AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಕ್ಕೆ ಕನ್ನ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದವರು ಅಂದರ್‌

ಹಾವೇರಿ: ಈಗ ಎಲ್ಲಿ ನೋಡಿದ್ರು ಕೊರೊನಾ ಆರ್ಭಟ. ಕೊರೊನಾ ಹೊಡೆತಕ್ಕೆ ಬಡವರಂತೂ ಅಕ್ಷರಶಃ ನಲುಗಿ ಹೋಗಿದ್ದಾರೆ. ಆದ್ರೆ ಇಂಥ ಬಡವರಿಗಾಗಿ ಕೊಟ್ಟಿದ್ದ ಅನ್ನಭಾಗ್ಯದ ಅಕ್ಕಿಯನ್ನ ಕೆಲ ಖದೀಮರು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಹಾಕ್ಕೊಂಡು ಜೈಲು ಪಾಲಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. ಹೌದು ಬಡವರಿಗಾಗಿಯೇ ಸರ್ಕಾರ ಉಚಿತವಾಗಿ ಅನ್ನಭಾಗ್ಯ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಕೆಲ ರಾಕ್ಷಸರು ಬಡವರಿಗೆ ವಿತರಣೆ ಮಾಡದೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಅನ್ನಭಾಗ್ಯದ […]

ಅನ್ನಕ್ಕೆ ಕನ್ನ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದವರು ಅಂದರ್‌
Guru
Guru| Edited By: ಸಾಧು ಶ್ರೀನಾಥ್​|

Updated on:Jul 04, 2020 | 5:32 PM

Share

ಹಾವೇರಿ: ಈಗ ಎಲ್ಲಿ ನೋಡಿದ್ರು ಕೊರೊನಾ ಆರ್ಭಟ. ಕೊರೊನಾ ಹೊಡೆತಕ್ಕೆ ಬಡವರಂತೂ ಅಕ್ಷರಶಃ ನಲುಗಿ ಹೋಗಿದ್ದಾರೆ. ಆದ್ರೆ ಇಂಥ ಬಡವರಿಗಾಗಿ ಕೊಟ್ಟಿದ್ದ ಅನ್ನಭಾಗ್ಯದ ಅಕ್ಕಿಯನ್ನ ಕೆಲ ಖದೀಮರು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಹಾಕ್ಕೊಂಡು ಜೈಲು ಪಾಲಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ.

ಹೌದು ಬಡವರಿಗಾಗಿಯೇ ಸರ್ಕಾರ ಉಚಿತವಾಗಿ ಅನ್ನಭಾಗ್ಯ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಕೆಲ ರಾಕ್ಷಸರು ಬಡವರಿಗೆ ವಿತರಣೆ ಮಾಡದೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ.

ಅನ್ನಭಾಗ್ಯದ ಅಕ್ಕಿ ಸಾಗಿಸುತ್ತಿದ್ದ ಟ್ರಕ್‌ ಮೇಲೆ ದಾಳಿ ಹೀಗೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಕೆಲವರು ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅಕ್ಕಿ ಸಾಗಿಸುತ್ತಿದ್ದಾಗ, ಸಿಪಿಐ ಮಂಜುನಾಥ ಪಂಡಿತ್‌ ನೇತೃತ್ವದಲ್ಲಿ ಪೊಲೀಸರು ರೈಡ್‌ ಮಾಡಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹಾಗೇನೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ದಾವಣಗೆರೆ ಜಿಲ್ಲೆಯ ಹಿರೇಕಲ್ಮಠದ ರುದ್ರೇಶ, ಗೊಲ್ಲರಹಳ್ಳಿಯ ನಾಗರಾಜ ಎಂಬುವರನ್ನು ಬಂಧಿಸಿದ್ದಾರೆ.

50 ಕೆಜಿಯ 70 ಅಕ್ಕಿ ಮೂಟೆಗಳು ವಶಕ್ಕೆ ಇದಾದ ನಂತರ ಬಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಈ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿದ್ದಾರೆ. ಜೊತೆಗೆ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ವಾಹನ, ಐವತ್ತು ಕೆ.ಜಿ ತೂಕದ 70 ಪ್ಯಾಕೆಟ್ ಅಕ್ಕಿ ಮೂಟೆಗಳನ್ನು ಜಪ್ತಿ ಮಾಡಿದ್ದಾರೆ. -ಪ್ರಭುಗೌಡ ಪಾಟೀಲ

Published On - 5:32 pm, Sat, 4 July 20

Follow Us
Guru
Guru
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ