AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ಮಾಂಸಹಾರ ತ್ಯಜಿಸಿದ ಮುಸ್ಲಿಂ ಬಾಂಧವರು, ಸಿಹಿ ತಿಂದು ಬಕ್ರಿದ್ ಹಬ್ಬ ಆಚರಣೆ

ಒಂದೇ ತಿಂಗಳಲ್ಲಿ ಗ್ರಾಮದ ಐವರು ಯುವಕರು ಮೃತಪಟ್ಟ ಹಿನ್ನೆಲೆ ಧರ್ಮಾತೀತವಾಗಿ 12 ದಿನ ಮಾಂಸಹಾರ ತ್ಯಜಿಸಿ ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲು ಗ್ರಾಮಸ್ಥರು ನಿರ್ಣಯಿಸಿದ್ದರು. ಹಾಗಾಗಿ ಇಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಮಾಂಸಹಾರ ತ್ಯಜಿಸಿ ಬಕ್ರೀದ್​ ಹಬ್ಬ ಆಚರಣೆ ಮಾಡಲಾಗಿದೆ.

Haveri News: ಮಾಂಸಹಾರ ತ್ಯಜಿಸಿದ ಮುಸ್ಲಿಂ ಬಾಂಧವರು, ಸಿಹಿ ತಿಂದು ಬಕ್ರಿದ್ ಹಬ್ಬ ಆಚರಣೆ
ಬಾಳಂಬಿಡ ಗ್ರಾಮ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jun 29, 2023 | 8:29 PM

Share

ಹಾವೇರಿ: ಇಂದು ರಾಜ್ಯದೆಲ್ಲೆಡೆ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಈ ಹಬ್ಬದಂದು ಮುಸ್ಲಿಂ ಬಾಂಧವರು ಮಾಂಸಹಾರ ಮಾಡಿ ಸೇವಿಸುತ್ತಾರೆ. ಆದರೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಮಾತ್ರ ಈ ವರ್ಷ ಮಾಂಸಹಾರ ತ್ಯಜಿಸಿ ಬಕ್ರೀದ್​ ಹಬ್ಬ ಆಚರಣೆ ಮಾಡಲಾಗಿದೆ. ಗ್ರಾಮಸ್ಥರ ನಿರ್ಣಯದಂತೆ ಮಾಂಸಹಾರ ತ್ಯಜಿಸಿ ಸಿಹಿ ತಿಂದು ಮುಸ್ಲಿಂ ಬಾಂಧವರು ಬಕ್ರೀದ್​​ ಹಬ್ಬವನ್ನು ಆಚರಿಸಿದ್ದಾರೆ.

ಒಂದೇ ತಿಂಗಳಲ್ಲಿ ಗ್ರಾಮದ ಐವರು ಯುವಕರು ಮೃತಪಟ್ಟ ಹಿನ್ನೆಲೆ ಧರ್ಮಾತೀತವಾಗಿ 12 ದಿನ ಮಾಂಸಹಾರ ತ್ಯಜಿಸಿ ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲು ಗ್ರಾಮಸ್ಥರು ನಿರ್ಣಯಿಸಿದ್ದರು. ಹಾಗಾಗಿ ಕಳೆದ 10 ದಿನಗಳಿಂದ ಮಾಂಸಹಾರ ತ್ಯಜಿಸಿದ್ದಾರೆ. ಬಕ್ರೀದ್ ಹಬ್ಬವಾದ ಇಂದು ಸಿಹಿ ತಿಂದು ಸರಳವಾಗಿ ಮುಸ್ಲಿಂ ಬಾಂಧವರು ಆಚರಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ನಿವಾಸಕ್ಕೆ ಬೆನ್ಜ್ ಕಾರಿನಲ್ಲಿ ಬಂತು ಬಕ್ರೀದ್ ಬಿರಿಯಾನಿ

ನಮಾಜ್ ಮಾಡುವ ಜಾಗದಲ್ಲೇ ಯುವಕರ ಬಡಿದಾಟ

ಬಕ್ರೀದ್ ಹಬ್ಬದ ಹಿನ್ನೆಲೆ ಪ್ರಾರ್ಥನೆ ಮಾಡುವ ಸ್ಥಳದಲ್ಲಿ ಲೆಕ್ಕಪತ್ರ ನಿರ್ವಹಣೆ ವಿಚಾರವಾಗಿ ಯುವಕರು ಬಡಿದಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಈದ್ಗಾ ಮೈದಾನದಲ್ಲಿ ನಡೆದಿದೆ. ಈದ್ಗಾ ಮೈದಾನದ ನಿರ್ವಹಣೆಗಾಗಿ ವಂತಿಕೆ ಸಂಗ್ರಹ ವೇಳೆ ಮಾತಿಗೆ ಮಾತು ಬೆಳೆದು ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ: ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಸಾಮೂಹಿಕ ಪ್ರಾರ್ಥನೆ ಮುಗಿದ ನಂತರ ಮುಖಂಡರು ಗಲಾಟೆ ಮಾಡಿಕೊಂಡಿದ್ದು, ಮುಸ್ತಾಫ್ ಅಹ್ಮದ್ ಖಾಜಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ರಟ್ಟಿಹಳ್ಳಿ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:28 pm, Thu, 29 June 23

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್