ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ವಿಚಾರವಾಗಿ ನಡೆದಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಗರಣದ ಆರೋಪ ಹೊತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್​ ಕುಮಾರ್​ ಜಿಟಿ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿದೆ.

ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!
ದಿನೇಶ್​ ಕುಮಾರ್​ ಜಿಟಿ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on:Aug 30, 2024 | 12:40 PM

ಮೈಸೂರು, ಆಗಸ್ಟ್​ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ (Muda) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರದ್ದೂ ಪಾತ್ರವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ನಡುವೆ, ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ, ಕೆಎಎಸ್​ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿ (Dinesh Kumar GT) ಹಾವೇರಿ ವಿಶ್ವವಿದ್ಯಾಲಯದ (Haveri University) ಕುಲಸಚಿವರಾಗಿ ನೇಮಕಗೊಂಡಿದ್ದಾರೆ.

ಮುಡಾದಲ್ಲಿ 50:50 ಅನುಪಾತದಡಿ ಸೈಟ್​ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಅಕ್ರಮದಲ್ಲಿ ಅಂದಿನ ಮುಡಾ ಆಯಕ್ತ ದಿನೇಶ್ ಕುಮಾರ್ ಜಿ.ಟಿ​​ ಅವರ ಪಾಲುಗಾರಿಕೆಯೂ ಇದೆ ಎಂಬ ಆರೋಪ ಕೇಳಿಬಂದಿತ್ತು. ಆರೋಪ ಕೇಳಿಬಂದ ತಕ್ಷಣ ಮೈಸೂರಿಗೆ ಆಗಮಿಸಿದ್ದ ಸಚಿವ ಭೈರತಿ ಸುರೇಶ್‌ ಸಭೆ ನಡೆಸಿ ಅಂದಿನ ಮುಡಾ ಆಯುಕ್ತರನ್ನು ಜಿಟಿ ದಿನೇಶ್​ ಅವರ ವರ್ಗಾವಣೆಗೆ ಸೂಚಿಸಿದರು. ಅದರಂತೆ, ಸರ್ಕಾರ ದಿನೇಶ್ ಕುಮಾರ್ ಜಿಟಿ​ ಅವರನ್ನು ಮಾಡಿತ್ತು. ಆದರೆ, ಜಿಟಿ ದಿನೇಶ್​ ಅವರಿಗೆ ಸ್ಥಳ ನಿಯೋಜನೆಯಾಗಿರಲಿಲ್ಲ. ಇದೀಗ, ಜಿ.ಟಿ.ದಿನೇಶ್ ಕುಮಾರ್ ಅವ​​ರನ್ನು ಹಾವೇರಿ ವಿಶ್ವ ವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ನೇಮಕ ಮಾಡಿದೆ.

ಇದನ್ನೂ ಓದಿ: ಮುಡಾ ಹಗರಣ: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌, ಸಿಎಂಗೆ 2 ದಿನ ರಿಲೀಫ್​

ಕೆಎಎಸ್​ ಅಧಿಕಾರಿ ದಿನೇಶ್​​ ಕುಮಾರ್​ ಜಿಟಿ ಸೇರಿದಂತೆ ಸರ್ಕಾರ ಒಟ್ಟು ಒಂಬತ್ತು ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ವರ್ಗಾವಣೆಯಾದ ಅಧಿಕಾರಿಗಳು

  • ವೀರಭದ್ರ ಹಂಚಿನಾಳ – ವ್ಯವಸ್ಥಾಪ ನಿರ್ದೇಶಕರು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
  • ಅನುರಾಧ ಜಿ – ಮುಖ್ಯ ಆಡಳಿತಾಧಿಕಾರಿ ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿ.
  • ರಾಘವೇಂದ್ರ ಟಿ – ನಿರ್ದೇಶಕರು ವಿಕಲಚೇನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು.
  • ಚಿದಾನಂದ ಸದಾಶಿವ ವಟಾರೆ – ಮುಖ್ಯ ಆಡಳಿತಾಧಿಕಾರಿ ಇನ್ಸ್ಟಿಟ್ಯೂಟ್​ ಆಫ್​ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್​ ಆ್ಯಂಡ್​ ಆರ್ಗನ್​ ಟ್ರಾನ್ಸ್​ಪ್ಲಾಂಟ್​, ಬೆಂಗಳೂರು.
  • ಮಹದೇವ್​ ಎ ಮುರಗಿ – ಕುಲಸಚಿವರು (ಆಡಳಿತ) ತೋಟಗಾರಿಕೆ ವಿಶ್ವವಿದ್ಯಾಲಯ ಬಾಗಲಕೋಟೆ. ಮತ್ತು ಪ್ರಾಭರಿ ಆಯುಕ್ತರು ಕೂಡಲಸಂಗಮ ಅಭಿವೃದ್ಧಿ ಮಂಡಳಿ, ಕೂಡಲಸಂಗಮ, ಬಾಗಲಕೋಟೆ.
  • ರವಿಕುಮಾರ್ ಪಿ – ಪ್ರಧಾನ ವ್ಯವಸ್ಥಾಪಕರು (ಆಡಳಿತ) ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಬೆಂಗಳೂರು.
  • ಡಾ. ಶಂಕರಪ್ಪ ವಣಿಕ್ಯಾಳ್​​ – ಪ್ರಧಾನ ವ್ಯವಸ್ಥಾಪಕರು (ಆಡಳಿತ) ರಾಯಚೂರು ವಿಶ್ವವಿದ್ಯಾಲಯ, ರಾಯಚೂರು.
  • ಗೀತಾ ಈ ಕೌಲಗಿ – ಕುಲಸಚಿವರು (ಆಡಳಿತ) ಬಾಗಲಕೋಟೆ ವಿಶ್ವವಿದ್ಯಾಲಯ, ಬಾಗಲಕೋಟೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:04 pm, Fri, 30 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ