ಕೊರೊನಾ ರೂಪಾಂತರ ಆಗುವ ಲಕ್ಷಣ ಇದೆ; ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ
ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದಾರೆ.
ಹಾವೇರಿ: ಕೊರೊನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ. ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದಾರೆ.
ತಮ್ಮ ಭವಿಷ್ಯ ವಾಣಿಯಿಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಕಳೆದ ಬಾರಿ ಧಾರವಾಡದಲ್ಲಿ ಭವಿಷ್ಯ ನುಡಿದಿದ್ದರು. ಕರ್ನಾಟಕ ರಾಜ್ಯದಲ್ಲಿ ಎದುರಾಗಿದ್ದ ವರುಣನ ಅಬ್ಬರದ ಬಗ್ಗೆ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಇನ್ನೂ ಇದೆ ಮಳೆ ಕಾಟ. ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಧಾರವಾಡದಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು.
ಇನ್ನು ಮಳೆ ಹೆಚ್ಚಾಗುವ ಲಕ್ಷಣ ಇದೆ. ಕಾರ್ತಿಕ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪ ಆಗಿದೆ. ಏನೂ ಮಾಡಲು ಆಗುವುದಿಲ್ಲ. ಅನಾಹುತಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಕ್ರಾಂತಿವರೆಗೂ ಮಳೆ ಇರುತ್ತೆ ಎಂದು ಭವಿಷ್ಯ ನುಡಿದಿದ್ದರು. ಆದ್ರೆ ರಾಜಕೀಯ ಭವಿಷ್ಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.
ಈ ಹಿಂದೆ ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾತರ ಇದೆ. ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ನುಡಿದಿದ್ದರು. ಅಶುಭ ನುಡಿಗಳು ಈಗ ಬೇಡ. ಕುಂಭದಲ್ಲಿ ಗುರುಗ್ರಹ ಅಂದ್ರೆ ತುಂಬುವವು ಕೆರೆ ಕಟ್ಟೆ. ಜಲಗಂಡಾಂತರ ಇನ್ನೂ ಇದೆ. ಏನನ್ನು ಅಶುಭ ನುಡಿಯಬಾರದು. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ ಎಂದು ಕೋಲಾರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಹೇಳಿದ್ದರು.
ಇದನ್ನೂ ಓದಿ: Year Ender 2021: ಕೊವಿಡ್ನಿಂದ ಈ ವರ್ಷ ಚಿತ್ರರಂಗ ಅನುಭವಿಸಿದ ನಷ್ಟ ಅಷ್ಟಿಷ್ಟಲ್ಲ
Published On - 7:36 pm, Fri, 24 December 21