2ಎ ಮೀಸಲಾತಿಗೆ ಪಂಚಮಸಾಲಿ ಸಮಾಜ ಆಗ್ರಹ: ಡಿ 10ಕ್ಕೆ ಬೆಳಗಾವಿ ಸುವರ್ಣಸೌಧಕ್ಕೆ 15,000 ಮಂದಿ ಮುತ್ತಿಗೆ: ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

Panchamasali protest for 2A reservation: ಡಿಸೆಂಬರ್ 10ರಂದು ಬೆಳಗ್ಗೆ 10ಗಂಟೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಪಂಚಮಸಾಲಿ ಸಮುದಾಯದವರು ಮುತ್ತಿಗೆ ಹಾಕಲಿದ್ದೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎನ್ನುವ ತಮ್ಮ ಮನವಿಗೆ ಸರ್ಕಾರ ಕಿವಿಗೊಡದಿದ್ದರಿಂದ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದಿದ್ದಾರೆ. ಡಿ. 10ರಂದು ರಾಜ್ಯಾದ್ಯಂತ 15,000 ಜನರು ಟ್ರ್ಯಾಕ್ಟರುಗಳಲ್ಲಿ ಬೆಳಗಾವಿಗೆ ಬಂದು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

2ಎ ಮೀಸಲಾತಿಗೆ ಪಂಚಮಸಾಲಿ ಸಮಾಜ ಆಗ್ರಹ: ಡಿ 10ಕ್ಕೆ ಬೆಳಗಾವಿ ಸುವರ್ಣಸೌಧಕ್ಕೆ 15,000 ಮಂದಿ ಮುತ್ತಿಗೆ: ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಬಸವ ಜಯಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Nov 27, 2024 | 6:48 PM

ಹಾವೇರಿ, ನವೆಂಬರ್ 27: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ. ವಿಧಾನಸಭಾ ಅಧಿವೇಶನದ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಯೋಜಿಸಲಾಗಿದೆ. ಡಿಸೆಂಬರ್ 10ರಂದು ಬೆಳಗ್ಗೆ 10ಗಂಟೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ಸಾವಿರಾರು ಜನರು ಸೇರಿ ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಕೀಲರ ಪರಿಷತ್ ನೇತೃತ್ವದಲ್ಲಿ ಅಂದು ನಡೆಯುವ ಹೋರಾಟದಲ್ಲಿ ಪಂಚಮಸಾಲಿ ಸಮುದಾದಯ 15,000 ಜನರು ಪಾಲ್ಗೊಳ್ಳಲಿದ್ದಾರೆ ಎಂದು ಸ್ವಾಮೀಜಿಗಳು ತಿಳಿಸಿದ್ದಾರೆ.

‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದೆವು. ಸಿಎಂ ಸಿದ್ದರಾಮಯ್ಯನವರಿಗೆ ಕೊಟ್ಟಿದ್ದ ಸಮಯ ಮುಗಿದಿದೆ. ಎಲ್ಲರೂ ಸೇರಿ ಮುತ್ತಿಗೆ ಹಾಕುವುದೆಂದು ತೀರ್ಮಾನಿಸಿದ್ದೇವೆ. ಯಾವುದೇ ಒತ್ತಡಕ್ಕೂ ಈಗ ಮಣಿಯುವುದಿಲ್ಲ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದು ಬಾಯಿತಪ್ಪಿ ಹೇಳಿದ್ದಷ್ಟೇ: ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ

ಲಿಂಗಾಯತರು ಮೀಸಲಾತಿ ಕೇಳಿದರೆ ನೀತಿ ಸಂಹಿತೆ ಉಲ್ಲಂಘನೆ ಎಂದನ್ನುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಎರಡು ತಾಸು ಸಭೆ ನಡೆಸಲಾಯಿತು. ಆದರೆ, ನೀತಿ ಸಂಹಿತೆ ಕಾರಣದಿಂದ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ ಎಂದು ಸಿಎಂ ಹೇಳ್ತಾರೆ. ಲಿಂಗಾಯತರು ವೋಟು ಹಾಕಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ. ಪಂಚಮಸಾಲಿಗಳು ಬಹುಸಂಖ್ಯಾತರು ಇವರಿಗೆ ಮೀಸಲಾತಿ ಕೊಟ್ಟರೆ ಮುಂದುವರಿಯುತ್ತಾರೆ ಎಂಬ ಕಾರಣಕ್ಕೆ ಕೊಟ್ಟಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪೊಲೀಸರ ಮೂಲಕ ಸರ್ಕಾರವು ಈ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೂರೂವರೆ ವರ್ಷದಿಂದ ನಡೆಯುತ್ತಿರುವ ಈ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಹಣ ನೀಡಿ ಮತ ಹಾಕೋರು, ಹಾಕಿಸಿಕೊಳ್ಳುವವರು ಇರುವವರೆಗೂ ಪ್ರಜಾಪ್ರಭುತ್ವ ಸರಿಯಾಗದು; ಬಸವರಾಜ ಹೊರಟ್ಟಿ

ರಾಜ್ಯಾದ್ಯಂತ ಇರುವ ಲಿಂಗಾಯತ ಸಮಾಜ ಬಾಂಧವರು, ಜನಪ್ರತಿನಿಧಿಗಳು ಈ ಹೋರಾಟದಲ್ಲಿ ಭಾಗಿಯಾಗಬೇಕು. ಪ್ರತೀ ಗ್ರಾಮದಿಂದಲೂ ರೊಟ್ಟಿ, ಬುತ್ತಿ ಕಟ್ಟಿಕೊಂಡು ಬನ್ನಿ ಎಂದು ಡಿ. 10ರ ಹೋರಾಟಕ್ಕೆ ಕೂಡಲ ಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿ ಕರೆ ನೀಡಿದ್ದಾರೆ.

(ವರದಿ: ಟಿವಿ9 ಹಾವೇರಿ ಪ್ರತಿನಿಧಿ)

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ