ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹಾವೇರಿ: ಬಂಜಾರ್ ಸಮಾಜದ(Banjara Community) ಮೀಸಲಾತಿ (Reservation) ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇಂದು ಬಂಜಾರ ಸಮಾಜದ ಸ್ವಾಮಿಜಿಯೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಅಂಬೇಡ್ಕರ್ ಪುತ್ಥಳಿ ಮುಂದೆ ಆತ್ಮಹತ್ಯಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು.. ಒಳಮೀಸಲಾತಿ ವಿರುದ್ಧ ಮಂಗಳವಾರ ಶಿಗ್ಗಾಂವಿಯಲ್ಲಿ ತಹಶೀಲ್ದಾರ್‌ಗೆ ಮನವಿ ನೀಡಿದ ಬಳಿಕ ಬಂಜಾರ ಸಮುದಾಯದ ಸ್ವಾಮೀಜಿ ತಿಪ್ಪೇಸ್ವಾಮಿ ಎಂಬುವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಸಮೀಪವೇ ನೇಣುಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಲ್ಲೇ ಇದ್ದ ಜನ ಸ್ವಾಮೀಜಿಯನ್ನು ರಕ್ಷಣೆ ಮಾಡಿ, ಮುಂದಾಗಬಹುದಾದ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ: BS Yediyurappa: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ
ಇನ್ನು ಇದೇ ವೇಳೆ ಬಂಜಾಯ ಸಮುದಾಯದ ಮುಖಂಡರು, ಒಳಮೀಸಲಾತಿಗೆ ಆಕ್ರೋಶ ಹೊರಹಾಕಿದ್ದು, ಸರ್ಕಾರ ಆದಷ್ಟು ಬೇಗ ತಮಗೆ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಎಪ್ರಿಲ್ 10 ರಂದು ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಗೂಡಿಗ, ಕೈ ಹಾಕಿದ ಸರ್ಕಾರ ಹಲವು ವರ್ಷಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಿದೆ. ಸದಾಶಿವ ವರದಿ ಜಾರಿಗಾಗಿ ದಶಕಗಳ ಕಾಲ ಹೋರಾಟ ನಡೆಸಿದ್ದ ಮಾದಿಗ ದಂಡೋರ ಸಮಿತಿ ಒಳಮೀಸಲಾತಿ ನಿರ್ಧಾರವನ್ನು ಸ್ವಾಗತಿಸಿದೆ. ಮಾದಿಗ ಸಮುದಾಯದವರು ಒಳಮೀಸಲಾತಿ ಜಾರಿಯಿಂದ ತಮಗೆ ನ್ಯಾಯಸಿಗಲಿದೆ ಎಂದಯ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಆದ್ರೆ, ಬಂಜಾರ ಸಮುದಾಯ ಮಾತ್ರ ಒಳಮೀಸಲಾತಿಯಿಂದ ತಮಗೆ ಅನ್ಯಾಯವಾಗಲಿದೆ ಎಂದು ಹೋರಾಟ ನಡೆಸುತ್ತಿದ್ದಾರೆ. ಇತ್ತ ಬಿಜೆಪಿಯಲ್ಲಿರೋ ಬಂಜಾರ ಸಮುದಾಯದ ನಾಯಕರು, ಒಳಮೀಸಲಾತಿಯಿಂದ ಯಾವುದೇ ಅನ್ಯಾಯವಾಗಲ್ಲ. ಈ ಪ್ರತಿಭಟನೆ ಹಿಂದೆ ಕಾಂಗ್ರೆಸ್‌ನ ಚಿತಾವಣೆ ಇದೆ. ಚುನಾವಣೆ ಹೊತ್ತಲ್ಲಿ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಒಟ್ಟಾರೆ ಸರ್ಕಾರದ ಅವಧಿ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸರ್ಕಾರ ಇದನ್ನು ಯಾವ ರೀತಿ ಬಗೆಹರಿಸುತ್ತೋ ಎಂದು ಕಾದುನೋಡಬೇಕಿದೆ.
ಇನ್ನಷ್ಟು ಹಾವೇರಿ ಜಿಲ್ಲಾಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:20 am, Wed, 5 April 23