ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್; ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ

ಮಮತಾ ಬ್ಯಾನರ್ಜಿ, ದೆಹಲಿಯಿಂದ ಎಎಪಿ ಪಕ್ಷದ ಮುಖಂಡರು ಸಂಪರ್ಕ ಮಾಡಿದ್ದಾರೆ. ನಾವು ಯಾರ ಜೊತೆಗೂ ಕೈ ಜೋಡಿಸಬೇಕು ಎಂದೇನಿಲ್ಲ ಎಂದು ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಹೇಳಿಕೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್; ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ
ಕೋಡಿಹಳ್ಳಿ ಚಂದ್ರಶೇಖರ್
Follow us
TV9 Web
| Updated By: ganapathi bhat

Updated on:Apr 07, 2022 | 1:07 PM

ಹಾವೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ಕರ್ನಾಟಕ ರಾಜ್ಯದಲ್ಲಿ ತತ್ವ ಸಿದ್ದಾಂತಗಳಿಲ್ಲದ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂಧಿಸಿದಿರುವ ಪಕ್ಷಗಳಿವೆ. ಇದೇ ತಿಂಗಳು 21 ರಂದು ಬೆಂಗಳೂರಿನಲ್ಲಿ ನಡೆಯಲಿರೋ ರೈತ ಸಮಾವೇಶದಲ್ಲಿ ಪರ್ಯಾಯ ರಾಜಕಾರಣದ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೆ ಮಮತಾ ಬ್ಯಾನರ್ಜಿ, ದೆಹಲಿಯಿಂದ ಎಎಪಿ ಪಕ್ಷದ ಮುಖಂಡರು ಸಂಪರ್ಕ ಮಾಡಿದ್ದಾರೆ. ನಾವು ಯಾರ ಜೊತೆಗೂ ಕೈ ಜೋಡಿಸಬೇಕು ಎಂದೇನಿಲ್ಲ ಎಂದು ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಹೇಳಿಕೆ ನೀಡಿದ್ದಾರೆ.

ಏಪ್ರೀಲ್ 11 ರಂದು ರಾಜ್ಯ ಕೋರ್ ಕಮಿಟಿ ಸಭೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾವು ಈಗ ಸ್ವತಂತ್ರರಾಗಿದ್ದು, ನಮ್ಮ ಸಿದ್ಧಾಂತಕ್ಕೆ ನಾವು ಬದ್ಧರಾಗಿದ್ದೇವೆ. ಸಿದ್ಧಾಂತಕ್ಕೆ ಧಕ್ಕೆ ಬಾರದಂತೆ ಭ್ರಷ್ಟಾಚಾರ ಮುಕ್ತವಾಗಿ ಚುನಾವಣೆ ಮಾಡುತ್ತೇವೆ, ಗೆಲ್ತೀವಿ ಕೂಡ. ಬೇರೆಯವರಂತೆ ಇಪ್ಪತ್ತು, ಮೂವತ್ತು ಕೋಟಿ, ಹೆಂಡ ಇಟ್ಕೊಂಡು ಚುನಾವಣೆ ಮಾಡೋದಾದ್ರೆ ನಾವು ಕಳ್ಳರೆ ಆಗಬೇಕಾಗುತ್ತೆ. ಬಸವರಾಜ ಬೊಮ್ಮಾಯಿಯವರ ನಾಲ್ವತ್ತು ಫರ್ಸೆಂಟ್ ಸರಕಾರಕ್ಕೆ ನಾವ್ಹೇಗೆ ಪರ್ಯಾಯ ಆಗುತ್ತೇವೆ ಎಂದು ಬಿಜೆಪಿ‌ ಸರಕಾರದ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ ಗರಂ ಆಗಿದ್ದಾರೆ.

ರಾಮನಗರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಾವು ಉತ್ಪಾದನೆ ಮಾಡಲಾಗುತ್ತೆ‌. ಅಲ್ಲಿ ಮಾರುಕಟ್ಟೆ ನಡೆಯೋದೆ ಮುಸ್ಲಿಂರ ಕೈನಲ್ಲಿ. ಅವರು ಬೆಲೆ ಸರಿಯಾಗಿ ಕೊಡೋದಿಲ್ಲ ಅಂತಾನೋ ಅಥವಾ ಮುಸ್ಲಿಂರು ಅನ್ನೋದು ಒಂದೇ ಟಾರ್ಗೆಟಾ? ಸಿಎಂ ಬೊಮ್ಮಾಯಿಯವರೆ ಮಾವು ವಾರ್ಷಿಕ ಬೆಳೆ, ಈ ಬಾರಿ ಫಸಲು ಕಡಿಮೆ ಇದೆ. ಮಾವಿಗೆ ವೈಜ್ಞಾನಿಕ ದರ ನೀಡಿ, ಮಾವಿನ ದರ ಕಡಿಮೆಯಾದ್ರೆ ಸರಕಾರದವರು ಖರೀದಿ ಮಾಡ್ತೀವಿ ಅಂತಾ ಘೋಷಣೆ ಮಾಡಿ. ಅದು ಬಿಟ್ಟು ಬಿಜೆಪಿಯವರು ಇಂಥಾ ಕನಿಷ್ಠವಾದ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಸರಕಾರ ಜನರ ಸಂಕಷ್ಟಕ್ಕೆ ಪರಿಹಾರ ಸೂಚಿಸಬೇಕೆ ಹೊರತು ನೀವೆ ಸಮಸ್ಯೆ ಸೃಷ್ಟಿ ಮಾಡಿ ಅಲ್ಲೋಲ‌ ಕಲ್ಲೋಲ ಮಾಡಬೇಡಿ. ಮನುಷ್ಯ ದ್ವೇಷವನ್ನು ಹುಟ್ಟು ಹಾಕುವುದಾದರೆ ಸರ್ಕಾರವನ್ನು ನೀವೇ ಮಾಡ್ತಾ ಇದ್ದೀರಾ ಬೊಮ್ಮಾಯಿಯವರೆ ಅಥವಾ ವಿರೋಧ ಪಕ್ಷದವರು ಸರಕಾರ ನಡೆಸ್ತಿದ್ದಾರಾ? ಸರಕಾರದ ವಿರುದ್ಧ ಜನರನ್ನು ಸಂಘಟಿಸೋದು ವಿರೋಧ ಪಕ್ಷದವರ ಕೆಲಸ. ಆದರೆ ಸರಕಾರದವರೆ ಈ ಕೆಲಸಕ್ಕೆ ಇಳಿದುಬಿಟ್ಟಿದ್ದೀರಿ. ವೋಟ್ ಪರ್ಸೆಂಟೇಜ್ ಜಾಸ್ತಿ ಆಗುತ್ತೆ ಅಂತಾನಾ? ಇದರಿಂದ ವೋಟ್ ಫರ್ಸೆಂಟೇಜ್ ಜಾಸ್ತಿ ಆಗೋದಿಲ್ಲ. ನಿಮ್ಮ ಬಳಿ ಇಂತಹವೆ ಅಜೆಂಡಾಗಳು ಬಹಳ ಇವೆ ಅಂತಾ ಕೇಳಿದ್ದೇನೆ. ಚುನಾವಣೆ ಬರೋವರೆಗೂ ಇದನ್ನು ಟ್ರಯಲ್ ಮಾಡ್ತಾ ಇರ್ತೀರಿ ಅಂತಾ ಕೇಳಿದ್ದೀನಿ. ನಿಮ್ಮ ಪಕ್ಷದ ಮಾನ ಮರ್ಯಾದೆ ಕಡಿಮೆ ಮಾಡಿಕೊಳ್ಳೋದಕ್ಕೆ ಇಂಥಾ ಕಾರ್ಯಕ್ರಮಗಳನ್ನು ಮುಂದುವರೆಸಿ. ಜನರು ಒಂದು, ಎರಡು ಸುಳ್ಳು ನಂಬ್ತಾರೆ. ಸುಳ್ಳು ಹೇಳೋದೆ ಜಾಯಮಾನ ಆಗಿಬಿಟ್ರೆ ನಿಮ್ಮನ್ನು ಡಸ್ಟ್ ಬಿನ್​ಗೆ ಕಳಿಸಿಬಿಡ್ತಾರೆ. ಇದು ಬಿಜೆಪಿಯವರಿಗೆ ಎಚ್ಚರಿಕೆ ಇರಲಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ವಾರದೊಳಗೆ 3 ಕೃಷಿ ಕಾಯ್ದೆ ವಾಪಸ್ ಪಡೆಯದಿದ್ರೆ ಬಾರುಕೋಲು​ ಚಳುವಳಿ ಮಾಡುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆಡಿಯೋ ಇವೆ; ರೈತ ಸಂಘದ ಕಾರ್ಯಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಗಂಭೀರ ಆರೋಪ

Published On - 1:06 pm, Thu, 7 April 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?