Kannada literature fest: ಹಾವೇರಿ ಕನ್ನಡ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ, ಪರ್ಯಾಯ ಸಮ್ಮೇಳನಕ್ಕೆ ಚಿಂತನೆ -ಪುರುಷೋತ್ತಮ ಬಿಳಿಮಲೆ

Akhila Bharatha Kannada Sahitya Sammelana: ದೇವನೂರು ಮಹಾದೇವ, ಬರಗೂರು ರಾಮಚಂದ್ರಪ್ಪ, ರಾಜೇಂದ್ರ ಚೆನ್ನಿ, ಅರುಣಕುಮಾರ ಜೋಳದ ಕೂಡ್ಲಿಗಿ, ಬಿ.ಎಂ. ಹನೀಫ್ ಒಳಗೊಂಡ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾನಾಂತರ ಕಾರ್ಯಕ್ರಮವನ್ನು ಆಯೋಜಿಸಲು ನಾವು ಯೋಜಿಸಿದ್ದೇವೆ - ಪ್ರೊ. ಪುರುಷೋತ್ತಮ ಬಿಳಿಮಲೆ 

Kannada literature fest: ಹಾವೇರಿ ಕನ್ನಡ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ, ಪರ್ಯಾಯ ಸಮ್ಮೇಳನಕ್ಕೆ ಚಿಂತನೆ -ಪುರುಷೋತ್ತಮ ಬಿಳಿಮಲೆ
ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದೆ, ಪರ್ಯಾಯ ಸಮ್ಮೇಳನ ಆಯೋಜನೆಗೆ ಚಿಂತನೆ
Follow us
TV9 Web
| Updated By: Digi Tech Desk

Updated on:Dec 27, 2022 | 11:38 AM

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Haveri 86 Akhila Bharatha Kannada Sahitya Sammelana) ಆಯೋಜನೆಯ ಹೊಣೆಹೊತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು (Kannada Sahitya Parishath) ಲೇಖಕರಿಗಿಂತ ಪದಾಧಿಕಾರಿಗಳಿಗೆ ಆದ್ಯತೆ ನೀಡಿದೆ. ಇನ್ನು, ಮುಸ್ಲಿಂ ಲೇಖಕರನ್ನು (Muslim writers) ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕನ್ನಡ ಸಾಹಿತ್ಯವಲಯದ ಒಂದು ವರ್ಗ ಗಂಭೀರವಾಗಿ ಆರೋಪಿಸಿದೆ. ಇದೇ ವೇಳೆ, ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ, ಬೇರೊಂದು ಕಾರ್ಯಕ್ರಮ ಹಮ್ಮಿಕೊಳ್ಳಲು ಇದೇ ವಲಯ ನಿರ್ಧರಿಸಿದೆ. ಕಸಾಪ ಈಗಾಗಲೇ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ್ದು, ಜನವರಿ 6 ರಿಂದ 8 ರವರೆಗೂ ಮೂರು ದಿನಗಳ ಕಾಲ ಹಾವೇರಿಯಲ್ಲಿ ಸಮ್ಮೇಳನ ನಡೆಯಲಿದೆ.

ಕನ್ನಡ ಲೇಖಕ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು (Prof. Purushottam Bilimale) ಕಾರ್ಯಕ್ರಮ ಮತ್ತು ಆಹ್ವಾನಿತರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾನಾಂತರ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಫೇಸ್‌ಬುಕ್ ಪೋಸ್ಟ್‌ನಲ್ಲಿ (Facebook post) ಅವರು ಹೀಗೆ ಬರೆದಿದ್ದಾರೆ: “ಯಾವುದೇ ಅಧಿವೇಶನದಲ್ಲಿ ಮುಸ್ಲಿಂ ಬರಹಗಾರರು ಇಲ್ಲದ ಕಾರಣ ಸಮಾನಾಂತರ ಸಮ್ಮೇಳನವು ಪ್ರಸ್ತುತ ಅವಶ್ಯಕತೆಯಾಗಿದೆ. ಕನ್ನಡ ಸಾಹಿತ್ಯದಲ್ಲಿ 600 ಕ್ಕೂ ಹೆಚ್ಚು ಬರಹಗಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾರಣ ಕಸಾಪ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು.

ರಹಮತ್ ತರೀಕೆರೆ ಸೇರಿದಂತೆ, ಕನ್ನಡ ಸಾಹಿತ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದರೂ ಕನ್ನಡದ ಈ ಪ್ರಮುಖ ಸಾಹಿತಿಗಳನ್ನು ಕ.ಸಾ.ಪ ಕಡೆಗಣಿಸಿದೆ. ದೇವನೂರು ಮಹಾದೇವ, ಬರಗೂರು ರಾಮಚಂದ್ರಪ್ಪ, ರಾಜೇಂದ್ರ ಚೆನ್ನಿ, ಅರುಣಕುಮಾರ ಜೋಳದ ಕೂಡ್ಲಿಗಿ, ಬಿ.ಎಂ. ಹನೀಫ್ ಅವರನ್ನು ಒಳಗೊಂಡ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾನಾಂತರ ಕಾರ್ಯಕ್ರಮವನ್ನು ಆಯೋಜಿಸಲು ನಾವು ಯೋಜಿಸಿದ್ದೇವೆ. ಸ್ಥಳವನ್ನು ಅಂತಿಮಗೊಳಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಈ ನಿರ್ಧಾರವನ್ನು ಸ್ವಾಗತಿಸುತ್ತಾ, ಅವರ ಅನೇಕ ಅನುಯಾಯಿಗಳು ಬೆಂಬಲ ನೀಡಿದ್ದಾರೆ. ಅನೇಕರು ಸ್ಥಳದ ಬಗ್ಗೆಯೂ ಸಲಹೆ ನೀಡಿದ್ದಾರೆ. ಮತ್ತು ಸಮಾನಾಂತರ ಕಾರ್ಯಕ್ರಮಕ್ಕೆ ಆರ್ಥಿಕ ಸಹಾಯವನ್ನು ನೀಡಲು ಸಹ ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಪ್ರೊ. ಬಿಳಿಮಲೆ ಅವರ ಅನೇಕ ಅನುಯಾಯಿಗಳು ಸಹ ಕಸಾಪ ಕಾರ್ಯಕ್ರಮವನ್ನು ಖಂಡಿಸಿದ್ದಾರೆ.

ಆ್ಯಪ್ ಮೂಲಕ ನೊಂದಣಿ ಮಾಡಿಕೊಳ್ಳಲು ಇಲ್ಲಿ ಲಿಂಕ್​ ಕ್ಲಿಕ್ ಮಾಡಿ

ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ ತಿಳಿಯಲು ಇಲ್ಲಿ ಲಿಂಕ್​ ಕ್ಲಿಕ್ ಮಾಡಿ

ಕ.ಸಾ.ಪ ಅಧ್ಯಕ್ಷ ಮಹೇಶ ಜೋಶಿ, 85ನೇ ಸಮ್ಮೇಳನಾಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ, ಹಾಲಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರನ್ನು ಹೊರತುಪಡಿಸಿದರೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ ಎಂದು ಹಿರಿಯ ಪತ್ರಕರ್ತ, ಸಾಹಿತಿ ಲಕ್ಷ್ಮಣ ಕೊಡಸೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇದಿಕೆಯಲ್ಲಿ ರಾಜಕೀಯ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಮೇಲಾಗಿ ಕಸಾಪ ಕೂಡ ವಿವಿಧ ಸಮಿತಿಗಳಲ್ಲಿ ಕನ್ನಡ ಸಾಹಿತಿಗಳ ಬದಲಿಗೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಮಣೆ ಹಾಕಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜಕೀಯ ಮತ್ತು ಅಧಿಕಾರಶಾಹಿ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:20 am, Tue, 27 December 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?