AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Sahitya Sammelana 2023: 20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ

ಜನವರಿ 6, 7 ಮತ್ತು 8 ಸೇರಿದಂತೆ 3 ದಿನ ಸಮ್ಮೇಳನ ನಡೆಯಲಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲಿನ ಊರಿಗೆ ಲಕ್ಷಾಂತರ ಸಾಹಿತ್ಯ ಆಸಕ್ತರು ಆಗಮಿಸೋ ನಿರೀಕ್ಷೆ ಇದೆ. ಹೀಗೆ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಇಂತಹ ದೊಡ್ಡ ಹಬ್ಬದಲ್ಲಿ ಸ್ವಚ್ಚತೆ ಮರೆಯಾಗಿದೆ.

Kannada Sahitya Sammelana 2023: 20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ
20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ
TV9 Web
| Updated By: ಆಯೇಷಾ ಬಾನು|

Updated on:Jan 05, 2023 | 11:53 AM

Share

ಹಾವೇರಿ: ಸಾಧು ಸಂತರ ನಾಡು, ಸರ್ವಜ್ಞ ಹುಟ್ಟಿದ ಜಿಲ್ಲೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ನೆಲದ ಮಣ್ಣಿನಲ್ಲಿ ಜ.06ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆದಿದೆ. ಆದ್ರೆ ಇಲ್ಲಿ ವಿಪರ್ಯಾಸವೆಂದರೆ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ(Kannada Sahitya Sammelana) ಸ್ವಚ್ಚತೆ ಮರೆಯಾಗಿದೆ. ರಥಯಾತ್ರೆ ಸಾಗುವ ಮುಖ್ಯ ದಾರಿಯಲ್ಲಿ ಚರಂಡಿ ನೀರು, ಕಸ ಮುಜುಗರಕ್ಕೀಡು ಮಾಡುತ್ತಿದೆ.

ಕನಕದಾಸರು ನಡೆದಾಡಿದ ನೆಲ.. ಸಂತ ಶಿಶುನಾಳು ಶರೀಫರು ಓಡಾಡಿದ ಜಾಗ.. ಸರ್ವಜ್ಞ ಹುಟ್ಟಿದ ಜಿಲ್ಲೆ.. ಏಲಕ್ಕೆ ಹಾರ, ಸವಣೂರು ಖಾರ, ಬ್ಯಾಡಗಿ ಮೆಣಸಿನಕಾಯಿಗೆ ಹೆಸರಾರೋ ಹಾಗೂ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ ನಡೆಯಲಿದೆ. ಸಾಹಿತಿ ದೊಡ್ಡರಂಗೇಗೌಡರ ಅಧ್ಯಕ್ಷತೆಯಲ್ಲಿ 86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ನಗರ ಮದುವಣಗಿತ್ತಿಯಂತೆ ಶೃಂಗಾರ ಗೊಂಡಿದೆ. ಜನವರಿ 6, 7 ಮತ್ತು 8 ಸೇರಿದಂತೆ 3 ದಿನ ಸಮ್ಮೇಳನ ನಡೆಯಲಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲಿನ ಊರಿಗೆ ಲಕ್ಷಾಂತರ ಸಾಹಿತ್ಯ ಆಸಕ್ತರು ಆಗಮಿಸೋ ನಿರೀಕ್ಷೆ ಇದೆ. ಹೀಗೆ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಇಂತಹ ದೊಡ್ಡ ಹಬ್ಬದಲ್ಲಿ ಸ್ವಚ್ಚತೆ ಮರೆಯಾಗಿದೆ.

ಮೂಗಿಗೆ ಬಟ್ಟೆ ಮುಚ್ಚಿ ರಥಯಾತ್ರೆಯಲ್ಲಿ ಸಾಗಿದ ವಿದ್ಯಾರ್ಥಿಗಳು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ರಾಜ್ಯವನ್ನ ಸುತ್ತಿ ಹಾವೇರಿ ನಗರಕ್ಕೆ ಸಮ್ಮೇಳನ ರಥ ಬಂದಿದೆ. ಪಟ್ಟಣದಲ್ಲಿ ಹಾವೇರಿ ರಥಯಾತ್ರೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದ್ದಾರೆ. ರಥಯಾತ್ರೆಗೆ ಶಾಲಾ ಮಕ್ಕಳಿಂದ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ. ಶಾಸಕ ಓಲೇಕಾರ್, ಮಹೇಶ ಜೋಶಿ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಶಾಲಾ ಮಕ್ಕಳು ಭಾಗಿಯಾಗಿದ್ದಾರೆ. ಆದ್ರೆ ಮೂಗಿಗೆ ಬಟ್ಟೆ ಮುಚ್ಚಿಕೊಂಡು ರಥಯಾತ್ರೆಯಲ್ಲಿ ಸಾಗುತ್ತಿರುವ ದೃಶ್ಯಗಳು ಕಂಡು ಬಂದಿವೆ. 20 ಕೋಟಿಗೂ ಅಧಿಕ ವೆಚ್ಚದಲ್ಲಿ ಸಮ್ಮೇಳನ ನಡೆಸಲಾಗುತ್ತಿದೆ. ಆದ್ರೆ ನಗರದಲ್ಲಿ ಸ್ವಚ್ಚತೆ ಕಾಪಾಡುವುದಕ್ಕೆ ವಿಶೇಷ ಕಾಳಜಿ ವಹಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.

7 ರೈಲು ನಿಲ್ದಾಣ ಮಾಡಲು ನೈಋತ್ಯ ರೈಲ್ವೆ ಇಲಾಖೆಯಿಂದ ಆದೇಶ

ಇನ್ನು ಸಾಹಿತ್ಯ ಆಸಕ್ತರಿಗೆ ನೈಋತ್ಯ ರೈಲ್ವೆ ಇಲಾಖೆ ಗುಡ್​ನ್ಯೂಸ್​ ಕೊಟ್ಟಿದೆ. ಹಾವೇರಿಯಲ್ಲಿ 7 ಎಕ್ಸ್​ಪ್ರೆಸ್ ರೈಲು ನಿಲ್ದಾಣ ಮಾಡುವಂತೆ ನೈಋತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪದಿಂದ ಹೊಸ ನಿಯಮ

86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪದಿಂದ ಹೊಸ ನಿಯಮ ಜಾರಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ ಮಾಡಲು ಸಿಎಂಗೆ 30 ನಿಮಿಷ ಮಾತ್ರ ಅವಕಾಶ ನೀಡಲಾಗಿದೆ. ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡರ ಭಾಷಣಕ್ಕೆ 45 ನಿಮಿಷ ಅವಕಾಶ ನೀಡಿದ್ದು, ಬಿಎಸ್​ವೈ, ಹೆಚ್​ಡಿಕೆ ಸೇರಿ ಹಿರಿಯ ರಾಜಕಾರಣಿಗಳಿಗೆ 10 ನಿಮಿಷ ಅವಕಾಶ ನೀಡಿ ಕಸಾಪ ಸಮಯ ನಿಗದಿಗೊಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Thu, 5 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!