜಿಲ್ಲೆಯಲ್ಲಿ ಕಬ್ಬಿನ ರಿಕವರಿ ಪ್ರಮಾಣ ಶೇ 9.4ರಷ್ಟಿರುವುದರಿಂದ 3,100 ರೂಪಾಯಿಗಿಂತ ಹೆಚ್ಚು ದರ ನೀಡಲು ಸಾಧ್ಯವಿಲ್ಲ ಎಂದು ಕಾರ್ಖಾನೆ ಮಾಲೀಕರು ವಾದಿಸಿದರು. ಆದರೆ, ಇದಕ್ಕೆ ರೈತ ಮುಖಂಡರು ಒಪ್ಪಲಿಲ್ಲ. ಸತತ ಮಾತುಕತೆಯ ಬಳಿಕ ಪ್ರತಿ ಟನ್ ಕಬ್ಬಿಗೆ 3,225 ರೂಪಾಯಿ ನೀಡಲು ಕಾರ್ಖಾನೆ ಮಾಲೀಕರು ಒಪ್ಪಿಕೊಂಡರು. ರೈತ ಮುಖಂಡ ಚೂನಪ್ಪ ಪೂಜಾರಿ ಅವರು ಈ ದರಕ್ಕೆ ತಾತ್ಕಾಲಿಕ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಿದರು.

ಕಬ್ಬಿನ ತೂಕದಲ್ಲಿ ಮೋಸ, ರಿಕವರಿ ಲ್ಯಾಬ್‌ಗೆ ಆಗ್ರಹ

ಹಾವೇರಿ ಜಿಲ್ಲೆಯಲ್ಲಿ ಕಬ್ಬಿನ ತೂಕ ಮಾಡುವಾಗ ರೈತರಿಗೆ ಮೋಸವಾಗುತ್ತಿದೆ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಆರೋಪಿಸಿದ್ದಾರೆ. ಕಬ್ಬಿನ ರಿಕವರಿ ಪ್ರಮಾಣವನ್ನು ವೈಜ್ಞಾನಿಕವಾಗಿ ಪರಿಶೀಲಿಸಲು ಪ್ರತ್ಯೇಕ ಪ್ರಯೋಗಾಲಯ ಸ್ಥಾಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. ರಿಕವರಿ ಲ್ಯಾಬ್ ನಿರ್ಮಾಣಕ್ಕಾಗಿ 500 ಕೋಟಿ ರೂಪಾಯಿ ಮೀಸಲಿಡಬೇಕು ಹಾಗೂ ಈ ವಿಚಾರವನ್ನು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಇದೇ ವೇಳೆ, ದಾವಣಗೆರೆ ಮತ್ತು ಗದಗ ಜಿಲ್ಲೆಗಳ ಸಕ್ಕರೆ ಕಾರ್ಖಾನೆ ಮಾಲೀಕರು ಹಾವೇರಿಯಲ್ಲಿ ನಿಗದಿಪಡಿಸುವ ದರವನ್ನೇ ತಮ್ಮ ಕಾರ್ಖಾನೆಗಳಲ್ಲೂ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಸಿಎಂ ಜತೆ ಚರ್ಚಿಸಿ ರಿಕವರಿ ಲ್ಯಾಬ್ ನಿರ್ಮಾಣ: ಸಚಿವರು

ಮಾತುಕತೆ ಬಳಿಕ ಪ್ರತಿಕ್ರಿಯಿಸಿದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಪ್ರತಿ ಟನ್ ಕಬ್ಬಿಗೆ 3,225 ರೂಪಾಯಿ ದರಕ್ಕೆ ರೈತರು ತಾತ್ಕಾಲಿಕವಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ರಿಕವರಿ ಲ್ಯಾಬ್ ಸ್ಥಾಪನೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಟನ್​ ಕಬ್ಬಿಗೆ 3500 ರೂ.ಗೆ ಪಟ್ಟು: ವಿಜಯಪುರ – ಬೆಳಗಾವಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ

ಬೆಳಗಾವಿ ಬಳಿಕ ಹಾವೇರಿಯಲ್ಲೂ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದೀಗ ದರ ನಿಗದಿಯಾದ ಹಿನ್ನೆಲೆಯಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಹಾಕಿದ್ದ ದಿಗ್ಬಂಧನವನ್ನು ತೆರವುಗೊಳಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಇರಿಸಿದ್ದ ಕಲ್ಲು, ಕಟ್ಟಿಗೆ ಹಾಗೂ ಮುಳ್ಳಿನ ಬೇಲಿಗಳನ್ನೂ ತೆಗೆದುಹಾಕಿದ್ದಾರೆ. ಆದರೆ, ತಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂದಿನ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9, ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಬೆನ್ನುನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ
ಬೆನ್ನುನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವುದು ಕಾಂಗ್ರೆಸ್​ಗೆ ಮಾರಕ: ರಾಜಣ್ಣ
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವುದು ಕಾಂಗ್ರೆಸ್​ಗೆ ಮಾರಕ: ರಾಜಣ್ಣ
ಶಾಸಕ ಸ್ಥಾನಕ್ಕೆ ರಾಜೀನಾಮೆ: ನುಡಿದಂತೆ ನಡೆದ ನಯನಾ ಮೋಟಮ್ಮ!
ಶಾಸಕ ಸ್ಥಾನಕ್ಕೆ ರಾಜೀನಾಮೆ: ನುಡಿದಂತೆ ನಡೆದ ನಯನಾ ಮೋಟಮ್ಮ!