ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ (Heggappa Deshappa Lamani) ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಲಮಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದ ಲಮಾಣಿ, ಬ್ಯಾಡಗಿ ಕ್ಷೇತ್ರದಿಂದ 1983 ಮತ್ತು 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
Published On - 10:34 pm, Mon, 16 January 23