Haveri: ಅಧಿಕೃತ ಬಿಡುಗಡೆಗೆ ಮುನ್ನವೇ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 09, 2022 | 12:25 PM

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆಯಾಗುವ ಮುನ್ನವೇ ಜಾಲತಾಣದಲ್ಲಿ ವೈರಲ್​ ಆಗಿದೆ.

Haveri: ಅಧಿಕೃತ ಬಿಡುಗಡೆಗೆ ಮುನ್ನವೇ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್
ವೈರಲ್​ ಆಮಂತ್ರಣ ಪತ್ರಿಕೆ
Follow us on

ಹಾವೇರಿ: ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ(Akhila bharata kannada sahitya sammelana) ದ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಜನವರಿ 6, 7, 8ರಂದು ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಮೌನ‌ ವಹಿಸಿದೆ.

ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜನೇವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಜಾಗ ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿದೆ. ಸಮ್ಮೇಳನ ನಡೆಸುವ ಜಾಗದಲ್ಲಿ ಈಗಾಗಲೇ ಸಿದ್ಧತಾ ಕಾರ್ಯಗಳು ಶುರುವಾಗಿದೆ. ಸಮ್ಮೇಳನ ನಡೆಯುತ್ತಿರುವ ಹಾವೇರಿ ಹಲವು ಅಪರೂಪಗಳಿಗೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹಾವೇರಿ ಜಿಲ್ಲೆಯವರು ಹೀಗಾಗಿ ಸಮ್ಮೇಳನದ ಜೊತೆಜೊತೆಗೆ ಹಾವೇರಿ ಕೂಡ ಸಾಕಷ್ಟು ಅಭಿವೃದ್ಧಿ ಆಗುತ್ತದೆ ಎನ್ನುವುದು ಸಾಹಿತಿಗಳು ಹಾಗೂ ಜನರ ನಿರೀಕ್ಷೆ ಆಗಿದೆ.

ಇದನ್ನೂ ಓದಿ: “86ನೇ‌ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಾಗಲು ಆ್ಯಪ್ ಮೂಲಕ ನೊಂದಣಿ ಮಾಡ್ಕೊಳ್ಳಿ”

ಸಮ್ಮೇಳನದ ಪೂರ್ವಭಾವಿಯಾಗಿ ಕೆಲವು ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಭೆಗಳನ್ನು ನಡೆಸಲಾಗಿದೆ. ಈವರೆಗೆ ನಡೆದಿರುವ 85 ಸಮ್ಮೇಳನಗಳಿಗಿಂತಲೂ ವಿಭಿನ್ನವಾಗಿ ಮತ್ತು ವಿಶೇಷವಾಗಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಈ ಮಧ್ಯೆ ಅಧಿಕೃತ ಬಿಡುಗಡೆಯಾಗಬೇಕಿದ್ದ ಆಮಂತ್ರಣ ಪತ್ರಿಕೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ