ಅಪಘಾತದಲ್ಲಿ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ ನಿಧನ; ಸಿಎಂ ಬೊಮ್ಮಾಯಿ ಸಂತಾಪ

ಪಂಜಾಬ್​ದ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ (23) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ ನಿಧನ; ಸಿಎಂ ಬೊಮ್ಮಾಯಿ ಸಂತಾಪ
Edited By:

Updated on: Oct 02, 2022 | 4:22 PM

ಹಾವೇರಿ: ಪಂಜಾಬ್​ದ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ (23) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಶಿವರಾಜ ಗಂಗಮ್ಮನವರ 2016ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ನಿನ್ನೆ ರಾತ್ರಿ (ಅ.1) ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಯೋಧ ಶಿವರಾಜ ಗಂಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ. ವೀರಯೋಧ ಶಿವರಾಜ್ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಗಣಿಗಾರಿಕೆಯ ಕ್ವಾರಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ಕೊಲ್ಹಾರ ಪಟ್ಟಣದ ಯುಕೆಪಿ ಬಳಿ ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ. ರಾವತ್ ದಳವಾಯಿ(50) ಮೃತ ದುರ್ದೈವಿ. ರಾವತ್ ದಳವಾಯಿ ಕಲ್ಲಿನ ಕ್ವಾರಿಯಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಸ್ನಾನ ಮಾಡಿ ಹಿಂದಿರುಗುವಾಗ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Sun, 2 October 22