Private bus accident: ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರ ದುರ್ಮರಣ

| Updated By: ಸಾಧು ಶ್ರೀನಾಥ್​

Updated on: Feb 12, 2022 | 7:11 AM

Pune Bangalore High way: ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್ ಮೇಲೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕಾಕಗೆ ಈ ಸ್ಲೀಪರ್ ಬಸ್‌ ಹೊರಟಿತ್ತು. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ‌ ಕ್ರೇನ್ ಸಹಾಯದಿಂದ ಬಸ್ ಮೇಲೆತ್ತಿದ್ದಾರೆ.

Private bus accident: ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರ ದುರ್ಮರಣ
ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಇಬ್ಬರ ದುರ್ಮರಣ
Follow us on

ಹಾವೇರಿ: ಲಾರಿ ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ (bus accident) ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಹಾವೇರಿ (haveri) ತಾಲೂಕಿನ ದೇವಗಿರಿ ಗ್ರಾಮದ ಬಳಿ ನಡೆದಿದೆ. ಸೇತುವೆಯ ಮೇಲಿಂದ ಸರ್ವಿಸ್ ರಸ್ತೆಗೆ ಬಸ್ ಉರುಳಿಬಿದ್ದಿದೆ. ಖಾಸಗಿ ಬಸ್ಸಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ (death). 15 ಪ್ರಯಾಣಿಕರಿಗೆ ಗಾಯಗಳಾಗಿವೆ, ಅವರಿಗೆಲ್ಲಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್ ಮೇಲೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕಾಕಗೆ ಈ ಸ್ಲೀಪರ್ ಬಸ್‌ ಹೊರಟಿತ್ತು. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ‌ ಕ್ರೇನ್ ಸಹಾಯದಿಂದ ಬಸ್ ಮೇಲೆತ್ತಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿದ ಕುಟುಂಬಸ್ಥರು:
ಮದುವೆಯಾಗಿ ಸುಖ ಜೀವನ ಕಾಣಬೇಕಿದ್ದ ಯುವತಿಯೊಬ್ಬಳ ಜೀವನದಲ್ಲಿ ವಿಧಿ ತನ್ನ ಲೀಲೆ ತೋರಿದೆ. ಆ ಯುವತಿಯ ಸುಂದರ ಬದುಕನ್ನು ಮದುವೆ ರಿಸೆಪ್ಷನ್ ವೇಳೆಯೇ ಚಿವುಟಿಹಾಕಿದೆ. ತನ್ನ ಮದುವೆಯ ಆರತಕ್ಷತೆಯಲ್ಲಿ ಕುಸಿದು ಬಿದ್ದು ಮದುಮಗಳು ಅಸ್ವಸ್ಥಳಾಗಿದ್ದಾಳೆ. ತಕ್ಷಣ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿ, ಅಲ್ಲಿನ ವೈದ್ಯರು ಆಕೆಯನ್ನು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿರುವ ಮನಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ, ಕರುಣಾಜನಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Also Read:
ದುರ್ನಡತೆ: ಮುಳಬಾಗಿಲು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು

Also Read:
Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Published On - 7:07 am, Sat, 12 February 22