ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಶಿಗ್ಗಾಂವಿ (Shiggaon) ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಇದೀಗ ಖುದ್ದು ಹಾವೇರಿ ಎಸ್ಪಿ ಅಂಶುಕುಮಾರ್ (SP Anshukumar) ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 11, 2024 | 8:59 PM

ಹಾವೇರಿ, (ನವೆಂಬರ್ 11): ಶಿಗ್ಗಾಂವಿ (Shiggaon) ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಆದರೆ ಪಠಾಣ್​ ಅವರು ತಮ್ಮ ನಾಮಪತ್ರದಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಬೊಮ್ಮಾಯಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದರ ಮಧ್ಯ ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹಲವು ಕೇಸ್​ಗಳು ಇವೆ. ಆದ್ರೆ,ಅವರು ಅಫಿಡೆವಿಟ್​​ನಲ್ಲಿ ತಿಳಿಸಿಲ್ಲ. ಈ ಮೂಲಕ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಚುನಾವಣೆಗೆ ನಾವು ಅರ್ಜಿ ಸಲ್ಲಿಸ್ತೇವೆ. ಕೂಡಲೇ ಚುನಾವಣಾಧಿಕಾರಿಗಳು ಕಾರ್ಯ ಪ್ರವೃತ್ತರಾಗಲಿ. ಡಿಸಿ ಮೇಲೆ‌ ದೊಡ್ಡ ಜವಾಬ್ದಾರಿ ಇದೆ. ಏನಿದೆ ಸ್ಟೇಟಸ್ ಎಂದು ಸ್ಪಷ್ಟಪಡಿಸಲಿ. ಇಲ್ಲದಿದ್ದರೆ ಅಧಿಕಾರಿಗಳು ಕಟಕಟೆಯಲ್ಲಿ ನಿಲ್ಲಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ

ಹಾವೇರಿ ಎಸ್​ಪಿ ಮಾಧ್ಯಮ ಪ್ರಕಟಣೆ

ಇದರ ಬೆನ್ನಲ್ಲೇ ಇದೀಗ ಹಾವೇರಿ ಎಸ್​ಪಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಯಾಸೀರ್ ಪಠಾಣ್​ ಅವರ ಮೇಲೆ ರೌಡಿಶೀಟ್​ ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಸಂಬಂಧ ಶಿಗ್ಗಾಂವಿ ಡಿಎಸ್​​ಪಿ ಹಾಗೂ ಪಿಎಸ್​ಐ ಕಚೇರಿಯಿಂದ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಯಾಸೀರ್ ಪಠಾಣ್​ ಅವರ ಮೇಲೆ ಯಾವುದೇ ರೀತಿಯ ರೌಡಿಶೀಟ್​ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ತಮಗೆ ಬೈ ಎಲೆಕ್ಷನ್ ಟಿಕೆಟ್​ ಕೈತಪ್ಪಿದ ಬಳಿಕ ಪಠಾಣ್ ಓರ್ವ ರೌಡಿಶೀಟರ್ ಎಂದು ಆರೋಪಿಸಿದ್ದರು. ಇದನ್ನೇ ಇಟ್ಟುಕೊಂಡು ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಠಾಣ್ ಮೇಲೆ ರೌಡಿ ಶೀಟರ್ ಕೇಸ್ ಇದೆ, ವಿವಿಧ ಪ್ರಕರಣ ಇರೋದನ್ನು ಆಫಿಡಿವೇಟ್‌ನಲ್ಲಿ ಮುಚ್ಚಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ