Jaya Mruthyunjaya Swami: ಪಂಚಮಸಾಲಿ ಸಮುದಾಯದ ಹೋರಾಟ ಶಿಗ್ಗಾಂವಿ ಸಿಎಂ ಮನೆಯಿಂದ ಬೆಂಗಳೂರಿಗೆ ಶಿಫ್ಟ್,

2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಾಳೆಯಿಂದ ನಿರಂತರ ಪ್ರತಿಭಟನೆ ಮಾಡಲಾಗುವುದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Jaya Mruthyunjaya Swami: ಪಂಚಮಸಾಲಿ ಸಮುದಾಯದ ಹೋರಾಟ ಶಿಗ್ಗಾಂವಿ ಸಿಎಂ ಮನೆಯಿಂದ ಬೆಂಗಳೂರಿಗೆ ಶಿಫ್ಟ್,
ಮೀಸಲಾತಿ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 13, 2023 | 4:11 PM

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಪಂಚಮಸಾಲಿಗೆ (Panchamasali community) 2ಎ ಮೀಸಲಾತಿ ನೀಡುತ್ತೇವೆ ಎಂದು ಕೊಟ್ಟ ಮಾತನ್ನು ತಪ್ಪಿದ್ದಾರೆ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಹಾಗಾಗಿ ಇಂದು (ಜ. 13) ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ಸಿಎಂ ಬೊಮ್ಮಾಯಿ ಅವರ ನಿವಾಸದ ಬಳಿ ಧರಣಿ ಮಾಡುತ್ತೇವೆ ಎಂದು ಹಿಂದೆ ಬಸವ ಜಯಮೃತ್ಯುಂಜಯಶ್ರೀ (Jaya Mruthyunjaya Swami) ಎಚ್ಚರಿಕೆ ನೀಡಿದ್ದರು. ಆದರೆ ಸದ್ಯ ಪಂಚಮಸಾಲಿ ಸಮುದಾಯ ಹೋರಾಟವನ್ನು ಶಿಗ್ಗಾಂವಿಯಿಂದ ಬೆಂಗಳೂರಿನ ಫ್ರೀಡಂಪಾರ್ಕ್​​ಗೆ ಸ್ಥಳಾಂತರಿಸಲಾಗಿದೆ. ಈ ಕುರಿತಾಗಿ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಾಳೆಯಿಂದ ನಿರಂತರ ಪ್ರತಿಭಟನೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಕೈಸೇರಬೇಕು. ಸರ್ಕಾರ 2ಎ ಮೀಸಲಾತಿ ಘೋಷಿಸುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಪಂಚಮಸಾಲಿ ಹೋರಾಟ ಹತ್ತಿಕ್ಕಲು 2D ಮೀಸಲಾತಿ ನೀಡಲು ಮುಂದಾಗಿದ್ದರು

ಮೂರು ಬಾರಿ ಮಾತು ಕೊಟ್ಟರು. ನಾಲ್ಕನೇ ಭಾರಿ ಮಾತು ಕೊಟ್ಟರು. 5 ನೇ ಭಾರಿ ವಿಧಾನಸೌಧದಲ್ಲಿ ಮೀಸಲಾತಿ ಘೋಷಣೆ ಮಾಡಿದರು. ಅದರೆ ಘೋಷಣೆ ಮಾಡಿಲ್ಲ. ನಮ್ಮ ಜನರು ರೊಟ್ಟಿಬುತ್ತಿಕೊಂಡು ಬೆಳಗಾವಿ ಬಂದೆವು. ಆಯೋಗದ ವರದಿ ಬರಬೇಕು ಅಂದರು. ತಾಯಿ ಮೇಲೆ ಆಣೆ ಮಾಡಿ ಹೇಳಿದರು. ವಿಧಾನಸೌಧ ಮುತ್ತಿಗೆ ಹಾಕುವ ಪರಸ್ಥಿತಿ ತಪ್ಪಿಸಿದರು. ನರಗುಂದ ಬಂಡಾಯ ರೀತಿಯ ಹೋರಾಟ ಇತ್ತು. ರಾಜೀನಾಮೆ ಕೊಡುವ ಪರಸ್ಥಿತಿ ಆಗುತ್ತಿತ್ತು. ಆದರೆ ನಮ್ಮ ನಾಯಕರು ಶಾಂತ ರೀತಿ ಹೋರಾಟ ಮಾಡಿದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪ್ರಕಟಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚುತ್ತದೆ: ಬಸನಗೌಡ ಯತ್ನಾಳ್

29 ರಂದು ತಾಯಿ‌‌ ಮೇಲೆ ಆಣೆ ಮಾಡಿ 2D ಘೋಷಣೆ ಮಾಡುವ ಮೂಲಕ ನಮಗೆ ಅಸಮಾಧಾನಕ್ಕೆ ಕಾರಣ ಆದರು. ಸಮಾಜದ ಆಕ್ರೋಶಕ್ಕೆ ಕಾರಣವಾಗಿತು. ನಿರ್ಣಯ ಮಾಡಿ‌ 2D ಮೀಸಲಾತಿ ತಿರಸ್ಕಾರ ಮಾಡಿದ್ವೀವೆ. ಏಕಾಂಗಿಯಾಗಿ ಹೋರಾಟ ಮಾಡಲು ನಾನು‌ ಸಿದ್ದನಾಗಿದ್ದೇ, ಅದರೂ ಸಮಾಜದ ಬಾಂಧವರು ಇವತ್ತು ಬಂದಿದ್ದಾರೆ ಎಂದು ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕೃತಿಗೆ ಪ್ರತಿಭಟನಾಕಾರಿಂದ ಬೆಂಕಿ

ಇನ್ನು ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡಲಾಗುತ್ತಿದ್ದು, 2ಎ ಮೀಸಲಾತಿಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದವರಿಗೆ ಪೊಲೀಸರಿಂದ ತಡೆಯಲಾಗಿದೆ. ಬಸವ ಜಯಮೃತ್ಯುಂಜಯಶ್ರೀ, ಯತ್ನಾಳ್​ರನ್ನು ಪೊಲೀಸ್​ರು ವಶಕ್ಕೆ ಪಡೆಯಲು ಯತ್ನಿಸಿದರು. ಈ ವೇಳೆ ಬ್ಯಾರಿಕೇಡ್​ ಕಿತ್ತೊಗೆದ ಪ್ರತಿಭಟನಾಕಾರರು ಗದ್ದಲ ಮಾಡಿದರು. ಜೊತೆಗೆ ಪೊಲೀಸರೊಂದಿಗೆ ಪಂಚಮಸಾಲಿ ಹೋರಾಟಗಾರರು ಸಂಘರ್ಷಕ್ಕಿಳಿದರು. ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕೃತಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದರು.

ಇದನ್ನೂ ಓದಿ: ಜ.13ರಂದು ಸಿಎಂ ಬೊಮ್ಮಾಯಿ ನಿವಾಸ ಬಳಿ ಧರಣಿ ಮಾಡಲು ಪಂಚಮಸಾಲಿ‌ ಸಮುದಾಯಕ್ಕೆ ಕರೆ ಕೊಟ್ಟ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಹಲವಾರು ಗೊಂದಲಗಳಿವೆ: ವಚನಾನಂದ ಸ್ವಾಮೀಜಿ 

2ಎ ಮೀಸಲಾತಿಗೆ ವಿಚಾರವಾಗಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಬಳಿಯ ಮಠದಲ್ಲಿ ಮಾತನಾಡಿದ ಪಂಚಮಸಾಲಿ ಗುರುಪೀಠದಲ್ಲಿ ವಚನಾನಂದ ಸ್ವಾಮೀಜಿ, ಪಂಚಮಸಾಲಿ‌ ಮೀಸಲಾತಿ ವಿಚಾರ‌ ಹೀಗೆ ಆಗುತ್ತೆ ಎಂದು ಗೊತ್ತಿತ್ತು. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಹಲವಾರು ಗೊಂದಲಗಳಿವೆ. ಈ ಗೊಂದಲಕ್ಕೆ ಹರ ಜಾತ್ರೆಯಲ್ಲಿ ಸಿಎಂ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರ ಓಬಿಸಿ ಪಟ್ಟಿಗೆ ಸೇರ್ಪಡೆ ಬಗ್ಗೆ ದಾಖಲೆ ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Fri, 13 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ