86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ

ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ1 ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಜಿಲ್ಲಾ ಪೊಲೀಸ್​​ ಇಲಾಖೆಗೆ ಮನವಿ ಮಾಡಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 1 ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್​ ಇಲಾಖೆಗೆ ಮಹೇಶ್ ಜೋಶಿ ಪತ್ರ
ನಾಡೋಜ ಮಹೇಶ್​ ಜೋಶಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2022 | 7:57 PM

ಹಾವೇರಿ: ಜನವರಿ 6, 7 ಹಾಗೂ 8 ರಂದು ದಾಸಶ್ರೇಷ್ಠ ಕನಕದಾಸರ ನಾಡು ಹಾವೇರಿಯಲ್ಲಿ “ಸಾಮರಸ್ಯದ ಭಾವ ಕನ್ನಡದ ಜೀವ” ಎಂಬ ಧ್ಯೆಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Akhila Bharata sahitya sammelana) ನಡೆಯಲಿದೆ. ಈ ಸಮ್ಮೇಳನಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯ ಒಂದು ದಿನದ ವೇತನವನ್ನು ನೀಡುವಂತೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ (Nadoja Mahesh joshi) ಎಸ್‌ಪಿ ಹನಮಂತರಾಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮ್ಮೇಳನದ SBI ಖಾತೆ ಸಂಖ್ಯೆ 41212784580 ಗೆ ಜಮೆ ಮಾಡಲು ಕೋರಿದ್ದಾರೆ.

ಅಧಿಕೃತ ಬಿಡುಗಡೆಗೆ ಮುನ್ನವೇ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್

ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ(Akhila bharata kannada sahitya sammelana) ದ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.  ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಮೌನ‌ ವಹಿಸಿದೆ.

ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಯಾಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜನೇವರಿ 6,7 ಮತ್ತು 8ರಂದು ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಜಾಗ ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿದೆ. ಸಮ್ಮೇಳನ ನಡೆಸುವ ಜಾಗದಲ್ಲಿ ಈಗಾಗಲೇ ಸಿದ್ಧತಾ ಕಾರ್ಯಗಳು ಶುರುವಾಗಿದೆ. ಸಮ್ಮೇಳನ ನಡೆಯುತ್ತಿರುವ ಹಾವೇರಿ ಹಲವು ಅಪರೂಪಗಳಿಗೆ ಸಾಕ್ಷಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹಾವೇರಿ ಜಿಲ್ಲೆಯವರು ಹೀಗಾಗಿ ಸಮ್ಮೇಳನದ ಜೊತೆಜೊತೆಗೆ ಹಾವೇರಿ ಕೂಡ ಸಾಕಷ್ಟು ಅಭಿವೃದ್ಧಿ ಆಗುತ್ತದೆ ಎನ್ನುವುದು ಸಾಹಿತಿಗಳು ಹಾಗೂ ಜನರ ನಿರೀಕ್ಷೆ ಆಗಿದೆ.

ಇದನ್ನೂ ಓದಿ: 86ನೇ‌ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಾಗಲು ಆ್ಯಪ್ ಮೂಲಕ ನೊಂದಣಿ ಮಾಡ್ಕೊಳ್ಳಿ

ಸಮ್ಮೇಳನದ ಪೂರ್ವಭಾವಿಯಾಗಿ ಕೆಲವು ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಭೆಗಳನ್ನು ನಡೆಸಲಾಗಿದೆ. ಈವರೆಗೆ ನಡೆದಿರುವ 85 ಸಮ್ಮೇಳನಗಳಿಗಿಂತಲೂ ವಿಭಿನ್ನವಾಗಿ ಮತ್ತು ವಿಶೇಷವಾಗಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಈ ಮಧ್ಯೆ ಅಧಿಕೃತ ಬಿಡುಗಡೆಯಾಗಬೇಕಿದ್ದ ಆಮಂತ್ರಣ ಪತ್ರಿಕೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 pm, Sun, 11 December 22

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ