AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ: ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ಷೇಪ

ಕರ್ನಾಟಕದ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಜೊತೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂಬ ಕನ್ನಡ ಸಿನಿಮಾದ ಟಿಕೆಟ್‌ಗಳನ್ನು ₹150 ದರದಲ್ಲಿ ಮಾರಾಟ ಮಾಡಲು ಆಹಾರ ಇಲಾಖೆ ಆದೇಶ ಹೊರಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಆ ಕುರಿತ ಮಾಹಿತಿ ಇಲ್ಲಿದೆ.

ಪಡಿತರ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಟಿಕೆಟ್​​ ಮಾರಾಟ: ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ಷೇಪ
ಪಡಿತರ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಟಿಕೆಟ್​​ ಮಾರಾಟ
ಪ್ರಸನ್ನ ಹೆಗಡೆ
|

Updated on:Jul 27, 2026 | 2:58 PM

Share

ಹಾವೇರಿ, ಜುಲೈ 27: ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯದ ವಿತರಣೆ ಜೊತೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟಕ್ಕೆ ಆಹಾರ ಇಲಾಖೆ ಸೂಚನೆ ನೀಡಿದೆ. ಒಂದು ನ್ಯಾಯಬೆಲೆ ಅಂಗಡಿಗೆ 50 ರಿಂದ 100 ಟಿಕೆಟ್ ವಿತರಣೆ ಮಾಡಲಾಗಿದ್ದು, ಆಹಾರ ಇಲಾಖೆ ಒಂದು ಟಿಕೆಟ್​​​ಗೆ 150 ರೂಪಾಯಿ ನಿಗದಿ ಮಾಡಿದೆ. ಸಾಮಾಜಿಕ ಕಾಳಜಿ ಹಾಗೂ ಗ್ರಾಮೀಣ ಹಿನ್ನೆಲೆಯನ್ನು ಹೊಂದಿರುವ ಈ ಕನ್ನಡ ಚಲನಚಿತ್ರ ಜುಲೈ 31, 2026ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ರಾಜ್ಯ ಸರ್ಕಾರದ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಜಾಗೃತಿ ಗೊಳಿಸುವ ಸಂಬಂಧ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂಬ ಚಲನಚಿತ್ರವನ್ನು ಮೊದಲಬಾರಿಗೆ ಕರ್ನಾಟಕ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕುಟುಂಬ ವರ್ಗದವರಿಗೆ ಹಾಗೂ ರಾಜ್ಯದ ಕಾರ್ಡುದಾರರಿಗೆ ಪ್ರದರ್ಶಿಸುವ ಸಲುವಾಗಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಚಲನಚಿತ್ರದ ಪ್ರದರ್ಶನಕ್ಕೆ ಅನುವು ಮಾಡಿಕೊಡಲು ಕೋರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆಯುಕ್ತರು ಅದಾಗಲೇ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ

ಕುಮಾರ್ ಬಂಗಾರಪ್ಪ, ರಾಗಿಣಿ ನಟನೆಯ ಸಿನಿಮಾ

ಈ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಕುಮಾರ್ ಬಂಗಾರಪ್ಪ ಮತ್ತು ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ, ಬಿ. ರಾಮಮೂರ್ತಿ ಅವರ ಕಥೆಗೆ ಸಾತ್ವಿಕ್ ಪವನ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಸರ್ಕಾರದ ಪಡಿತರ ವಿತರಣಾ ವ್ಯವಸ್ಥೆ (Ration System) ಮತ್ತು ನ್ಯಾಯಬೆಲೆ ಅಂಗಡಿಗಳ ಮಹತ್ವ ಹಾಗೂ ಅದರ ಸುತ್ತ ನಡೆಯುವ ಸಾಮಾಜಿಕ ವಿದ್ಯಮಾನಗಳನ್ನು ಆಧರಿಸಿದ ಕತೆಯನ್ನು ಈ ಸಿನಿಮಾ ಹೊಂದಿದೆ ಎನ್ನಲಾಗಿದೆ.

ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ರೋಶ

ಪಡಿತರ ಅಂಗಡಿಗಳಲ್ಲಿ ಸಿನಿಮಾ ಟಿಕೆಟ್​​ ಮಾರಾಟ ಸಂಬಂಧ ಆಹಾರ ಇಲಾಖೆಯ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ನೋಡಲು ಇಷ್ಟ ಇದ್ದವರು ಥಿಯೇಟರ್​ಗೆ ಹೋಗಿ ನೋಡ್ತಾರೆ. ನೋಡಲು ಇಷ್ಟ ಇಲ್ಲದವರು ಚಿತ್ರಮಂದಿರಗಳಿಗೆ ಹೋಗುವುದಿಲ್ಲ. ಹೀಗಾಗಿ ಆಹಾರ ಇಲಾಖೆ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:58 pm, Mon, 27 July 26

Follow Us
ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್
ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ