Haveri News: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ನಡೆದಿದೆ.

Haveri News: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು
ಮೃತ ಮಲ್ಲನಗೌಡ ಬಡಗೇರ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ

Updated on:Jul 03, 2023 | 9:53 AM

ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ (Sucide) ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು (Ranebennur) ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಡಿಪೋದಲ್ಲಿ (Bus Depot) ನಡೆದಿದೆ. ಮಲ್ಲನಗೌಡ ಬಡಗೇರ (48) ಮೃತ ಸಾರಿಗೆ ನೌಕರ. ಇನ್ನು ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಹಲಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರೀತಿಸುವಂತೆ ಹಿಂದೆ ಬಿದ್ದು ಯುವಕ, ಬೇಸತ್ತ ಯುವತಿ ಆತ್ಮಹತ್ಯೆ

ಮೈಸೂರು:  ಪ್ರೀತಿಸು ಅಂತ ಹಿಂದೆ ಬಿದಿದ್ದ ಯುವಕನ ಕಿರುಕುಳ ತಾಳಲಾರದೆ  ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.  ಮೈಸೂರು ತಾಲ್ಲೂಕು ಗಣಗರಹುಂಡಿ ಗ್ರಾಮದ ಹರ್ಷಿತಾ (21) ಮೃತ ಯುವತಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು (26) ಪ್ರೀತಿಸು ಅಂತ ಕಿರುಕುಳ ನೀಡುತ್ತಿದ್ದನೆಂದು ಆರೋಪವಿದೆ.

ಪಿಯುಸಿ ಓದಿದ್ದ ಹರ್ಷಿತಾ ಇತ್ತೀಚಿಗೆ ಕಂಪ್ಯೂಟರ್ ಕ್ಲಾಸ್​ಗೆ ಜಾಯಿನ್ ಆಗಿದ್ದಳು. ಹರ್ಷಿತಾಳನ್ನು ಲವ್ ಮಾಡು ಅಂತ ಶಿವು ಹಿಂದೆ ಬಿದ್ದಿದ್ದನಂತೆ. ಆದರೆ ಹರ್ಷಿತಾ ಶಿವುನ ಪ್ರಪೋಸಲ್​ ತಿರಸ್ಕರಿಸಿದ್ದಳು. ಈ ಮಧ್ಯೆ ಹರ್ಷಿತಾ ಮನೆಯವರು ಮದುವೆಗೆ ಸಿದ್ದತೆ ನಡೆಸಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು.

ಇದನ್ನೂ ಓದಿ: ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ದ ಪತಿ, ಕೊಲೆ ಎಂದ ಕುಟುಂಬ

ಈ ಮಾಹಿತಿ ಅರಿತ ಶಿವು ತನ್ನನ್ನು ಪ್ರೀತಿಸಿ ಮದುವೆ ಆಗುವಂತೆ  ಒತ್ತಾಯ ಮಾಡುತ್ತಿದ್ದನಂತೆ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಕೀಟನಾಶಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ತಿಳಿದ ಮನೆಯವರು ಕೂಡಲೆ ಹರ್ಷಿತಾಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತಾ ಸಾವನ್ನಪ್ಪಿದ್ದಾಳೆ.

ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಆರೋಪ ಮಾಡಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಘಟನೆ ನಂತರ ಶಿವು ತಲೆ ಮರೆಸಿಕೊಂಡಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Mon, 3 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ