ವಿಪಕ್ಷ ನಾಯಕನ ಆಯ್ಕೆ ವಿಚಾರ: ಪಕ್ಷ ಜು.18 ರಂದು ತೀರ್ಮಾನ ತೆಗೆದುಕೊಳ್ಳುತ್ತದೆ – ಮಾಜಿ ಸಿಎಂ ಬೊಮ್ಮಾಯಿ

ವಿಪಕ್ಷ ನಾಯಕ ಆಯ್ಕೆ ನಮ್ಮ ಪಕ್ಷಕ್ಕೆ ಬಿಟ್ಟಿದ್ದು, ಜು.18 ರಂದು ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಪಕ್ಷ ನಾಯಕನ ಆಯ್ಕೆ ವಿಚಾರ: ಪಕ್ಷ ಜು.18 ರಂದು ತೀರ್ಮಾನ ತೆಗೆದುಕೊಳ್ಳುತ್ತದೆ - ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ

Updated on: Jul 16, 2023 | 1:50 PM

ಹಾವೇರಿ: ವಿಪಕ್ಷ ನಾಯಕ (Opposition Leader) ಆಯ್ಕೆ ನಮ್ಮ ಪಕ್ಷಕ್ಕೆ ಬಿಟ್ಟಿದ್ದು, ಜು.18 ರಂದು ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಶಿಗ್ಗಾಂವಿ (Shiggaon) ಪಟ್ಟಣದ ಶಬರಿ ನಗರದಲ್ಲಿ ಮಾಧ್ಯಮ ಪ್ರತಿನಧಿಗಳೊಂದಿಗೆ ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿ ವಿಚಾರವಾಗಿ ಮಾತನಾಡಿದ ಅವರು ಈ ಹಿಂದೆ ಬಳೆ ಹಾಕಿಕೊಂಡು ಕೆಲಸ ಮಾಡಿದಾಗ ಯಾವ ತೊಂದರೆ ಆಗಿಲ್ಲ. ಸರ್ಕಾರಕ್ಕೆ ಮಾಡುವ ಬೇರೆ ಕೆಲಸ ಇಲ್ಲ. ಹತ್ತು ಹಲವು ಬೇಕಾದಷ್ಟು ಕೆಲಸಗಳು ಇವೆ. ಇವರು ಕೆಲಸಕ್ಕೆ ಬಾರದ ಕೆಲಸಗಳನ್ನ ಮಾಡುತ್ತಿದ್ದಾರೆ ಎಂದರು.

ಸಚಿವ ಪ್ರೀಯಾಂಕಾ ಖರ್ಗೆ ಮತ್ತು ಮಾಜಿ ಶಾಸಕ ಯತೀಂದ್ರ ಸಿದ್ದಾರಾಮಯ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ಹಣ ತಗೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲ ಅಂತ ಜಾರಿಕೊಳ್ಳುತ್ತಿದ್ದಾರೆ. ಅವರ ಮಂತ್ರಿಮಂಡಳದ ಸದಸ್ಯರು, ಭಂಟರು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.

ಅಧಿಕಾರಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆಯಾಗುತ್ತಿದೆ. ಅದನ್ನು ಮುಚ್ಚಿ ಹಾಕುವ ಸಲುವಾಗಿ ನಾನು ತೆಗೊಂಡಿಲ್ಲ ಎಂದು ಹೇಳುತ್ತ್ತಿದ್ದಾರೆ. ತಗೊಂಡಿದ್ದರೇ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಅಂತಾರೆ. ಅಂದರೆ ಇದರ ಅರ್ಥ ಸರ್ಕಾರದಲ್ಲಿ ಬೇರೆಯವರು ತಗೊಂಡರೇ ಮುಖ್ಯಮಂತ್ರಿಗಳ ಜವಾಬ್ದಾರಿ. ಎಲ್ಲಾ ಸ್ಪಷ್ಟವಾಗಿ ಕಾಣುತ್ತಿದೆ. ಸಿಎಂ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: Bengaluru; ತಮ್ಮ ಮೊದಲ ಅವಧಿಯ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತ ಹೇಳುವ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಜೆಡಿಎಸ್ ಜೊತೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಅದನ್ನು ವರಿಷ್ಠರು ತಿರ್ಮಾನ ಮಾಡ್ತಾರೆ. ಇನ್ನು ಆರ್​ಎಸ್​ಎಸ್​ಗೆ ಮಂಜೂರಾಗಿದ್ದ ಜಮೀನನ್ನು ಹಿಂಪಡೆದ ವಿಚಾರವಾಗಿ ಮಾತನಾಡಿ ಇದು ಸೇಡಿನ ರಾಜಕಾರಣ. ಅದರಲ್ಲಿ ಬಡವರ ಮಕ್ಕಳಿಗೆ, ಅನಾಥರಿಗೆ ದೊಡ್ಡ ಸಹಾಯವಾಗುತ್ತದೆ. ಶಿಕ್ಷಣದದಲ್ಲಿ ದೊಡ್ಡ ಕೆಲಸ ಮಾಡುತ್ತಿದೆ. ಕ್ಯಾಬಿನೆಟ್​ಗೆ ಅಧಿಕಾರ ಇದೆ ನಾವು ಮಾಡಿದ್ವಿ. ಇದು ಸೇಡಿನ ರಾಜಕಾರಣ ಇದು ಬಹಳ ದಿನ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಗ್ಗಾಂವಿ ಪುರಸಭೆ ಸಿಬ್ಬಂಧಿಗಳು ಕೆಲಸ ಮಾಡುತ್ತಿಲ್ಲ ಎಂದು ಸದಸ್ಯರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ ಆಡಳಿತಾಧಿಕಾರಿಯನ್ನು ಈಗಾಗಲೇ ಟ್ರಾನ್ಸಫರ್ ಮಾಡಲಾಗಿದೆ. ಇನ್ನೂ ಸಿಬ್ಬಂಧಿಗಳು ಬೇಕಾಗಿದ್ದಾರೆ ಆದಷ್ಟು ಬೇಗ ಭರ್ತಿ ಮಾಡುತ್ತೆವೆ. ಆದರೆ ಇರುವ ಸಿಬ್ಬಂದಿಗಳನ್ನು ಬೇರೆ ಕಡೆ ಟ್ರಾನ್ಸಫರ್ ಮಾಡಿ ಎಂಬ ಸದಸ್ಯರ ಮಾತಿಗೆ ಮಾಜಿ ಸಿಎಂ ಬೊಮ್ಮಾಯಿ, ಆ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಜಾರಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ