ಮೇ ತಿಂಗಳಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನ, ಲಾಂಛನ ಧ್ಯೇಯವಾಕ್ಯ ಆಹ್ವಾನಿಸಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ

ಲಾಂಛನ ಹಾಗೂ ಧ್ಯೇಯವಾಕ್ಯವು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಜನಪದ, ಕನ್ನಡ, ಕನ್ನಡಿಗ ಹಾಗೂ ಕರ್ನಾಟಕವನ್ನು ಬಿಂಬಿಸುವಂತೆ ಇರಬೇಕು ಎಂದು ಸಾಹಿತ್ಯ ಪರಿಷತ್ ಕೋರಿದೆ.

ಮೇ ತಿಂಗಳಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನ, ಲಾಂಛನ ಧ್ಯೇಯವಾಕ್ಯ ಆಹ್ವಾನಿಸಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 08, 2022 | 10:08 AM

ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ ತಿಂಗಳಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (Sahitya Parishat) ನಿರ್ಧರಿಸಿದೆ. ಸಮ್ಮೇಳನಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಪರಿಷತ್ತು ಅಧ್ಯಕ್ಷ ಡಾಮಹೇಶ ಜೋಶಿ (Dr Mahesh Joshi) ಹೇಳಿದ್ದಾರೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಹಾಗೂ ಧ್ಯೇಯವಾಕ್ಯವನ್ನು ಸಾರ್ವಜನಿಕರು ಹಾಗೂ ಕಲಾವಿದರಿಂದ ಆಹ್ವಾನಿಸಲಾಗಿದೆ. ಲಾಂಛನ ಹಾಗೂ ಧ್ಯೇಯವಾಕ್ಯವು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಜನಪದ, ಕನ್ನಡ, ಕನ್ನಡಿಗ ಹಾಗೂ ಕರ್ನಾಟಕವನ್ನು ಬಿಂಬಿಸುವಂತೆ ಇರಬೇಕು. ಇದರ ಜೊತೆಗೆ ರಾಜ್ಯದ ಜನಸಮುದಾಯದ ಭಾವನೆಗಳು ಹಾಗೂ ಹಾವೇರಿ ಜಿಲ್ಲೆಯ ಪ್ರಾಮುಖ್ಯತೆ ಸಾರುವ ಅಂಶಗಳನ್ನು ಒಳಗೊಂಡಿರಬೇಕು. ಆಯ್ಕೆಯಾದ ಲಾಂಛನ ಹಾಗೂ ಧ್ಯೇಯವಾಕ್ಯ ರಚಿಸಿದವರಿಗೆ ಸೂಕ್ತ ಗೌರವ ನೀಡಲಾಗುತ್ತದೆ ಎಂದು ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನದ ಲಾಂಛನ ಹಾಗೂ ಧ್ಯೇಯವಾಕ್ಯ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನ. ಲಾಂಛನ ಹಾಗೂ ಧ್ಯೇಯವಾಕ್ಯಗಳನ್ನು ಕಳಿಸಬೇಕಾದ ವಿಳಾಸ: ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018, ಇ-ಮೇಲ್‌ kannadaparishattu@gmail.com ವಿಳಾಸಕ್ಕೆ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

2021ರ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನವವನ್ನು ಕೊವಿಡ್-19ರ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಮುಂದೂಡಲಾಗಿತ್ತು. ಹಾವೇರಿಯಲ್ಲಿ ಈ ಬಾರಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಸಮ್ಮೇಳಕ್ಕೆ ಸರ್ಕಾರವು ₹ 20 ಕೋಟಿ ಅನುದಾನ ಘೋಷಿಸಿದೆ. ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಸಮ್ಮೇಳನ ನಡೆಯಲಿದೆ. ಸರ್ಕಾರ ಸಾಕಷ್ಟು ಆರ್ಥಿಕ ನೆರವು ಘೋಷಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸ್ವತಃ ನಾನು ಹಾವೇರಿ ಜಿಲ್ಲೆಗೆ ಸೇರಿದವರು. ಅಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಲಾಗುವುದು. ಸಾಹಿತಿಗಳಾದ ಡಾ ಸಿದ್ಧಲಿಂಗಯ್ಯ, ಚೆನ್ನವೀರ ಕಣವಿ ಹಾಗೂ ಪ್ರೊ ಚಂದ್ರಶೇಖರ ಪಾಟೀಲ ಅವರ ಸಾಹಿತ್ಯ ಪ್ರಚಾರಕ್ಕೆ ಸಂಬಂಧಿಸಿದಂತೆ ಪರಿಷತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಬಗ್ಗೆಯೂ ಘೋಷಣೆಯಾಗಿರುವುದು ಸಂತಸ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ₹20 ಕೋಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ಮಾಡಿದ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ತಮ್ಮ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹ 20 ಕೋಟಿ ಅನುದಾನ ಘೋಷಿಸಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿರುವ ಕರ್ನಾಟಕ ಕಲಾಗ್ರಾಮದ ಅಭಿವೃದ್ಧಿ, ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ, ಯೋಗಿ ನಾರಾಯಣ ಯತೀಂದ್ರರ ಜಯಂತಿ ಆಚರಣೆಯನ್ನು ಘೋಷಿಸಿದರು. ಸಾಹಿತಿಗಳಾದ ಡಾ. ಸಿದ್ಧಲಿಂಗಯ್ಯ, ಎಂ. ಚಿದಾನಂದಮೂರ್ತಿ, ಚಂದ್ರಶೇಖರ ಪಾಟೀಲ ಹಾಗೂ ಚನ್ನವೀರ ಕಣವಿ ಅವರ ಅಮೂಲ್ಯ ಸಾಹಿತ್ಯ ಕೃತಿಗಳನ್ನು ಉಳಿಸಲು ವಿಶೇಷ ಯೋಜನೆ ರೂಪಿಸಲಾಗುವುದು. ಹಾವೇರಿಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ಡಾ ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ ನಿರ್ಮಾಣ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಕಾಸರಗೋಡಿನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಹಾಗೂ ಅಕ್ಕಲಕೋಟೆಯಲ್ಲಿ ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ಮತ್ತು ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಬೊಮ್ಮಾಯಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕೊರೊನಾದಿಂದ ಮುಂದೂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲೇ: ಸಿಎಂ ಜೊತೆ ಚರ್ಚಿಸುವೆ ಎಂದ ಸಚಿವ ಪಾಟೀಲ್

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | 86 ನೇ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡರ ಟೀಕೆ ಎಷ್ಟು ಸರಿ?

Published On - 10:06 am, Tue, 8 March 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್