ಸವಣೂರು: ವರ್ಗಾವಣೆಯಾದ ಶಿಕ್ಷಕರಿಗೆ ಮೆರವಣಿಗೆ ಮೂಲಕ ಬೀಳ್ಕೊಟ್ಟ ವಿದ್ಯಾರ್ಥಿಗಳು
ಸವಣೂರು ತಾಲೂಕಿನ ಮಾದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಬ್ಬರನ್ನು ಮೆರವಣಿಗೆ ಮೂಲಕ ಬಿಳ್ಕೊಟ್ಟಿದ್ದಾರೆ.
ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಎನ್.ಆರ್.ರಮೇಶ ಹಾಗೂ ಈಶ್ವರ ತಿಮ್ಮನಗೌಡ ಎಂಬ ಶಿಕ್ಷಕರ ವರ್ಗಾವಣೆಗೆ ಶಾಲಾ ಮಕ್ಕಳು ಅಷ್ಟೇ ಅಲ್ಲದೇ ಗ್ರಾಮದ ಜನರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರ ಮನಗೆದ್ದಿದ್ದ ಶಿಕ್ಷಕರಿಬ್ಬರು ವರ್ಗಾವಣೆ ಆಗಿದ್ದರಿಂದ ಶಿಕ್ಷಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮಾಡಲಾಗಿದೆ. ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಸೇರಿ ಶಿಕ್ಷಕರಿಬ್ಬರನ್ನು ಮೆರವಣೆಗೆಯ ಮೂಲಕ ಬೀಳ್ಕೊಟ್ಟಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos