ಬಿ.ಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ; ಮೂರು ತಿಂಗಳ ಗರ್ಭಿಣಿ ಆದ ಯುವತಿ, ಕೇಸ್ ದಾಖಲು
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಹಾವೇರಿ: ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಎಂದು ತ್ರಿಮೂರ್ತಿಗಳನ್ನು ನಾವು ಗುರುಗಳಿಗೆ ಹೋಲಿಸುತ್ತೇವೆ. ಆದ್ರೆ ಇಲ್ಲೊಬ್ಬ ಪ್ರಾಧ್ಯಾಪಕ ಗುರುವಿನ ಮೇಲಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ. ಅಲ್ಲದೆ ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರಂತೆ. ಇದನ್ನೂ ಓದಿ: Karnataka vs Uttar Pradesh: ಯುಪಿ ಬೌಲಿಂಗ್ ಬಿರುಗಾಳಿಗೆ ಕರ್ನಾಟಕ ತತ್ತರ: ಮನೀಶ್ ಪಡೆ ಕೇವಲ 253 ರನ್ಗೆ ಆಲೌಟ್
ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಇವರು ಎಸಗಿದ ಕೃತ್ಯದಿಂದ ಇಪ್ಪತ್ತೆರಡು ವರ್ಷದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ವಿದ್ಯಾರ್ಥಿನಿಯಿಂದ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506 ಅಡಿ ದೂರು ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:18 am, Tue, 7 June 22