Mallikarjuna Haveri: MLC ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಹಾವೇರಿ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ

Mallikarjuna Haveri: MLC ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಹಾವೇರಿ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ
ಮಲ್ಲಿಕಾರ್ಜುನ ಹಾವೇರಿ
Follow us
TV9 Web
| Updated By: ಆಯೇಷಾ ಬಾನು

Updated on:Dec 16, 2021 | 1:52 PM

ಹಾವೇರಿ: MLC ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರ ಸೂಚನೆಯಂತೆ ಮಲ್ಲಿಕಾರ್ಜುನನನ್ನ ಹಾವೇರಿ ಜಿಲ್ಲಾಧ್ಯಕ್ಷ ಕಲಕೋಟಿ ಉಚ್ಚಾಟಿಸಿದ್ದಾರೆ.

ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಲ್ಲಿಕಾರ್ಜುನ ಹಾವೇರಿಯನ್ನ ಉಚ್ಛಾಟಿಸಿದ್ದಾರೆ.

ಹಾವೇರಿ ಎಪಿಎಂಸಿ ಅಧ್ಯಕ್ಷನಾಗಿರೋ ಮಲ್ಲಿಕಾರ್ಜುನ ಹಾವೇರಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಿಂತು ಪರಾಭವಗೊಂಡಿದ್ದರು. ಮಲ್ಲಿಕಾರ್ಜುನ, ಬಿಜೆಪಿ ಪಕ್ಷದ ಸದಸ್ಯತ್ವ ಹೊಂದಿದ್ರೂ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

MLC ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಹಾವೇರಿ ಎರಡೂ ರಾಷ್ಟ್ರೀಯ ಪಕ್ಷಗಳ ತಲಾ ಒಬ್ಬೊಬ್ಬ ಅಭ್ಯರ್ಥಿ ಗೆಲುವು ಸಾಧಿಸುವುದು ಖಚಿತ ಅನ್ನುವುದು ಗೊತ್ತಿದ್ದರೂ ಹಾವೇರಿಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಹಾವೇರಿ ಸವಾಲಾಕಿ ಚುನಾವಣೆಗೆ ನಿಂತಿದ್ದರು. ಈ ಮುಂಚೆ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಚುನಾವಣಾ ಕಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸವಾಲೊಡ್ಡಿದ್ದರು. ಅವರನ್ನು ಸೇರಿಸಿ ಒಟ್ಟು 8 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರು. ಆದ್ರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ.

ಇದನ್ನೂ ಓದಿ: Karnataka Crime Update: ಸಚಿವ ಗೋವಿಂದ ಕಾರಜೋಳ ಕಾರು ಅಪಘಾತ, ಹಾವೇರಿ-ಯಾದಗಿರಿಯಲ್ಲಿ ಕಬ್ಬು ಬೆಳೆ ಭಸ್ಮ, ಫೋರೆನ್ಸಿಕ್​ ಲ್ಯಾಬ್​ಗೆ ಉಪಕರಣ

Published On - 1:44 pm, Thu, 16 December 21