ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು

|

Updated on: Apr 12, 2023 | 2:12 PM

ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಏ.8 ರಂದು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಹಿರೆಕೇರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು
ನಟಿ ಶ್ರುತಿ
Follow us on

ಹಾವೇರಿ: ಬಿಜೆಪಿ (BJP) ನಾಯಕಿ ಶ್ರುತಿ (Actor Shruti) ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ (JDS) ಏ.8 ರಂದು ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿತ್ತು. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಜೆಡಿಎಸ್​ ಆರೋಪ ಮಾಡಿತ್ತು. ಅದರಂತೆ ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರು ದೂರು ನೀಡಿದ್ದರು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಕಲಂ 505(2) ರಡಿಯಲ್ಲಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಬ್ಬರದ ಭಾಷಣ ಮಾಡಿದ್ದ ನಟಿ ಶೃತಿ

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಪರ ಪ್ರಚಾರ ಮಾಡಲು ಶೃತಿಯವರು ಆಗಮಿಸಿದ್ದರು. ಈ ವೇಳೆ ಭಾಷಣ ಮಾಡಿದ್ದ ಅವರು ‘ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡುತ್ತೇನೆ ‘ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್​ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕಾದರೆ ಭಾರತೀಯ ಜನತಾ ಪಾರ್ಟಿಗೆ ಮತ ಹಾಕಿ ಎಂದಿದ್ದರು. ಇದೇ ಹೇಳಿಕೆ ಸಂಬಂಧ ಇದೀಗ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲಂ 505(2) ರಡಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ