ಹಾವೇರಿ: ಬಿಸಿ ಊಟದಲ್ಲಿ ಹಲ್ಲಿ; 81 ಮಕ್ಕಳು ಅಸ್ವಸ್ಥ, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ
ತಲೆನೋವು, ಹೊಟ್ಟೆನೋವಿನಿಂದ ಐದು ಮಕ್ಕಳು ಬಳಲುತ್ತಿದ್ದಾರೆ. ಐದು ಮಕ್ಕಳನ್ನು ಹೊರತುಪಡಿಸಿ ಎಪ್ಪತ್ತಾರು ಮಕ್ಕಳ ಆರೋಗ್ಯ ಸುಧಾರಿಸಿಕೊಂಡಿದೆ ಎಂದು ತಿಳಿದುಬಂದಿದೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ: ಮಧ್ಯಾಹ್ನ ಬಿಸಿಯೂಟ ಸೇವಿಸಿ 81 ಮಕ್ಕಳು ಅಸ್ವಸ್ಥರಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿಯಿಂದ 81 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಸ್ವಸ್ಥಗೊಂಡ ಮಕ್ಕಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಬಾಲಕನೊಬ್ಬನ ತಟ್ಟೆಗೆ ಬಡಿಸಿದ ಊಟದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗ್ತಿದ್ದಂತೆ ಗಾಬರಿಗೊಂಡು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ತಲೆನೋವು, ಹೊಟ್ಟೆನೋವಿನಿಂದ ಐದು ಮಕ್ಕಳು ಬಳಲುತ್ತಿದ್ದಾರೆ. ಐದು ಮಕ್ಕಳನ್ನು ಹೊರತುಪಡಿಸಿ ಎಪ್ಪತ್ತಾರು ಮಕ್ಕಳ ಆರೋಗ್ಯ ಸುಧಾರಿಸಿಕೊಂಡಿದೆ ಎಂದು ತಿಳಿದುಬಂದಿದೆ. ಅಸ್ವಸ್ಥ ಮಕ್ಕಳಿಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಕೊಡುವ ಬಿಸಿ ಊಟದ ಆಹಾರಕ್ಕೆ ಕನ್ನ.. ಬೀದರ್ನ ಶಿಕ್ಷಕಿ ಮೇಲೆ ಗಂಭೀರ ಆರೋಪ
ಇದನ್ನೂ ಓದಿ: ಮೊಟ್ಟೆ ಸೇವಿಸದ ಮಕ್ಕಳಿಗೆ ಬಿಸಿಯೂಟದಲ್ಲಿ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ನೀಡಲು ಸರ್ಕಾರ ನಿರ್ಧಾರ