AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ಇಲ್ಲದೇ 15 ದಿನಗಳಿಂದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸ್ಥಗಿತ: ದಾನಿಗಳಿಂದ ಅನ್ನದಾನ

ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನೌಕರರಿಗೆ ಸಂಬಳ ನೀಡಲು ಹಣವಿಲ್ಲ, ಪಿಂಚಣಿ ಹಣ ಸಹ ನೀಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಸರ್ಕಾರಿ ಶಾಲೆಗಳಿಗೆ ಅಕ್ಕಿ ಒದಗಿಸಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸುವೆ. ಇದಕ್ಕೆ ಪೂರಕವೆಂಬಂತೆ ಹಾವೇರಿ ಜಿಲ್ಲೆಯಲ್ಲಿ ಒಂದು ಘಟನೆ ನಡೆದಿದೆ.

ಅಕ್ಕಿ ಇಲ್ಲದೇ 15 ದಿನಗಳಿಂದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸ್ಥಗಿತ: ದಾನಿಗಳಿಂದ ಅನ್ನದಾನ
ಮಕ್ಕಳಿಗೆ ಬಿಸಿಯೂಟ ಮಾಡಿಸುತ್ತಿರುವ ಗ್ರಾಮಸ್ಥರು
ಗಂಗಾಧರ​ ಬ. ಸಾಬೋಜಿ
|

Updated on:Nov 19, 2026 | 4:21 PM

Share

ಮುಖ್ಯಾಂಶಗಳು

  • ಮಧ್ಯಾಹ್ನದ ಬಿಸಿ ಊಟಕ್ಕೆ ಅಕ್ಕಿ ಸರಬರಾಜು ಮಾಡದ ಅಧಿಕಾರಿಗಳು
  • ಅಕ್ಕಿ ಇಲ್ಲದೆ 15 ದಿನಗಳಿಂದ ಬಿಸಿ ಊಟ ಬಂದ್ ಮಾಡಿದ್ದ ಶಿಕ್ಷಕರು
  • ವಿಷಯ ತಿಳಿದು ಶಾಲೆಗೆ 4 ಕ್ವಿಂಟಾಲ್ ಅಕ್ಕಿ ದಾನ ನೀಡಿದ ಗ್ರಾಮಸ್ಥರು

ಹಾವೇರಿ, ನವೆಂಬರ್​​ 19: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಅಕ್ಕಿ ಸರಬರಾಜು ಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ 15 ದಿನಗಳಿಂದ ಬಿಸಿಯೂಟ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಸ್ವತಃ ನಾಲ್ಕು ಕ್ವಿಂಟಾಲ್ ಅಕ್ಕಿ ದಾನ ನೀಡಿ ಮಕ್ಕಳಿಗೆ ಬಿಸಿಯೂಟ ವ್ಯವಸ್ಥೆ ಮಾಡಿರುವಂತಹ ಅಪರೂಪದ ಘಟನೆಯೊಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಳ್ಳಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಅಕ್ಕಿ ಇಲ್ಲದೆ 15 ದಿನಗಳಿಂದ ಬಿಸಿ ಊಟ ಬಂದ್ ಮಾಡಿದ್ದ ಶಿಕ್ಷಕರು

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಳ್ಳಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸುಮಾರು 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಬಿಸಿಯೂಟಕ್ಕೆ ಅಗತ್ಯವಿರುವ ಅಕ್ಕಿಯನ್ನು ಅಧಿಕಾರಿಗಳು ಸರಬರಾಜು ಮಾಡದ ಹಿನ್ನೆಲೆ ಕಳೆದ 15 ದಿನಗಳಿಂದ ಅಕ್ಕಿಯ ಕೊರತೆ ಎದುರಾಗಿತ್ತು. ಇದರಿಂದ ಬಿಸಿಯೂಟ ಬಂದ್ ಮಾಡುವ ನಿರ್ಧಾರಕ್ಕೆ ಶಿಕ್ಷಕರು ಮುಂದಾಗಿದ್ದರು.

ಇದನ್ನೂ ಓದಿ: ಕೊಪ್ಪಳ: ಬಿಸಿಯೂಟ ತಯಾರಕಾ ಮಹಿಳೆಯರಿಂದ ಪ್ರತಿಭಟನೆ; ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಯತ್ನ

ಈ ವಿಷಯ ತಿಳಿದ ಗ್ರಾಮಸ್ಥರು ಮಕ್ಕಳಿಗೆ ಬಿಸಿಯೂಟ ನಿಲ್ಲಬಾರದು ಎಂಬ ಉದ್ದೇಶದಿಂದ ನಾಲ್ಕು ಕ್ವಿಂಟಾಲ್ ಅಕ್ಕಿಯನ್ನು ದಾನವಾಗಿ ನೀಡಿದ್ದಾರೆ. ಕಳೆದ 15 ದಿನಗಳಿಂದ ಗ್ರಾಮಸ್ಥರೇ ಅಕ್ಕಿ ದಾನ ಮಾಡುವ ಮೂಲಕ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಮುಂದುವರಿಯುವಂತೆ ಮಾಡಿದ್ದಾರೆ. ಅಧಿಕಾರಿಗಳು ಮಾಡಬೇಕಾದ ಕೆಲಸವನ್ನು ಗ್ರಾಮಸ್ಥರೇ ಮುಂದೆ ನಿಂತು ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

LIVE TV

ಬರದ ನಡುವೆ ಅಕ್ಕಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಸಿಹಿ ಸುದ್ದಿ

ರಾಯಚೂರಿನಲ್ಲಿ ಅಕ್ಕಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಸೋನಾ ಮಸೂರಿ ಅಕ್ಕಿಯ ದರದಲ್ಲಿ ಭಾರೀ ಇಳಿಕೆಯಾಗಿದ್ದು, ಕೆಜಿಗೆ ಸುಮಾರು 10ರಿಂದ 20 ರೂ.ವರೆಗೆ ಕಡಿಮೆಯಾಗಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ಕೆಜಿಗೆ 80ರಿಂದ 90 ರೂ.ವರೆಗೆ ಮಾರಾಟವಾಗುತ್ತಿದ್ದ ಅಕ್ಕಿ, ಇದೀಗ 65ರಿಂದ 70 ರೂ. ಕಡಿಮೆಯಾಗಿದೆ. ಭತ್ತದ ಪೂರೈಕೆ ಕುಸಿದಿದ್ದರಿಂದ ಅಕ್ಕಿ ದರ ಏರಿಕೆಯಾಗಿತ್ತು. ಆದರೆ ಇದೀಗ ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಭತ್ತದ ಪೂರೈಕೆ ಹೆಚ್ಚಾಗಿದ್ದು, ಭತ್ತದ ಕಟಾವು ಮುಗಿದು ಮಿಲ್‌ಗಳಿಗೆ ಭತ್ತ ಬರುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ದರ ಏಕಾಏಕಿ ಇಳಿಕೆಯಾಗಿದೆ. ಈ ಹಿಂದೆ ಕ್ವಿಂಟಲ್ ಅಕ್ಕಿಗೆ 8,500 ರೂಪಾಯಿ ಇದ್ದ ದರ ಇದೀಗ 6,500 ರೂಪಾಯಿಗೆ ಇಳಿದಿದೆ. ಅಂದರೆ ಕ್ವಿಂಟಲ್‌ಗೆ ಬರೋಬ್ಬರಿ 2,000 ರೂ ಕಡಿಮೆಯಾಗಿದ್ದು, ಅಕ್ಕಿ ಖರೀದಿಸುವ ಗ್ರಾಹಕರಿಗೆ ತುಸು ನಿರಾಳತೆ ಸಿಕ್ಕಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Thu, 19 November 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು
ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು