AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆ ಬಳಿಕ ಸಂಪುಟ ಪುನಾರಚನೆಗೆ ಚಿಂತನೆ: ಗುಟ್ಟು ಬಿಚ್ಚಿಟ್ಟ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಈ ಮಧ್ಯೆ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಸಂಪುಟ ಪುನಾರಚನೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದಾರೆ. ಈ ಭಾರಿ ತಮಗೂ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಚುನಾವಣೆ ಬಳಿಕ ಸಂಪುಟ ಪುನಾರಚನೆಗೆ ಚಿಂತನೆ: ಗುಟ್ಟು ಬಿಚ್ಚಿಟ್ಟ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್
ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್
ಗಂಗಾಧರ​ ಬ. ಸಾಬೋಜಿ
| Updated By: Digi Tech Desk|

Updated on:Oct 14, 2025 | 5:27 PM

Share

ಹಾವೇರಿ, ಅಕ್ಟೋಬರ್​​ 11: ಕಾಂಗ್ರೆಸ್ (Congress) ಪಾಳಯದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಜ್ವಾಲೆಯಾಗಿ ಧಗಧಗಿಸುತ್ತಿದೆ. ಸಚಿವ ಸಂಪುಟ ಪುನಾರಚನೆ, ಕುರ್ಚಿ ಬದಲಾವಣೆಗೆ ಮುನ್ಸೂಚನೆ ನೀಡುವಂತೆ ಸನ್ನಿವೇಶಗಳು ಪಕ್ಷದಲ್ಲಿ ಕಂಡುಬರುತ್ತಿವೆ. ಈ ಮಧ್ಯೆ ಬಿಹಾರ ಚುನಾವಣೆ ಬಳಿಕ ಸಂಪುಟ ಪುನಾರಚನೆಗೆ ಚಿಂತನೆ ನಡೆದಿದೆ. ಕೆಲ ಸಚಿವರನ್ನು ಕೈಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಳ್ಳಲಾಗುವುದು. ಹೊಸಬರಿಗೆ ಸಚಿವಸ್ಥಾನ ಕೊಡುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ (saleem ahmed) ಸಂಪುಟ ಪುನಾರಚನೆ ಗುಟ್ಟು ಬಿಚ್ಚಿಟ್ಟಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್​ ಮತ್ತು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಆದರೆ ಅಂತಿಮ ತೀರ್ಮಾನ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ನನಗೆ ಅವಕಾಶ ಸಿಗುವ ವಿಶ್ವಾಸವಿದೆ ಎಂದ ಸಲೀಂ ಅಹ್ಮದ್

2023ರಲ್ಲಿ ಸರ್ಕಾರ ರಚನೆಯಾದಾಗಲೇ ನಾನು ಸಂಪುಟದಲ್ಲಿರಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪಟ್ಟಿಯಿಂದ ನನ್ನ ಹೆಸರು ಕೈಬಿಡಲಾಗಿತ್ತು. ಕಳೆದ 43 ವರ್ಷಗಳಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಸಂಪುಟ ಪುನಾರಚನೆ ವೇಳೆ ನನಗೆ ಅವಕಾಶ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಅಪ್ಪ ತ್ಯಾಗ ಮಾಡಿದರೆ ಸಿಗುವ ಸ್ಥಾನ ನನಗೆ ಬೇಡ: ಶಾಸಕಿ ರೂಪಕಲಾ

ಮಗಳು ಸಚಿವೆಯಾದರೆ ನನ್ನ ಸ್ಥಾನ ಬಿಟ್ಟುಕೊಡುತ್ತೇನೆಂಬ ಸಚಿವ ಮುನಿಯಪ್ಪ ಹೇಳಿಕೆಗೆ ಪುತ್ರಿ, ಶಾಸಕಿ ರೂಪಕಲಾ ಪ್ರತಿಕ್ರಿಯಿಸಿದ್ದು, ನಾನು ಅರ್ಹಳಿದ್ದರೆ ಮಾತ್ರ ನನಗೆ ಸ್ಥಾನಮಾನ ಸಿಗಲಿ‌. ಅಪ್ಪ ತ್ಯಾಗ ಮಾಡಿದರೆ ಸಿಗುವ ಸ್ಥಾನ ನನಗೆ ಬೇಡ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅ. 13ಕ್ಕೆ ಔತಣಕೂಟ ಹಿನ್ನೆಲೆ ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ: ಸಿಎಂ ರಾಜಕೀಯ ಲೆಕ್ಕಾಚಾರದ ಬಗ್ಗೆ ಭಾರಿ ಕುತೂಹಲ

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಗ್ರಾಮದಲ್ಲಿ ಮಾತನಾಡಿದ ಅವರು, ಸರ್ಕಾರ ಮಟ್ಟದಲ್ಲಿ ನನಗೆ ಅರ್ಹತೆ ಇದ್ದರೆ ಸಚಿವ ಸ್ಥಾನ ಕೊಡಲಿ. ಯಾರ ತ್ಯಾಗದಿಂದಲೂ ನನಗೆ ಸಚಿವ ಸ್ಥಾನ ಬೇಡ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:49 pm, Sat, 11 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ