ಹಾವೇರಿ: ರಾಜ್ಯಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಮಾಡುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ ಜತೆ ಈ ಬಗ್ಗೆ ಚರ್ಚಿಸುವೆ ಎಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿ.ಸಿ.ಪಾಟೀಲ್ ಹೇಳಿದ್ದಾರೆ. 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿದ ಬಿ.ಸಿ.ಪಾಟೀಲ್ ವಿಧಿವಶರಾದ ನಟ ಪುನೀತ್ ರಾಜ್ಕುಮಾರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದ್ರು. ಬಳಿಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು.
ಕೊರೊನಾ ಹಿನ್ನೆಲೆ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿತ್ತು. ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡೋ ಬಗ್ಗೆ ಹೇಳಿದ್ದಾರೆ. ಎರಡು ವರ್ಷಗಳಿಂದ ಅಧಿವೇಶನ ನಡೆದಿಲ್ಲ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು. ಈ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಹಾವೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: Karnataka Rajyotsava 2021 LIVE: ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ
Published On - 10:50 am, Mon, 1 November 21