AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಹೋಗ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ PWD ಸಚಿವ ಸತೀಶ್ ಜಾರಕಿಹೊಳಿ,ಯಾರು ಹೋಗುತ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ. ಹೋಗುವ ಮನಸಿದ್ದರೆ ತಡೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ BJPಗೆ ಹೋಗಿದ್ದಾರೆ. ಮುಂದೆ ಯಾರು ಹೋಗುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಅವರು ಮಾತನಾಡಿದ್ದಾರೆ.

ಯಾರು ಹೋಗ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 27, 2024 | 10:19 PM

Share

ಹಾವೇರಿ, ಜನವರಿ 27: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಘರ್​ವಾಪ್ಸಿ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಮಾತು ಕೇಳಿಬರುತ್ತಿದೆ. ಸದ್ಯ ಈ ವಿಚಾರವಾಗಿ ನಗರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ PWD ಸಚಿವ ಸತೀಶ್ ಜಾರಕಿಹೊಳಿ, ಯಾರು ಹೋಗುತ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ. ಹೋಗುವ ಮನಸಿದ್ದರೆ ತಡೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ BJPಗೆ ಹೋಗಿದ್ದಾರೆ. ಮುಂದೆ ಯಾರು ಹೋಗುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಎಲ್ಲರು ಇರುತ್ತಾರೆ ಅನ್ನೋ ಆಶಾಭಾವನೆ ಅಷ್ಟೇ ನಮ್ಮದು. ನಮ್ಮದೇ ಪಕ್ಷವಿದೆ, ನಮ್ಮದೇ ಆದ ವೋಟ್ ಬ್ಯಾಂಕ್ ಇದೆ. ನಮ್ಮ ಸ್ವಂತ ಶಕ್ತಿಯಿಂದ ರಾಜ್ಯದಲ್ಲಿ ಗೆದ್ದಿದ್ದೇವೆ. ಅವರಿಂದ ಅಧಿಕಾರಕ್ಕೆ ಬಂತು, ಇವರಿಂದ ಬಂತು ಅಂತ ಹೇಳಲಿಕ್ಕೆ ಆಗಲ್ಲ, ಪಕ್ಷದಿಂದ ಗೆದ್ದಿದ್ದೇವೆ ಅಷ್ಟೇ ಎಂದರು.

ಅದು ನಮಗೆ ಸಂಬಂಧವಿಲ್ಲದ ವಿಷಯ

ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಪಕ್ಷದಿಂದ ಯಾರಾದರು ನಿಲ್ಲಲ್ಲೇ ಬೇಕು ನಿಲ್ಲುವುದು ಬಿಡುವುದು ಅವರ ಪಕ್ಷಕ್ಕೆ ಬಿಟ್ಟಿದ್ದು, ನಮಗೆ ಸಂಬಂಧವಿಲ್ಲದ ವಿಷಯ. ಶೆಟ್ಟರ್ ಸ್ಪರ್ಧೆಯಿಂದ ಬಿಜೆಪಿಗೆ ಲಾಭ, ಲಿಂಗಾಯತ ಮತಗಳು ಭದ್ರ ಎನ್ನುವ ಚರ್ಚೆ ವಿಚಾರ, ಚುನಾವಣೆ ಬಂದಾಗ ನೋಡೋಣ, ಯಾರು ಯಾವ ಕಡೆ ಆಗುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಜಗದೀಶ್​​ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ: ಬೆಳಗಾವಿಯಲ್ಲಿ ಬದಲಾದ ರಾಜಕೀಯ ಲೆಕ್ಕಾಚಾರ

ಕಾಂಗ್ರೆಸ್​ನಲ್ಲಿ ಉಸಿಗಟ್ಟಿಸುವ ವಾತಾವರಣ ಇತ್ತು ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬಿಜೆಪಿಯಿಂದ ಯಾಕೆ ಕಾಂಗ್ರೆಸ್​ಗೆ ಬಂದರು ಅವರು? ಅವಾಗ ಬರುವಾಗ ಏನಾಗಿತ್ತಂತೆ? ಅಲ್ಲಿ ಎಂದು ಪ್ರಶ್ನಿಸಿದ್ದಾರೆ.

ಇಬ್ಬರನ್ನೇ ಲೆಕ್ಕಾಚಾರ ಹಾಕಲು ಆಗಲ್ಲ

ಶೆಟ್ಟರ್ ಬಿಜೆಪಿ ಅಭ್ಯರ್ಥಿ ಆದರೆ ಬೆಳಗಾವಿ ಬಿಜೆಪಿಗೆ ದೊಡ್ಡ ಲಾಭ ಆಗಲಿದೆ ಎಂಬ ಚರ್ಚೆ ವಿಚಾರ, ಒಬ್ಬ ವ್ಯಕ್ತಿಯಿಂದ ಆಗಲ್ಲ. ಪಕ್ಷದ ಲೆಕ್ಕ ಹಿಡಿಯಬೇಕು. ಸತೀಶ್ ಜಾರಕಿಹೊಳಿ, ಶೆಟ್ಟರ್ ಇಬ್ಬರನ್ನೇ ಲೆಕ್ಕಾಚಾರ ಹಾಕಲು ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಶೆಟ್ಟರ್ ಬಿಜೆಪಿ ಸೇರಿದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಅಚ್ಚರಿಯ ಹೇಳಿಕೆ! ಘರ್ ವಾಪ್ಸಿಯಾಗುತ್ತಾರಾ ಸವದಿ?

ಸತೀಶ್ ಜಾರಕಿಹೊಳಿ ಕಾಂಗ್ರೆಸ್​ನಲ್ಲಿ ಪವರ್ ಸೆಂಟರ್ ಆಗುತ್ತಿದ್ದಾರೆ ಎಂಬ ಚರ್ಚೆ ವಿಚಾರವಾಗಿ ಮಾತನಾಡಿ, ನಾವೇನು ಪವರ್ ಸೆಂಟರ್​ ಅಲ್ಲ. ಪಕ್ಷದಲ್ಲಿ ಇದ್ಧೇವೆ. ಅಷ್ಟೇ ಹೊರಗಡೆ ಏನು ಹೋಗಿಲ್ಲ. ಸಮಾನ ಮನಸ್ಕರರು ಕೂಡಿದ್ದೆವೆ ಹೊರತಾಗಿ ಪವರ್ ಸೆಂಟರ್ ಏನು ಅಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಈಗ ಸದ್ಯಕ್ಕೆ ಇಲ್ಲ. ಚುನಾವಣೆ ಫೋಕಸ್ ಮಾಡುತ್ತಿದ್ದೇವೆ. ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಸದ್ಯಕ್ಕಂತೂ ಅದರ ಅವಶ್ಯಕತೆ ಇಲ್ಲ. ಚುನಾವಣೆ ಬಳಿಕ ಕೇಳೋಣ ಮತ್ತೊಂದು ಸರಿ ಕೇಳುತ್ತೇವೆ. ನಮ್ಮ ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ