ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದವ ಯಾರು? ಪತ್ತೆ ಮಾಡಿದ ಬ್ಯಾಡಗಿ ಬಿಜೆಪಿ ಮುಖಂಡರು!

pro Pak slogan In vidhana soudha: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಘಟನೆಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ‌ ಕೈಗೊಂಡಿದ್ದಾರೆ. ಸತ್ಯಾತ್ಯತೆ ತಿಳಿಯಲು ಎಫ್‌ಎಸ್‌ಎಲ್‌ನವರು ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಪಾಕ್​ ಪರ ಘೋಷಣೆ ಕೂಗಿದ್ದಾನೆ ಎನ್ನಲಾದ ವ್ಯಕ್ತಿ ಯಾರು ಎನ್ನುವುದನ್ನು ಬಿಜೆಪಿ ಮುಖಂಡರು ಮತ್ತೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದವ ಯಾರು? ಪತ್ತೆ ಮಾಡಿದ ಬ್ಯಾಡಗಿ ಬಿಜೆಪಿ ಮುಖಂಡರು!
Follow us
| Updated By: ರಮೇಶ್ ಬಿ. ಜವಳಗೇರಾ

Updated on:Feb 28, 2024 | 2:50 PM

ಹಾವೇರಿ, (ಫೆಬ್ರವರಿ 28): ವಿಧಾನಸೌಧದ (vidhana soudha)ಆವರಣದಲ್ಲಿ ನಿನ್ನೆ(ಫೆಬ್ರವರಿ 28) ಪಾಕ್ ಪರ ಘೋಷಣೆ (pro Pak slogan) ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ‌ ಕೈಗೊಂಡಿದ್ದಾರೆ. ಸತ್ಯಾತ್ಯತೆ ತಿಳಿಯಲು ಎಫ್‌ಎಸ್‌ಎಲ್‌ನವರು ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ‌ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರು ಬ್ಯಾಡಗಿಯ ಮಹಮದ್ ಶಫಿ ನಾಸೀಪುಡಿ ಎಂದು ಬ್ಯಾಡಗಿ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಘಟನೆ ಖಂಡಿಸಿ ಇಂದು(ಫೆಬ್ರವರಿ 28) ಬ್ಯಾಡಗಿ ಬಿಜೆಪಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪಾಕ್ ಪರ ಘೋಷಣೆ ಕೂಗಿದ ವ್ಯಕ್ತಿ ಹೆಸರು ಬಹಿರಂಗಪಡಿಸಿದ್ದಾರೆ. ನಿನ್ನೆ ನಾಸೀರ್ ಹುಸೇನ್ (Nasir Husein) ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಮಹಮದ್ ಶಫಿ ನಾಸೀಪುಡಿ. ಈತ ಬ್ಯಾಡಗಿ ಮೆಣಸಿನಕಾಯಿ ವ್ಯಾಪಾರಸ್ಥ. ಈ ಬಗ್ಗೆ ಬ್ಯಾಡಗಿ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡ ಸುರೇಶ್ ಉದ್ಯೋಗಣ್ಣವರ ಎಂಬುವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದವರಿಗೆ ಕೆಟ್ಟ ಪದ ಬೈದ ಯತ್ನಾಳ್: ಸ್ಪೀಕರ್ ಖಾದರ್ ಬೆಂಬಲ!

ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನಕ್ಕೆ ಹೋಗಿ ಇರಲಿ. ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಶಫಿ ನಾಸೀಪುಡಿ ಎಂಬ ವ್ಯಕ್ತಿಯನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದರು.

ಗೃಹ ಸಚಿವರು ಹೇಳಿದ್ದೇನು ?

ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಜಯ ಸಾಧಿಸಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ಸಂಭ್ರಮಾಚರಣೆ ವೇಳೆ ವಿಧಾನಸೌಧದ ಆವರಣದಲ್ಲಿ ವಿಜೇತ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರ ಅಭಿಮಾನಿಗಳು ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಾಬೀತಾಗಬೇಕು. ಇದಕ್ಕಾಗಿ ವಿಡಿಯೊವನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಕ್ರಮೆವನ್ನು ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಾದ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ವಿಧಾನಸೌಧದ ಆವರಣದಲ್ಲಿ ನಿನ್ನೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ‌ ಕೈಗೊಂಡಿದ್ದಾರೆ. ಸತ್ಯಾತ್ಯತೆ ತಿಳಿಯಲು ಎಫ್‌ಎಸ್‌ಎಲ್‌ನವರು ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ‌ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:48 pm, Wed, 28 February 24

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ