ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ

ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು ನಿತ್ರಾಣ ಸ್ಥಿತಿಯಲ್ಲಿದ್ದ ಚಿರತೆ ಮೃತಪಟ್ಟ ಘಟನೆ ನಡೆದಿದೆ.

ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು, ಸಾವಿನ ಸುತ್ತ ಅನುಮಾನದ ಹುತ್ತ
ಸಿದ್ದಮ್ಮ ದುರುಗಪ್ಪ ಬಣಗಾರ್, ಚಿರತೆ
Follow us
ಆಯೇಷಾ ಬಾನು
|

Updated on: May 21, 2023 | 1:49 PM

ಹಾವೇರಿ: ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುವುದು ಹೊಸದೇನೂ ಅಲ್ಲ. ಆದ್ರೆ ಆಹಾರ ಹರಸಿಕೊಂಡು ಬರುವ ಈ ಕಾಡುಮೃಗಗಳು ಮನೆಯ ಬಳಿ ಇದ್ದ ಶ್ವಾನ, ದನ-ಕರುಗಳು, ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ. ರಾಜ್ಯದಲ್ಲಿ ಕಾಡುಪ್ರಾಣಿಗಳ ದಾಳಿ ಸಂಖ್ಯೆ ಹೆಚ್ಚಾಗುತ್ತಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು ನಿತ್ರಾಣ ಸ್ಥಿತಿಯಲ್ಲಿದ್ದ ಚಿರತೆ ಮೃತಪಟ್ಟ ಘಟನೆ ನಡೆದಿದೆ.

ಇಂದು ಬೆಳಗ್ಗೆ ಮನೆಯ ಹಿತ್ತಲಿನಲ್ಲಿ ಸಿದ್ದಮ್ಮ ದುರುಗಪ್ಪ ಬಣಗಾರ್(55) ಎಂಬುವರ ಮೇಲೆ ಚಿರತೆ ದಾಳಿ ನಡೆಸಿದ್ದು ಮಹಿಳೆಯ ಮುಖ ಮತ್ತು ಕೈಗಳಿಗೆ ಗಾಯವಾಗಿದೆ. ಇನ್ನು ಚಿರತೆ ಕಂಡ ಅಕ್ಕಪಕ್ಕದ ಮನೆಯವರು ಗಾಬರಿಯಿಂದ ಚಿರತೆ ಮೇಲೆ ದಾಳಿ ನಡೆಸಿದ್ದು ನಿತ್ರಾಣ ಸ್ಥಿತಿಯಲ್ಲಿದ್ದ ಚಿರತೆ ಮೃತಪಟ್ಟಿದೆ. ಮತ್ತೊಂದೆಡೆ ಚಿರತೆಗೆ ಬಾಯಿಯಲ್ಲಿ ಹುಣ್ಣು ಆಗಿದ್ದರಿಂದ ಚಿರತೆ ಮೃತಪಟ್ಟಿರಬಹುದು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಗಾಯಾಳು ಮಹಿಳೆಗೆ ತುಮ್ಮಿನಕಟ್ಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ಇನ್ನು ಇತ್ತೀಚೆಗೆ ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಕರುವಿನ ಕಿರುಚಾಟ ಕೇಳಿದ ಕೆಲ ರೈತರು ದೊಣ್ಣೆಯೊಂದಿಗೆ ಸ್ಥಳಕ್ಕೆ ಬಂದು ಚಿರತೆ ಇರುವುದನ್ನು ಕಂಡು ಆತಂಕಪಟ್ಟಿದ್ದರು. ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಗಸ್ತು ತಿರುಗುತ್ತಿದೆ. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ.

ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿ

ಕೊಡಗು: ಕಿಡಿಗೇಡಿಗಳು ಗುಂಡುಹಾರಿಸಿ 18 ವರ್ಷದ ಹೆಣ್ಣಾನೆಯನ್ನು ಕೊಂದಿರುವ ಘಟನೆ ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಬಾಳುಗೋಡು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳು ಕಳೆದ ರಾತ್ರಿ ಗುಂಡು ಹಾರಿಸಿ ಆನೆ ಕೊಂದಿದ್ದಾರೆ ಎಂದು ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ