ಹಾವೇರಿ ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್: ಸಂಸದ ಬಸವರಾಜ ಬೊಮ್ಮಾಯಿ, ಮುತಾಲಿಕ್ ಆಕ್ರೋಶ
ಸ್ವಾತಿ ಬ್ಯಾಡಗಿ ಹತ್ಯೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡಿಸಿದ್ದು, ಪ್ರೀತಿ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರೀಯವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರ ರಕ್ಷಣೆ ದುರ್ಬಲವಾಗಿದೆ. ಪೊಲೀಸರು ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ನೂರಕ್ಕೆ ನೂರು ಇದು ಲವ್ ಜಿಹಾದ್ ಎಂದು ಮುತಾಲಿಕ್ ಹೇಳಿದ್ದಾರೆ.

ಹಾವೇರಿ, ಮಾರ್ಚ್ 14: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ (kill) ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರೀಯವಾಗಿದ್ದು, ಪೊಲೀಸರ ಭಯ ಇಲ್ಲದಿರುವುದೇ ಇಂತ ಪ್ರಕರಣ ಹೆಚ್ಚಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.
ಈ ಕುರಿತಾಗಿ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ಸ್ವಾತಿ ಭೀಕರ ಹತ್ಯೆ: ಬೆಚ್ಚಿಬೀಳಿಸುವಂತಿದೆ ನಯಾಜ್ನ ಕ್ರೌರ್ಯ, ಸಿಡಿದೆದ್ದ ಹಿಂದೂ ಸಂಘಟನೆಗಳು
ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಘಟನೆ ನಡೆದು ಒಂದು ವಾರ ಕಳೆದರೂ ಈ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ. ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.
ಸಂಸದ ಬಸವರಾಜ ಬೊಮ್ಮಾಯಿ ಟ್ವೀಟ್
ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ.
ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ…
— Basavaraj S Bommai (@BSBommai) March 14, 2025
ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ. ಇದರ ಬಗ್ಗೆ ಪೊಲೀಸರು ನಿಷ್ಠುರವಾಗಿ ಅಪರಾಧಿಗಳನ್ನು ಹಿಡಿದು ಅದರ ಹಿಂದೆ ಇರುವ ಶಕ್ತಿಗಳನ್ನು ಕಡಿವಾಣ ಹಾಕುವುದು ಅತ್ಯಂತ ಅವಶ್ಯ. ಆದರೆ, ಇಂತಹ ಪ್ರಕರಣಗಳು ಕೆಲವೇ ದಿನಗಳಲ್ಲಿ ಅಧಿಕಾರಿಗಳು ಗಾಂಭಿರ್ಯತೆಯಿಂದ ತೆಗೆದುಕೊಳ್ಳದೇ ಮರೆತು ಹೋಗುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನೂರಕ್ಕೆ ನೂರು ಇದು ಲವ್ ಜಿಹಾದ್ ಎಂದ ಮುತಾಲಿಕ್
ಇನ್ನು ವಿಚಾರವಾಗಿ ಹಾವೇರಿ ಎಸ್ಪಿ ಅಂಶು ಕುಮಾರ್ನ್ನು ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಇಂದು ಭೇಟಿ ಮಾಡಿದ್ದಾರೆ. ತೀವ್ರಗತಿಯಲ್ಲಿ ತನಿಖೆ ನಡೆಸಬೇಕು ಎಂದು ಮನವಿ. ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ಇದು ಲವ್ ಜಿಹಾದ್ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: 33 ಸೆಕೆಂಡ್ನಲ್ಲಿ 33 ಲಕ್ಷ ರೂ ಎಗರಿಸಿದ ಖತರ್ನಾಕ್ ಕಳ್ಳರುಳ ಬೆಚ್ಚಿಬಿದ್ದ ಹಾವೇರಿ ಜನ
ಇಬ್ಬರು ಹಿಂದೂ ಹುಡುಗರು ನಯಾಜ್ಗೆ ಸಹಕಾರ ಕೊಟ್ಟಿದ್ದಾರೆ. ಲವ್ ಜಿಹಾದ್ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ಜಾಸ್ತಿ ಆಗುತ್ತಿದೆ. ಇದನ್ನು ನ್ಯಾಯಾಲಯ ಬಹಳ ಗಂಭೀರವಾಗಿ ಪರಿಗಣಿಸಬೇಕು. ಸ್ವಾತಿ ಕುಟುಂಬಕ್ಕೆ ಮುಸ್ಲಿಂ ಸಮಾಜದವರು 10 ಲಕ್ಷ ರೂ ಕೊಡಲಿ. ಸರ್ಕಾರ 25 ಲಕ್ಷ ರೂ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಆರೋಪಿ ಮುಸ್ಲಿಮರು ಅಂದ ತಕ್ಷಣವೇ ಬಚಾವ್ ಮಾಡುತ್ತದೆ. ಹಾಗೇನಾದ್ರೂ ಬಚಾವ್ ಮಾಡಿದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.