ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ, ಆದ್ರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ; ಸಿಎಂ ಬೊಮ್ಮಾಯಿ

ಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪದವಿ ಕಾಲೇಜು ಮಾಡುತ್ತೇನೆ. ಗ್ರಾಮ ಪಂಚಾಯತಿಗೆ ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುವೆ. ಜಾತಿಭೇದವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಕ್ಯಾಬಿನೆಟ್​ನಲ್ಲಿ ಪ್ರತಿಭಾವಂತರಿದ್ದಾರೆ.

ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ, ಆದ್ರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ; ಸಿಎಂ ಬೊಮ್ಮಾಯಿ
ಹಾವೇರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ
Follow us
TV9 Web
| Updated By: sandhya thejappa

Updated on:Sep 01, 2021 | 1:45 PM

ಹಾವೇರಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಎರಡು ದಿನ ಹಾವೇರಿ ಮತ್ತು ಹುಬ್ಬಳ್ಳಿಗೆ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ನೂತನ ಕಟ್ಟಡಗಳ ಉದ್ಘಾಟನೆ ಕಾರ್ಯ ನೆರವೇರಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ. ಆದರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ. ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧನಾಗಿದ್ದೇನೆ. ಕ್ಷೇತ್ರದ ಬಗೆಗಿನ ನನ್ನ ಕನಸು ನನಸಾಗುವ ಕಾಲ ಬಂದಿದೆ. ಶಿಗ್ಗಾಂವಿ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪದವಿ ಕಾಲೇಜು ಮಾಡುತ್ತೇನೆ. ಗ್ರಾಮ ಪಂಚಾಯತಿಗೆ ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುವೆ. ಜಾತಿಭೇದವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಕ್ಯಾಬಿನೆಟ್​ನಲ್ಲಿ ಪ್ರತಿಭಾವಂತರಿದ್ದಾರೆ. ಅವರೆಲ್ಲರ ಕಾರ್ಯಕ್ಷಮತೆ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ. ಹೊರಗಡೆ ನಾನು ಮುಖ್ಯಮಂತ್ರಿ ಆಗಿರಬಹುದು. ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಅಂತ ತಡಸ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು. ಸಿಎಂ ಬೊಮ್ಮಾಯಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಸಾಥ್ ನೀಡಿದರು.

ರೈತರ ಆದಾಯ ಎರಡು ಪಟ್ಟು ಹೆಚ್ಚಿಸುವ ಕೆಲಸ ಮಾಡುತ್ತಿದ್ದೇನೆ. ಭೂಮಿಯ ಪ್ರಮಾಣ ಕಡಿಮೆ ಆಗುತ್ತಿದೆ. ರೈತರ‌‌ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು. ನಾನು ಸಿಎಂ ಆಗುತ್ತಿದ್ದಂತೆ ರೈತರ ಮಕ್ಕಳಿಗೆ ಶಿಷ್ಯವೇತನ ಕೊಡಬೇಕು ಅಂತಾ ನಿರ್ಧಾರ ಮಾಡಿದೆ. ಈಡಿ ದೇಶದಲ್ಲಿ ಇಂಥಾ ಯೋಜನೆ ಇರುವುದು ಕರ್ನಾಟಕದಲ್ಲಿ ಮಾತ್ರ. ರೈತರಿಗೆ ಇದು ಮಾತ್ರವಲ್ಲದೆ ಬೇರೆ ಬೇರೆ ರೀತಿಯ ತರಬೇತಿ ಕೊಟ್ಟು ಅವರ ಅಭಿವೃದ್ಧಿ ಆಗುವಂತೆ ಮಾಡುತ್ತೇನೆ. ಗ್ರಾಮೀಣ ಪ್ರದೇಶಗಳಲ್ಲಿ ಆರ್​ಸಿಸಿ ಮನೆಗಳು ನೌಕರಿ ಮಾಡುವವರದ್ದು ಮಾತ್ರ ಆಗಿದೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ. ಅಧಿಕಾರಿಗಳು ಬಹಳ ದುಡ್ಡು ಆಗುತ್ತೆ ಅಂದರು. ಅದು ಬಡವರ ದುಡ್ಡು ಅವರಿಗೆ ಕೊಡಲು ನಿಮಗೇನು ಕಷ್ಟ ಅಂದೆ. ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಬರುವ‌ ದಿನಗಳಲ್ಲಿ ಮಾಡಿಕೊಡುತ್ತೇನೆ ಅಂತ ಬೊಮ್ಮಾಯಿ ಹೇಳಿದರು.

ಕೆರೆಗಳಿಗೆ ನೀರು ತುಂಬಿಸುವ ನನ್ನ ಕನಸು ನನಸಾಗಿದೆ ಅಂತ ಬಾಡ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು 37 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಪ್ರಯತ್ನ ಮಾಡುತ್ತಿದ್ದೇನೆ. ಈ ಭಾಗದ ಸಾಮಾನ್ಯರಿಗೂ ಸುಲಭವಾಗಿ ಮರಳು ಸಿಗಬೇಕು ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ವೈರಲ್ ಜ್ವರ, ಒಂದು ವಾರದಲ್ಲಿ 32 ಮಕ್ಕಳು ಸಾವು; ಇದು ಡೆಂಗ್ಯೂ ಎಂದ ಅಧಿಕಾರಿಗಳು

ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ 4 ಬಸ್​ಗಳಿಂದ 580 ಲೀಟರ್​ ಡೀಸೆಲ್ ಕಳ್ಳತನ

(responsibility of entire state rests with me but I will never forget my Hometown said Basavaraj Bommai in Haveri)

Published On - 11:47 am, Wed, 1 September 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ